Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರತಿ 8 ನಿಮಿಷಕ್ಕೆ ಒಬ್ಬ ಮಹಿಳೆ...

ಪ್ರತಿ 8 ನಿಮಿಷಕ್ಕೆ ಒಬ್ಬ ಮಹಿಳೆ ಗರ್ಭಕೋಶ ಕಂಠ ಕ್ಯಾನ್ಸರ್‌ಗೆ ಬಲಿ

ಮೂರನೆ ಸ್ಥಾನದಲ್ಲಿದೆ ಭಾರತ

ವಾರ್ತಾಭಾರತಿವಾರ್ತಾಭಾರತಿ7 Nov 2018 9:33 PM IST
share
ಪ್ರತಿ 8 ನಿಮಿಷಕ್ಕೆ ಒಬ್ಬ ಮಹಿಳೆ ಗರ್ಭಕೋಶ ಕಂಠ ಕ್ಯಾನ್ಸರ್‌ಗೆ ಬಲಿ

ಬೆಂಗಳೂರು, ನ. 7: ಗರ್ಭಕೋಶ ಕಂಠ ಕ್ಯಾನ್ಸರ್ ಪ್ರಕರಣಗಳ ಲೆಕ್ಕಾಚಾರದಲ್ಲಿ ಭಾರತ 3ನೇ ಸ್ಥಾನದಲ್ಲಿದ್ದು, ಪ್ರತಿ ಎಂಟು ನಿಮಿಷಕ್ಕೆ ಒಬ್ಬ ಮಹಿಳೆ ಇದಕ್ಕೆ ಬಲಿಯಾಗುತ್ತಿದ್ದಾರೆ ಎಂದು ರಾಷ್ಟ್ರೀಯ ಕ್ಯಾನ್ಸರ್ ನಿಯಂತ್ರಣ ಹಾಗೂ ಸಂಶೋಧನಾ ಸಂಸ್ಥೆಯ ವರದಿ ತಿಳಿಸಿದೆ.

ಪ್ರಸಕ್ತ ವರ್ಷ ಕ್ಯಾನ್ಸರ್‌ನಿಂದ 3.71 ಲಕ್ಷ ಮಹಿಳೆಯರು ಮೃತಪಟ್ಟಿದ್ದು, ಆ ಪೈಕಿ ಗರ್ಭಕೋಶ ಸಂಬಂಧಿ ಕ್ಯಾನ್ಸರ್‌ಗೆ ತುತ್ತಾದವರ ಪ್ರಮಾಣ ಶೇ.16ರಷ್ಟಿದೆ. ಪ್ರಸಕ್ತ ವರ್ಷ ಸುಮಾರು 97 ಸಾವಿರ ಮಹಿಳೆಯರು ಈ ಕ್ಯಾನ್ಸರ್ ಗೆ ಒಳಗಾಗುತ್ತಿದ್ದು, ಆ ಪೈಕಿ 60 ಸಾವಿರಕ್ಕೂ ಹೆಚ್ಚು ರೋಗಿಗಳು ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿ ಪ್ರಸ್ತುತ ಎಂಟು ಸಾವಿರ ಮಂದಿ ಮಹಿಳೆಯರು ಗರ್ಭಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಆ ಪೈಕಿ ಗ್ರಾಮೀಣ ಮಹಿಳೆಯರ ಸಂಖ್ಯೆ ಹೆಚ್ಚಿದೆ. ವರದಿಯಂತೆ ನಗರ ಭಾಗದಲ್ಲಿ ಒಂದು ಲಕ್ಷ ಜನರ ಪೈಕಿ 16 ಮಂದಿಯಲ್ಲಿ ಈ ಕಾಯಿಲೆ ಕಾಣಿಸಿಕೊಂಡರೆ, ಗ್ರಾಮೀಣ ಭಾಗದ ಒಂದು ಲಕ್ಷ ಮಹಿಳೆಯಲ್ಲಿ 21 ರಿಂದ 22 ಸ್ತ್ರೀಯರು ಸರ್ವಿಕಲ್ ಕ್ಯಾನ್ಸರ್‌ಗೆ ತುತ್ತಾಗುತ್ತಾರೆ.

ಗರ್ಭಕೋಶ ಕಂಠ ಕ್ಯಾನ್ಸರ್ ನಿಯಂತ್ರಣ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಹಲವಾರು ಕ್ರಮ ಕೈಗೊಂಡರೂ ಗ್ರಾಮೀಣ ಭಾಗದಲ್ಲಿ ನಿಯಂತ್ರಣಕ್ಕೆ ಬರುತ್ತಿಲ್ಲ. ಬದಲಿಗೆ ಪ್ರತಿ ವರ್ಷ ಒಂದು ಸಾವಿರ ಹೊಸ ರೋಗಿಗಳು ಸೇರ್ಪಡೆಯಾಗುತ್ತಿದ್ದಾರೆ. ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯಲ್ಲಿ ವಾರ್ಷಿಕ ದಾಖಲಾಗುತ್ತಿರುವ 6 ಸಾವಿರ ಹೊಸ ಮಹಿಳಾ ಕ್ಯಾನ್ಸರ್ ರೋಗಿಗಳ ಪೈಕಿ 1,500 ಗರ್ಭಕೋಶ ಕ್ಯಾನ್ಸರ್ ಪ್ರಕರಣಗಳಿರುತ್ತವೆ. ಕ್ಯಾನ್ಸರ್ 3ನೇ ಹಂತ ತಲುಪಿದ ಬಳಿಕ ಆಸ್ಪತ್ರೆ ಸೇರಿದರೆ ಚಿಕಿತ್ಸೆ ಫಲಕಾರಿಯಾಗುವುದು ತೀರಾ ಕಡಿಮೆ ಎಂದು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ನಿರ್ದೇಶಕ ರಾಮಚಂದ್ರ ಹೇಳುತ್ತಾರೆ.

ಚಿಕ್ಕ ವಯಸ್ಸಿನಲ್ಲಿ ಮದುವೆ, ಅಸುರಕ್ಷಿತ ಹಾಗೂ ಹೆಚ್ಚಿನ ಜನರೊಂದಿಗೆ ಲೈಂಗಿಕ ಸಂಪರ್ಕ ನಡೆಸುವುದರಿಂದ ಮಹಿಳೆಯರಲ್ಲಿ ಗರ್ಭಕೋಶ ಕಂಠ ಕ್ಯಾನ್ಸರ್ ಕಾಣಿಸಿಕೊಳ್ಳುತ್ತಿದೆ. ಆದರೆ, ಕ್ಯಾನ್ಸರ್ ಕೊನೆಯ ಹಂತದಲ್ಲಿರುವಾಗ ಶೇ.63ರಷ್ಟು ಮಹಿಳೆಯರು ಆಸ್ಪತ್ರೆಗಳ ಕಡೆಗೆ ಮುಖ ಮಾಡುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮರಣ ಹೊಂದುತ್ತಿರುವುದು ವರದಿಯಿಂದ ತಿಳಿದುಬಂದಿದೆ.

ಲಕ್ಷಣ

ಅತ್ಯಧಿಕ ಹೊಟ್ಟೆ ನೋವು, ಋತು ಚಕ್ರ ಸಮಯ ಹೊರತು ಪಡಿಸಿ ಬೇರೆ ಸಮಯದಲ್ಲಿ ರಕ್ತ ಸ್ರಾವ, ಅಂಡಾಣುವಿನಲ್ಲಿ ಕೆಟ್ಟ ವಾಸನೆ.

ಕಾರಣ

ಮುಟ್ಟಿನ ಸಂದರ್ಭದಲ್ಲಿ ಶುಚಿತ್ವಕ್ಕೆ ಒತ್ತು ನೀಡದಿರುವುದು, ಸಣ್ಣ ಪ್ರಾಯದಲ್ಲಿ ಲೈಂಗಿಕ ಚಟುವಟಿಕೆಯಲ್ಲಿ ತೊಡಗುವುದು, ಒಬ್ಬರಿಗಿಂತ ಹೆಚ್ಚು ಜನರ ಜತೆಗಿನ ಲೈಂಗಿಕ ಸಂಪರ್ಕ, ತಂಬಾಕು ಸೇವನೆ, ಅಸುರಕ್ಷಿತ ಲೈಂಗಿಕ ಕ್ರಿಯೆ ನಡೆಸುವುದು.

ಗ್ರಾಮೀಣ ಭಾಗದ ಮಹಿಳೆಯರಲ್ಲಿ ಗರ್ಭಕೋಶ ಕಂಠ (ಸರ್ವಿಕಲ್) ಕ್ಯಾನ್ಸರ್ ಹೆಚ್ಚು ಕಂಡು ಬರುತ್ತಿದ್ದು, ಆ ಪೈಕಿ ಶೇ.60 ರಷ್ಟು ಮಹಿಳೆಯರು ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗುತ್ತಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

-ರಾಮಚಂದ್ರ, ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ನಿರ್ದೇಶಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X