5 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಲು ಸಿಸಿಬಿಯಲ್ಲಿ ಅವಕಾಶ
ಬೆಂಗಳೂರು, ಸೆ. 8: ರಾಜ್ಯದ ವಿವಿಧ ಕಮಿಷನರೇಟ್‌ಗಳಲ್ಲಿ 5 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಲು ಡಿವೈಎಸ್ಪಿ ಮತ್ತು ಪೊಲೀಸ್ ಇನ್ಸ್‌ಪೆಕ್ಟರ್‌ಗಳಿಗೆ ಅವಕಾಶ ಕಲ್ಪಿಸಿ ರಾಜ್ಯ ಸರಕಾರದ ಒಳಾಡಳಿತ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.
ಅಪರಾಧ ಹಾಗೂ ಅಪರಾಧಿಗಳ ಕುರಿತು ವಿಶೇಷ ಹಾಗೂ ವೈಯಕ್ತಿಕ ಮಾಹಿತಿ ಮತ್ತು ಅನುಭವವನ್ನು ಪಡೆದುಕೊಂಡಿದ್ದು, ಇದರಿಂದ ಅಪರಾಧ ಪತ್ತೆ ಹಚ್ಚಲು ಮತ್ತು ತಡೆಗಟ್ಟಲು ನೆರವಾಗುತ್ತದೆ. ಆದುದರಿಂದ ಇವರ ಸೇವೆಯನ್ನು ನಿರ್ದಿಷ್ಟ ಕಾಲಾವಧಿಗೆ ಸೀಮಿತಗೊಳಿಸುವುದು ಸೂಕ್ತವಾಗುವುದಿಲ್ಲ. ಆ ಹಿನ್ನೆಲೆಯಲ್ಲಿ ಸಿಸಿಬಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡಿವೈಎಸ್ಪಿ ಮತ್ತು ಪೊಲೀಸ್ ಇನ್ಸ್‌ಪೆಕ್ಟರ್‌ಗಳಿಗೆ ವರ್ಗಾವಣೆಯಿಂದ ವಿನಾಯ್ತಿ ನೀಡಲಾಗಿದೆ. ಉಳಿದಂತೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸರಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
Next Story





