ಸಿದ್ದರಾಮಯ್ಯ ನಿವಾಸಕ್ಕೆ ಡಾ.ಜಿ.ಪರಮೇಶ್ವರ್ ಭೇಟಿ
ಬೆಂಗಳೂರು, ನ.7: ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನಿವಾಸ ‘ಕಾವೇರಿ’ಗೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ದೀಪಾವಳಿ ಹಬ್ಬದು ಶುಭಾಶಯ ಕೋರಿದರು.
ಇದೇ ವೇಳೆ ಉಭಯ ಮುಖಂಡರು ಸಮಾರು ಒಂದು ಗಂಟೆಗೂ ಹೆಚ್ಚು ಕಾಲ ರಾಜ್ಯದ ರಾಜಕೀಯ ವಿಚಾರಗಳ ಕುರಿತು ಚರ್ಚೆ ನಡೆಸಿದರು. ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನೇಮಕ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ. ಈ ವೇಳೆ ಸಚಿವ ಝಮೀರ್ ಅಹ್ಮದ್ ಖಾನ್ ಉಪಸ್ಥಿತರಿದ್ದರು.
Next Story