ಟಿಪ್ಪು ಜಯಂತಿ: ಕೊಡಗು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

ಮಡಿಕೇರಿ, ನ.8: ಜಿಲ್ಲೆಯಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನ.9 ರ ಸಂಜೆ 6 ಗಂಟೆಯಿಂದ ನ.11 ಬೆಳಗ್ಗೆ 6 ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಆದೇಶ ಹೊರಡಿಸಿದ್ದಾರೆ.
ನಿಷೇಧಿತ ಅವಧಿಯಲ್ಲಿ ಪಾಲಿಸಬೇಕಾದ ಷರತ್ತುಗಳು
ಸರ್ಕಾರಿ ಕಾರ್ಯಕ್ರಮ ಮತ್ತು ಪೂರ್ವ ನಿಯೋಜಿತ ನಿಶ್ಚಿತಾರ್ಥ, ಮದುವೆ, ನಾಮಕರಣ, ಗೃಹಪ್ರವೇಶ ಮುಂತಾದ ಸಮಾರಂಭಗಳನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಸಭೆ, ಸಮಾರಂಭ ಮತ್ತು ಮೆರವಣಿಗೆಯನ್ನು ನಡೆಸಬಾರದು. ಎಲ್ಲಾ ಸಾರ್ವಜನಿಕ/ರಾಜಕೀಯ ಬಹಿರಂಗ ಸಭೆ-ಸಮಾರಂಭ, ಪ್ರಚೋದನಾಕಾರಿ ಹೇಳಿಕೆ, ಭಾಷಣ, ಮೆರವಣಿಗೆ, ಪ್ರತಿಭಟನೆ, ಜಾಥಾ, ಧರಣಿ, ಮುಷ್ಕರ, ರಸ್ತಾ-ರೋಕಾ ಹಾಗೂ ಮುತ್ತಿಗೆ ಮುಂತಾದುವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಯಾವುದೇ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಕರಪತ್ರ, ಭಿತ್ತಿಪತ್ರ ಬಳಸುವುದು, ಅಂಟಿಸುವುದು ಅಥವಾ ಹಂಚುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ನ.10 ರಂದು ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಸಂತೆ-ಜಾತ್ರೆ ನಿಷೇಧಿಸಿದೆ. ನಿಷೇಧಿತ ಅವಧಿಯಲ್ಲಿ 5 ಜನರಿಗಿಂತ ಮೇಲ್ಪಟ್ಟು ಗುಂಪು ಸೇರಬಾರದು. ಸರ್ಕಾರಿ ಕರ್ತವ್ಯದ ನಿಮಿತ್ತ ಮತ್ತು ಬ್ಯಾಂಕ್/ ಎ.ಟಿ.ಎಂ. ಭದ್ರತಾ ಕಾರ್ಯಕ್ಕಾಗಿ ನಿಯೋಜಿಸಲ್ಪಟ್ಟ ಸಿಬ್ಬಂದಿಗಳನ್ನು ಹೊರತುಪಡಿಸಿ, ಖಾಸಗಿ ವ್ಯಕ್ತಿಗಳು ಯಾವುದೇ ರೀತಿಯ ಆಯುಧಗಳನ್ನು ಹೊಂದಿರುವುದು, ಪ್ರದರ್ಶಿಸುವುದು ಅಥವಾ ಹಿಡಿದುಕೊಂಡು ತಿರುಗಾಡುವುದನ್ನು ನಿಷೇಧಿಸಿದೆ. ಈ ನಿಷೇಧಾಜ್ಞೆಯನ್ನು ಜಿಲ್ಲೆಯ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಹೊರಡಿಸಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಕೋರಿದ್ದಾರೆ.
ಮದ್ಯ ಮಾರಾಟ ನಿಷೇಧ
ನ.8 ರ ಮಧ್ಯರಾತ್ರಿ 12 ಗಂಟೆಯಿಂದ ನ.11 ರ ಬೆಳಗ್ಗೆ 8 ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಾಂತ ಎಲ್ಲಾ ಮದ್ಯದ ಅಂಗಡಿಗಳು, ಬಾರ್ ಮತ್ತು ರೆಸ್ಟೋರೆಂಟ್ ಮತ್ತು ಕ್ಲಬ್, ಹೋಟೆಲ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇದಿಸಿ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಆದೇಶ ಹೊರಡಿಸಿದ್ದಾರೆ.
ವಿಶೇಷ ಕಾರ್ಯ ನಿರ್ವಾಹಕ ದಂಡಾಧಿಕಾರಿಗಳ ನಿಯೋಜನೆ
ಕೊಡಗು ಜಿಲ್ಲೆಯಲ್ಲಿ ನ.10 ರಂದು ಟಿಪ್ಪು ಸುಲ್ತಾನ್ ಜಯಂತಿ ಆಚರಿಸುತ್ತಿರುವ ಹಿನ್ನೆಲೆ, ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಹಾಗೂ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನ.9 ಮತ್ತು 10 ರಂದು ಹೋಬಳಿ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸಿಲು ವಿಶೇಷ ಕಾರ್ಯ ನಿರ್ವಾಹಕ ದಂಡಾಧಿಕಾರಿಗಳನ್ನು ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.
ಸಂಪಾಜೆ ಹೋಬಳಿಗೆ ಸಮಗ್ರ ಗಿರಿಜನ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಸಿ.ಶಿವಕುಮಾರ್ (9964405056), ಭಾಗಮಂಡಲ-ಸದಾಶಿವಯ್ಯ ಆಹಾರ ಇಲಾಖೆಯ ಉಪ ನಿರ್ದೇಶಕರು (9845571015), ನಾಪೋಕ್ಲು-ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಅವಿನ್ (9886907455), ಪೊನ್ನಂಪೇಟೆ- ವಿರಾಜಪೇಟೆ ತಾ.ಪಂ. ಇಒ ಬಿ.ವಿ.ಜಯಣ್ಣ, (9480869110), ಅಮ್ಮತ್ತಿ- ವಿರಾಜಪೇಟೆ ತಾ.ಪಂ.ಎಇಇ ವಿ.ಕೆ.ಮಹದೇವ್ (94808691113), ಶ್ರೀಮಂಗಲ ವಿರಾಜಪೇಟೆ ತಾಲೂಕು ಅಕ್ಷರ ದಾಸೊಹ ಡಿ.ಚಂದನ (9480835590) ಬಾಳೆಲೆ- ವಿರಾಜಪೇಟೆ ತಾಲೂಕು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗ ಎಇಇ ಎಸ್.ಲಕ್ಷ್ಮಿಕಾಂತ್ (9900631584), ಹುದಿಕೇರಿ-ವಿರಾಜಪೇಟೆ ಉಪ ವಿಭಾಗ ಲೋಕೋಪಯೋಗಿ ಇಲಾಖೆಯ ಎಇಇ ಎಂ.ಇ.ಸುರೇಶ್ (9448504368)
ಸುಂಟಿಕೊಪ್ಪ-ಕೆ.ಎಸ್.ಚಂದ್ರಶೇಖರ್ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು (9448336863), ಕೊಡ್ಲಿಪೇಟೆ-ನಾಗರಾಜಯ್ಯ ಕ್ಷೇತ್ರ ಶಿಕ್ಷಣಾಧಿಕಾರಿ(9480695261) ಶನಿವಾರಸಂತೆ-ಎಚ್.ಎಸ್.ರಾಜಶೇಖರ್, ಸಹಾಯಕ ನಿರ್ದೇಶಕರು, ಕೃಷಿ ಇಲಾಖೆ(8277931907), ಕುಶಾಲನಗರ- ಎಇಇ ಸುರೇಶ್ ಕುಮಾರ್ (9449679751), ಶಾಂತಳ್ಳಿ-ತಾ.ಪಂ.ಸಹಾಯಕ ನಿರ್ದೇಶಕರು ಸುನಿಲ್ ಕುಮಾರ್(9880597289) ಇವರನ್ನು ನಿಯೋಜಿಸಿದೆ.







