ಬಿ.ಸಿ.ರೋಡ್: ನ.9ರಂದು ಆರೋಗ್ಯ ಇಲಾಖೆಯ ಸವಲತ್ತುಗಳ ಮಾಹಿತಿ ಕಾರ್ಯಾಗಾರ
ಮಂಗಳೂರು, ನ.7: ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಮತ್ತು ದಕ್ಷಿಣ ಕರ್ನಾಟಕ ಮುಸ್ಲಿಮ್ ಒಕ್ಕೂಟ (ಡಿಕೆಎಂಒ) ರಿಯಾದ್ ಇವುಗಳ ಜಂಟಿ ಸಹಯೋಗದಲ್ಲಿ ಆರೋಗ್ಯ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಉಚಿತ ಮಾಹಿತಿ ಕಾರ್ಯಾಗಾರ ನ.9ರಂದು ಅಪರಾಹ್ನ ಗಂಟೆ 3:30ಕ್ಕೆ ಬಿ.ಸಿ. ರೋಡ್‌ನಲ್ಲಿರುವ ರಿಕ್ಷಾ ಭವನದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಅನುಭವಿ ಸಂಪನ್ಮೂಲ ವ್ಯಕ್ತಿಗಳು ಆರೋಗ್ಯಕ್ಕೆ ಸಂಬಂಧಿಸಿ ಇಲಾಖೆಯಿಂದ ಸಿಗುವ ಎಲ್ಲಾ ಸವಲತ್ತುಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ.
ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕಾರ್ಯಕ್ರಮ ಸಂಯೋಜಕ ಶಹೀದ್ ಮೆಲ್ಕಾರ್ ಪ್ರಕಟನೆಯಲ್ಲಿ ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊ.9731436565 ಅನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ
Next Story





