ನ.20ರಂದು ಮೀಲಾದುನ್ನಬಿ
ಮಂಗಳೂರು, ನ.8: ರಬೀಉಲ್ ಅವ್ವಲ್ ತಿಂಗಳ ಪ್ರಥಮ ಚಂದ್ರದರ್ಶನವು ಕಲ್ಲಿಕೋಟೆಯಲ್ಲಿ ನ.8ರ ಗುರುವಾರ ಅಸ್ತಮಿಸಿದ ಶುಕ್ರವಾರ ಮುಸ್ಸಂಜೆ ಆಗಿದ್ದು, ನ.20ರಂದು ರಬೀಉಲ್ ಅವ್ವಲ್ 12(ಮೀಲಾದುನ್ನಬಿ) ಆಚರಿಸಲು ದ.ಕ. ಜಿಲ್ಲಾ ಖಾಝಿ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ತೀರ್ಮಾನಿಸಿದ್ದಾರೆ ಎಂದು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಹಾಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ನ.8ರಂದು ರಬೀವುಲ್ ಅವ್ವಲ್ ತಿಂಗಳ ಪ್ರಥಮ ಚಂದ್ರದರ್ಶನವಾಗಿರುವುದರಿಂದ ನ.20ರಂದು ಮಂಗಳವಾರ ಮೀಲಾದುನ್ನಬಿ ಆಗಿರುವುದಾಗಿ ಉಡುಪಿ, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲಾ ಸಂಯುಕ್ತ ಖಾಝಿ ಅಲ್ಹಾಜ್ ಪಿ.ಎಂ.ಇಬ್ರಾಹೀಂ ಮುಸ್ಲಿಯಾರ್ ಬೇಕಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉಳ್ಳಾಲ: ಗುರುವಾರ ಅಸ್ತಮಿಸಿದ ಶುಕ್ರವಾರ (ನ.8) ರಬೀವುಲ್ ಅವ್ವಲ್ ತಿಂಗಳ ಪ್ರಥಮ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ರಬೀಉಲ್ ಅವ್ವಲ್ 12 (ಮೀಲಾದುನ್ನಬಿ) ನ.20ರಂದು ಆಗಿರುತ್ತದೆ ಎಂದು ಉಳ್ಳಾಲ ಖಾಝಿ ಕೂರತ್ ತಂಙಳ್ ಘೋಷಿಸಿರುವುದಾಗಿ ಪ್ರಕಟನೆ ತಿಳಿಸಿದೆ.