Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾರ್ಯಕರ್ತರ ಕಡೆಗಣನೆ ಬಿಜೆಪಿ ಸೋಲಿಗೆ...

ಕಾರ್ಯಕರ್ತರ ಕಡೆಗಣನೆ ಬಿಜೆಪಿ ಸೋಲಿಗೆ ಕಾರಣ: ಮಾಜಿ ಸಚಿವ ಸೊಗಡು ಶಿವಣ್ಣ

ವಾರ್ತಾಭಾರತಿವಾರ್ತಾಭಾರತಿ7 Nov 2018 5:08 PM IST
share
ಕಾರ್ಯಕರ್ತರ ಕಡೆಗಣನೆ ಬಿಜೆಪಿ ಸೋಲಿಗೆ ಕಾರಣ: ಮಾಜಿ ಸಚಿವ ಸೊಗಡು ಶಿವಣ್ಣ

ತುಮಕೂರು,ನ.7: ಪಂಚ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ನಿರ್ಲಕ್ಷಿಸಿದ್ದೇ ಅಭ್ಯರ್ಥಿಗಳ ಸೋಲಿಗೆ ಕಾರಣ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಗಂಭೀರ ಆರೋಪ ಮಾಡಿದರು.

ನಗರದ ಪ್ರವಾಸಿ ಮಂದಿರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಬೇಕಿತ್ತು. ಪಕ್ಷವನ್ನು ವಲಸಿಗರ ಕೈಗೆ ಗುತ್ತಿಗೆ ಕೊಡದೆ ಮೂಲ ಕಾರ್ಯಕರ್ತರಿಗೆ ಕೊಟ್ಟಿದ್ದರೆ ಇಂದು ಈ ಸ್ಥಿತಿ ಬರುತ್ತಿರಲಿಲ್ಲ ಎಂದರು.

ಈ ಉಪಚುನಾವಣೆ ಬಹಳ ಬೇಸರ ತಂದಿದ್ದು, ಕೇಂದ್ರ ಸಚಿವರಾದ ಅನಂತಕುಮಾರ್, ಸದಾನಂದಗೌಡ ಸೇರಿದಂತೆ ಹಲವರ ಸಲಹೆ ಜೊತೆಗೆ ಎಲ್ಲರೂ ಒಗ್ಗೂಡಿ ಚುನಾವಣೆ ಎದುರಿಸಬೇಕಿತ್ತು. ವಲಸಿಗರಿಗೆ ಮಣೆ ಹಾಕದೆ ಮೂಲ ಬಿಜೆಪಿ ಕಾರ್ಯಕರ್ತರಿಗೆ ಪಕ್ಷದ ಟಿಕೆಟ್ ನೀಡಬೇಕಿತ್ತು ಎಂದು ಹೇಳಿದರು.

ಈ ಉಪಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಸರಿಯಾಗಿ ಬಳಿಕೊಂಡಿಲ್ಲ ಎಂಬ ನೋವು ನನಗಿದೆ. ಅದೇ ರೀತಿ ಬಿಜೆಪಿ ಮಾಜಿ ಉಪಾಧ್ಯಕ್ಷ ಭಾನುಪ್ರಕಾಶ್ ಕೂಡ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷದ ಕಾರ್ಯಕರ್ತರೊಂದಿಗೆ ಪ್ರೀತಿ, ವಿಶ್ವಾಸ ಎಂಬುದು ನಾಯಕತ್ವ ವಹಿಸಿಕೊಂಡವರಿಗೆ ಇರಬೇಕು. ಇದು ಹೀಗೆ ಮುಂದುವರೆದರೆ ಮುಂದಿನ ಲೋಕಸಭಾ ಚುನಾವಣೆಗೆ ಹಿನ್ನಡೆಯಾಗಬಹುದು ಎಂದು ಎಚ್ಚರಿಸಿದರು. ಪಕ್ಷದ ರಾಜ್ಯ ನಾಯಕರು ಈ ಉಪಚುನಾವಣೆಯ ಫಲಿತಾಂಶದ ನಂತರವಾದರೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡುವ ಮೂಲಕ ಮುಂದಿನ ಲೋಕಸಭಾ ಚುನಾವಣೆಗೆ ಸಜ್ಜಾಗಬೇಕು ಎಂದು ಸಲಹೆ ನೀಡಿದರು.

ನಮ್ಮ ಪಕ್ಷ ಕುಟುಂಬ ಪಕ್ಷವಲ್ಲ, ಕಾರ್ಯಕರ್ತರ ಪಕ್ಷ. ಕಾರ್ಯಕರ್ತರೇ ನಮ್ಮ ನಾಯಕರು. ಈ ಉಪಚುನಾವಣೆ ಸೋಲಿನಿಂದ ನಮ್ಮ ಮತದಾರರ ಶಕ್ತಿ ಕುಗ್ಗಿಲ್ಲ, ಶಕ್ತಿ ವಿರಾಟವಾಗಿದೆ. ಹಿಂದೂಗಳ ಪರ, ನಾಗರೀಕರ ಪರವಾಗಿರುವ ನಾವು ಚಾಮರಾಜನಗರದಿಂದ-ಬೀದರ್ ವರೆಗೂ 2011-12ರಲ್ಲಿ ಆನ್‍ಲೈನ್‍ನಲ್ಲಿ ಸುಮಾರು 1 ಕೋಟಿಗೂ ಮೀರಿ ಪಕ್ಷಕ್ಕೆ ಕಾರ್ಯಕರ್ತರನ್ನು ನೊಂದಾಯಿಸಿಕೊಂಡಿದ್ದೇವೆ. ಕೋಲಾರದಿಂದ-ಕಾರವಾರದರೆಗೂ ಸುಮಾರು 60 ಸಾವಿರ ಬೂತ್‍ಗಳಿಗೆ 6 ಲಕ್ಷ ಜನರು ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದರು.

ಸರದಾರ್ ಗಳ ಪಾರ್ಟಿ: ಬಿಜೆಪಿ ಪಕ್ಷವನ್ನು ರಾಜ್ಯ ನಾಯಕರು ಸರದಾರ್ ಗಳ ಕೈಗೆ ಕೊಡುವುದನ್ನು ಮೊದಲು ನಿಲ್ಲಿಸಿ ಕಾರ್ಯಕರ್ತರ ಕೈಗೆ ಕೊಟ್ಟರೆ ಪಕ್ಷ ಸಂಘಟನೆ ಜೊತೆಗೆ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹಿಂದೂ ಶಕ್ತಿ ಕುಗ್ಗಿಸಲು ಕುತಂತ್ರ: ರಾಜ್ಯದಲ್ಲಿ ಹಿಂದೂ ಶಕ್ತಿಯನ್ನು ಕುಗ್ಗಿಸಲು ಬೇರೆ ಬೇರೆ ಪಕ್ಷಗಳು ಕುತಂತ್ರ ನಡೆಸುತ್ತಿವೆ. ಅದು ನಡೆಯುವುದಿಲ್ಲ ಎಂದು ಎಚ್ಚರಿಸಿದರು.

ಟಿಪ್ಪು ಜಯಂತಿಗೆ ವಿರೋಧ: ರಾಜ್ಯದಲ್ಲಿ ಟಿಪ್ಪು ಜಯಂತಿಯನ್ನು ನಡೆಸಲು ಮುಂದಾಗಿರುವ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಶಿವಣ್ಣ, ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸುವುದಾಗಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಎಂ.ಬಿ.ನಂದೀಶ್, ಜಯಸಿಂಹರಾವ್, ಕೆ.ಪಿ.ಮಹೇಶ್, ಶಾಂತರಾಜು, ಬನಶಂಕರಿಬಾಬು, ಕೆ.ಹರೀಶ್, ಊರುಕೆರೆ ನಂಜುಂಡಪ್ಪ, ನವೀನ್, ಮದನ್‍ಸಿಂಗ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X