Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಟಿಪ್ಪು ಜಯಂತಿ ರದ್ದುಪಡಿಸಿ: ಶಾಸಕ...

ಟಿಪ್ಪು ಜಯಂತಿ ರದ್ದುಪಡಿಸಿ: ಶಾಸಕ ಅಪ್ಪಚ್ಚು ರಂಜನ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ7 Nov 2018 6:03 PM IST
share
ಟಿಪ್ಪು ಜಯಂತಿ ರದ್ದುಪಡಿಸಿ: ಶಾಸಕ ಅಪ್ಪಚ್ಚು ರಂಜನ್ ಆಗ್ರಹ

ಮಡಿಕೇರಿ, ನ.7 : ಕೊಡಗಿನ ಜನರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಮತ್ತೆ ಟಿಪ್ಪು ಜಯಂತಿ ಆಚರಣೆಯನ್ನು ಬಲವಂತವಾಗಿ ಹೇರಲು ಮುಂದಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಇನ್ನಾದರು ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಎಚ್ಚೆತ್ತುಕೊಂಡು ಜಿಲ್ಲೆಯಲ್ಲಿ ಜಯಂತಿಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಪ್ಪು ಜಯಂತಿ ಆಚರಿಸುವಂತೆ ಯಾವುದೇ ಮುಸಲ್ಮಾನರು ಬೇಡಿಕೆ ಇಟ್ಟಿಲ್ಲ. ಅಲ್ಲದೆ, ಸುಮಾರು 50 ವರ್ಷಗಳ ಕಾಲ ರಾಜ್ಯವನ್ನು ಆಳಿದ ಕಾಂಗ್ರೆಸ್ಸಿಗೂ ಅದರ ನೆನಪು ಬಂದಿರಲಿಲ್ಲ. ಆದರೆ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಸಂದರ್ಭ ಟಿಪ್ಪು ಜಯಂತಿಯನ್ನು ಆಚರಿಸುವ ಮೂಲಕ ಓಟ್ ಬ್ಯಾಂಕ್ ರಾಜಕಾರಣಕ್ಕೆ ಮುನ್ನುಡಿ ಬರೆದಿದ್ದಾರೆ ಎಂದು ಟೀಕಿಸಿದರು. 

ಜಿಲ್ಲೆಯಲ್ಲಿ ಟಿಪ್ಪು ಜಯಂತಿ ಆಚರಣೆಗೆ ಅವಕಾಶ ನೀಡಬಾರದೆಂದು ಮತ್ತೊಮ್ಮೆ ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಮನವಿ ಮಾಡುತ್ತೇವೆ. ಇದನ್ನೂ ಮೀರಿ ಜಯಂತಿ ಆಚರಿಸಲು ಮುಂದಾದರೆ ತೀವ್ರ ಪ್ರತಿಭಟನೆಯ ಮೂಲಕ ತಡೆಯೊಡ್ಡುವುದಾಗಿ ಎಚ್ಚರಿಕೆ ನೀಡಿದರು.

ಟಿಪ್ಪು ಓರ್ವ ಮತಾಂಧ, ಹಿಂದೂ ವಿರೋಧಿ ಆಗಿದ್ದಾನೆ. ಇದಕ್ಕೆ ಸಾಕಷ್ಟು ಸಾಕ್ಷಿಗಳು ಇತಿಹಾಸದ ಪುಟದಲ್ಲಿದ್ದು, ಇದನ್ನು ರಾಜ್ಯ ಸರ್ಕಾರ ಮನಗಾಣಬೇಕಿದೆ. ಕೊಡಗಿಗೆ 31 ಬಾರಿ ದಾಳಿ ನಡೆಸಿದ ಟಿಪ್ಪು ಹೀನಾಯವಾಗಿ ಸೋಲು ಕಂಡಿದ್ದು, 32ನೇ ಬಾರಿಗೆ ಕುತಂತ್ರದಿಂದ ಕೊಡವರನ್ನು ಹತ್ಯೆಗೈಯುವ ಮೂಲಕ ಜಯಗಳಿಸಿದ್ದಾನೆ ಎಂದು ಅಪ್ಪಚ್ಚುರಂಜನ್ ಆರೋಪಿಸಿದರು. ಮತಾಂಧ ವ್ಯಕ್ತಿಯ ಜನ್ಮ ದಿನಾಚರಣೆಯನ್ನು ಆಚರಿಸುವುದು ಕೊಡಗಿನ ಜನತೆಗೆ ಸರ್ಕಾರ ಮಾಡುವ ಅಪಮಾನವಾಗಿದ್ದು, ಯಾವುದೇ ಕಾರಣಕ್ಕೂ ಈ ಜನ್ಮ ದಿನಾಚರಣೆ ನಡೆಯಲು ಬಿಡುವುದಿಲ್ಲವೆಂದು ಎಂದು ಎಚ್ಚರಿಕೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ಮಾತನಾಡಿ, ದೇವಾಲಯಗಳನ್ನು ಧ್ವಂಸ ಗೊಳಿಸಿದ್ದಲ್ಲದೆ ಮಂಗಳೂರಿನಲ್ಲಿ ಕ್ರೈಸ್ತರನ್ನು ಮತಾಂತರಗೊಳಿಸಿದ್ದಾನೆ. ಕೊಡಗಿನಲ್ಲಿ ಟಿಪ್ಪು ಜಯಂತಿ ಆಚರಣೆ ಸಂದರ್ಭ ನಡೆದ ಘರ್ಷಣೆಯಲ್ಲಿ ಕುಟ್ಟಪ್ಪ ಅವರು ಸಾವಿಗೀಡಾಗಿದ್ದು, ಈ ಸಂದರ್ಭ ಕುಟ್ಟಪ್ಪ ಅವರ ಮನೆಗೆ ಭೇಟಿ ನೀಡಿದ್ದ ಹೆಚ್.ಡಿ. ಕುಮಾರಸ್ವಾಮಿ ಅವರು, ಟಿಪ್ಪು ಜಯಂತಿ ಆಚರಣೆಗೆ ವಿರೋಧ ವ್ಯಕ್ತಪಡಿಸಿದ್ದರಲ್ಲದೆ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಇದನ್ನು ರದ್ದು ಪಡಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಇದೀಗ ಕುಮಾರಸ್ವಾಮಿ ಅವರೇ ಮತ್ತೊಮ್ಮೆ ಟಿಪ್ಪು ಜಯಂತಿಯನ್ನು ಆಚರಿಸಲು ಮುಂದಾಗುವ ಮೂಲಕ ನಾಟಕವಾಡುತ್ತಿದ್ದಾರೆ ಎಂದು ಆರೋಪಿಸಿದರು.

ನ.10 ರಂದು ಟಿಪ್ಪು ಜಯಂತಿಯನ್ನು ವಿರೋಧಿಸಿ ಸ್ವಯಂ ಪ್ರೇರಿತರಾಗಿ ಯಾರಾದರು ಬಂದ್ ಆಚರಿಸಿದರೆ ಅದಕ್ಕೆ ನಮ್ಮ ಬೆಂಬಲವಿದೆ ಎಂದು ಸುನಿಲ್ ಸುಬ್ರಮಣಿ ಸ್ಪಷ್ಟಪಡಿಸಿದರು.

ನಾವು ಮುಸ್ಲಿಂ ವಿರೋಧಿಗಳಲ್ಲ, ಅಬ್ದುಲ್ ಕಲಾಂ, ಸಂತ ಶಿಶುನಾಳ ಶರೀಫ್ ಸೇರಿದಂತೆ ಯಾವುದೇ ಒಬ್ಬ ಉತ್ತಮ ಮುಸಲ್ಮಾನನ ಜನ್ಮದಿನವನ್ನು ಆಚರಿಸುವುದಕ್ಕೆ ನಾವು ಬೆಂಬಲ ನೀಡುತ್ತೇವೆ. ಆದರೆ, ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಮತಾಂಧ ಟಿಪ್ಪುವಿನ ಜನ್ಮ ದಿನ ಆಚರಿಸುವುದನ್ನು ನಾವು ವಿರೋಧಿಸುತ್ತೇವೆ ಎಂದರು. 

ಕೊಡಗಿನಲ್ಲಿ ಪ್ರಕೃತಿ ವಿಕೋಪದಿಂದಾಗಿ ಎಲ್ಲಾ ಹಬ್ಬ ಹರಿದಿನಗಳು, ಉತ್ಸವಗಳನ್ನು ಜನರು ರದ್ದುಪಡಿಸಿದ್ದಾರೆ. ಕೊಡವರ ಹಾಕಿ, ಗೌಡ ಸಮೂಹದ ಕ್ರಿಕೆಟ್ ಸೇರಿದಂತೆ ಕ್ರೀಡೋತ್ಸವಗಳನ್ನು ಮುಂದೂಡಲಾಗಿದೆ. ಆದರೂ ಸರ್ಕಾರ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿರುವುದು ಖಂಡನೀಯ ಎಂದು ಹೇಳಿದರು.

ಕೊಡಗಿನ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಮುಖರು ಕೊಡಗಿನ ಜನರ ಭಾವನೆಗಳನ್ನು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡುವ ಮೂಲಕ ಟಿಪ್ಪು ಜಯಂತಿಯನ್ನು ರದ್ದುಪಡಿಸಲು ಮುಂದಾಗಬೇಕೆಂದು ಸುನಿಲ್ ಸುಬ್ರಮಣಿ ಇದೇ ಸಂದರ್ಭ ಒತ್ತಾಯಿಸಿದರು. ಕಾಂಗ್ರೆಸ್‍ನ ಹಂಗಿಗೋಸ್ಕರ ಕುಮಾರಸ್ವಾಮಿ ಅವರು ಟಿಪ್ಪು ಜಯಂತಿ ಆಚರಿಸಲು ಮುಂದಾಗಿದ್ದಾರೆ. ಆದರೆ, ಟಿಪ್ಪುವಿನ ಸಹವಾಸ ಮಾಡಿದ ಪ್ರತಿಯೊಬ್ಬರು ಅಧಿಕಾರ ಕಳೆದುಕೊಂಡಿದ್ದಾರೆ ಎಂದು ಹೇಳಿದ ಅವರು ಮುಂದಿನ ಸರದಿ ಕುಮಾರಸ್ವಾಮಿ ಅವರದ್ದಾಗಲಿದೆ ಎಂದು ಭವಿಷ್ಯ ನುಡಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ. ಭಾರತೀಶ್ ಮಾತನಾಡಿ, ರಾಜ್ಯ ಸರ್ಕಾರ ಅತಿವೃಷ್ಟಿ ಹಾನಿಯ ಕೊಡಗಿನ ಜನರ ಕಣ್ಣೀರಿಗೆ, ನೋವಿಗೆ ಸ್ಪಂದಿಸುವ ಬದಲು ಮತಾಂಧ ಹಾಗೂ ಕನ್ನಡ ವಿರೋಧಿ ಟಿಪ್ಪುವಿನ ಜಯಂತಿಯನ್ನು ಆಚರಿಸಲು ಮುಂದಾಗಿದೆ ಎಂದು ಟೀಕಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಂತೆಯಂಡ ರವಿ ಕುಶಾಲಪ್ಪ ಮಾತನಾಡಿ, ಟಿಪ್ಪು ಜಯಂತಿ ಆಚರಿಸುವುದಿಲ್ಲವೆಂದು ಹೇಳಿದ್ದ ಕುಮಾರಸ್ವಾಮಿ ಅವರು ಇದೀಗ ವಚನ ಭ್ರಷ್ಟರಾಗಿದ್ದಾರೆ ಎಂದು ಟೀಕಿಸಿದರು. ಸರ್ಕಾರ ಕಾನೂನು ಮೀರಿ ಹಿಂದೂ ಸಂಘಟನೆಗಳ ಹಾಗೂ ಬಿಜೆಪಿ ಪ್ರಮುಖರ ವಿರುದ್ಧ ಪ್ರಕರಣ ದಾಖಲಿಸಿ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ನಡೆಸಿದಲ್ಲಿ ಮುಂದಾಗುವ ಅನಾಹುತಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ರಾಜ್ಯ ಸರ್ಕಾರ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನಿಡಿದರು.

ಕೊಡಗಿನಲ್ಲಿ ಪ್ರಕೃತಿ ವಿಕೋಪದಿಂದ 18 ಮಂದಿ ಸಾವಿಗೀಡಾಗಿದ್ದು, 841 ಕುಟುಂಬಗಳು ಮನೆ, ಆಸ್ತಿಪಾಸ್ತಿ ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ. ಸರ್ಕಾರ ಟಿಪ್ಪು ಜಯಂತಿ ಆಚರಿಸುವ ಬದಲು ಅದಕ್ಕೆ ವೆಚ್ಚವಾಗುವ ಹಣವನ್ನು ಸಂತ್ರಸ್ತರಿಗೆ ನೀಡಲಿ ಮತ್ತು ಟಿಪ್ಪು ಜಯಂತಿಯನ್ನು ಕೈಬಿಡಲಿ ಎಂದು ಸಲಹೆ ನೀಡಿದರು.

ಮುಸಲ್ಮಾನರ ವಿರೋಧವಿದೆ
ಮತ್ತೋರ್ವ ಪ್ರಧಾನ ಕಾರ್ಯದರ್ಶಿ ರಾಬಿನ್ ದೇವಯ್ಯ ಮಾತನಾಡಿ, ಸೋಮವಾರಪೇಟೆಯಲ್ಲಿ ತಹಶೀಲ್ದಾರರು ಕರೆದಿದ್ದ ಸಭೆಯಲ್ಲಿ ಮುಸಲ್ಮಾನ ಬಾಂಧವರೆ ಟಿಪ್ಪು ಜಯಂತಿ ಆಚರಣೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಅದೇ ರೀತಿ ಜಿಲ್ಲಾಧಿಕಾರಿಗಳು ಕರೆದಿದ್ದ ಸಭೆಯಲ್ಲಿ ಕೂಡ ಓರ್ವ ವ್ಯಕ್ತಿಯನ್ನು ಹೊರತು ಪಡಿಸಿ ಉಳಿದ ಮುಸ್ಲಿಂ ಬಾಂಧವರು ಟಿಪ್ಪು ಜಯಂತಿ ಆಚರಣೆ ಕೈಬಿಡುವಂತೆ ಸಲಹೆ ಮಾಡಿದ್ದಾರೆ ಎಂದರು.

ಜಿಲ್ಲಾಧಿಕಾರಿಗಳು ಸಭೆಯ ನಂತರ ಪತ್ರಿಕಾ ಹೇಳಿಕೆ ನೀಡಿ ಸರ್ಕಾರದ ಆಜ್ಞೆಯಂತೆ ಜಿಲ್ಲಾಡಳಿತದಿಂದ ಟಿಪ್ಪು ಜಯಂತಿಯನ್ನು ಆಚರಿಸುವುದಾಗಿ ಘೋಷಿಸಿದ್ದಾರೆ. ಕೊಡಗಿನ ಜನತೆಗೆ ಬೇಡವಾಗಿರುವ ಟಿಪ್ಪು ಜಯಂತಿಯನ್ನು ಕೈಬಿಡುವಂತೆ ಜಿಲ್ಲಾಧಿಕಾರಿಗಳು ಈಗಲಾದರು ಸರಕಾರಕ್ಕೆ ಪತ್ರ ಬರೆಯಬೇಕು ಮತ್ತು ಸಭೆಯಲ್ಲಿ ಮುಸಲ್ಮಾನರೇ ಜಯಂತಿಗೆ ವಿರೋಧ ವ್ಯಕ್ತಪಡಿಸಿರುವ ಕುರಿತಾದ ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಬೇಕೆಂದು ಒತ್ತಾಯಿಸಿದರು.

ಪ್ರಧಾನ ಕಾರ್ಯದರ್ಶಿ ವಿ.ಕೆ.ಲೋಕೇಶ್ ಮಾತನಾಡಿ, ಮಹಾತ್ಮಾ ಗಾಂಧೀಜಿ, ಬಸವಣ್ಣ, ವಾಲ್ಮೀಕಿ ಮೊದಲಾದ ಮಹಾತ್ಮರ ಜಯಂತಿಯ ಸಾಲಿನಲ್ಲಿ ಮತಾಂಧ ಟಿಪ್ಪುವಿನ ಜಯಂತಿಯನ್ನು ಸೇರಿಸುವ ಮೂಲಕ ಉಳಿದ ಮಹಾತ್ಮರಿಗೆ ಅಪಮಾನ ಮಾಡಿದಂತಾಗಿದೆ ಎಂದು ಆರೋಪಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X