ಸುದೆಕಾರ್: ರಸ್ತೆ ಅಪಘಾತದ ಗಾಯಾಳು ಮಹಿಳೆ ಮೃತ್ಯು
ಬಂಟ್ವಾಳ, ನ.7: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬಂಟ್ವಾಳ ತಾಲೂಕಿನ ಸುದೆಕಾರ್ ನಿವಾಸಿ ರವೀಂದ್ರ ಎಂಬವರ ಪತ್ನಿ ಸುಜಾತಾ(45) ಮೃತಪಟ್ಟ ಮಹಿಳೆ.
ಆ.24ರಂದು ಕಲ್ಲಡ್ಕ ಪೇಟೆಯಲ್ಲಿ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ರಸ್ತೆ ಬದಿ ನಿಂತಿದ್ದ ಸುಜಾತಾ ಅವರಿಗೆ ಬೈಕ್ ಢಿಕ್ಕಿ ಹೊಡೆದಿತ್ತು. ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂಬಂಧ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story