ನ.10: ಹಝ್ರತ್ ಟಿಪ್ಪುಸುಲ್ತಾನ್ ಜಯಂತಿ
ಮಂಗಳೂರು, ನ.7:ದ.ಕ. ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ನ.10ರಂದು ಬೆಳಗ್ಗೆ 10:30ಕ್ಕೆ ದ.ಕ.ಜಿಪಂ ಸಭಾಂಗಣದಲ್ಲಿ ಹಝ್ರತ್ ಟಿಪ್ಪುಸುಲ್ತಾನ್ ಜಯಂತಿ ಆಚರಿಸಲಾಗುವುದು.
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಕಾರ್ಯಕ್ರಮ ಉದ್ಘಾಟಿಸುವರು. ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎ.ಉದಯ ಕುಮಾರ್ ಸಂದೇಶ ನೀಡಲಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





