Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಪ್ರೀಂ ಆದೇಶ ಉಲ್ಲಂಘನೆ: ಪಟಾಕಿ...

ಸುಪ್ರೀಂ ಆದೇಶ ಉಲ್ಲಂಘನೆ: ಪಟಾಕಿ ಸಿಡಿಸಿದ್ದರಿಂದ ಹೊಸದಿಲ್ಲಿಯಲ್ಲಿ ಮಬ್ಬು

ವಾರ್ತಾಭಾರತಿವಾರ್ತಾಭಾರತಿ8 Nov 2018 8:46 PM IST
share
ಸುಪ್ರೀಂ ಆದೇಶ ಉಲ್ಲಂಘನೆ: ಪಟಾಕಿ ಸಿಡಿಸಿದ್ದರಿಂದ ಹೊಸದಿಲ್ಲಿಯಲ್ಲಿ ಮಬ್ಬು

ಹೊಸದಿಲ್ಲಿ, ನ. 8: ಸುಪ್ರೀಂ ಕೋರ್ಟ್ ಅಂತಿಮ ಗಡು ನೀಡಿದ ಬಳಿಕ ದಿಲ್ಲಿ ನಾಗರಿಕರು ನಿರಂತರ ಪಟಾಕಿಗಳನ್ನು ಸಿಡಿಸಿದ ಪರಿಣಾಮ ವಾಯು ಗುಣಮಟ್ಟ ‘ತುಂಬಾ ಕಳಪೆ’ಗೆ ಇಳಿಯುತ್ತಿರುವುದರೊಂದಿಗೆ ಬುಧವಾರ ರಾತ್ರಿ ಹೊಸದಿಲ್ಲಿಯಲ್ಲಿ ಗಾಢ ಮಬ್ಬು ಆವರಿಸಿತು. ಬುಧವಾರ ರಾತ್ರಿ 11 ಗಂಟೆಗೆ ಒಟ್ಟು ವಾಯು ಗುಣಮಟ್ಟ ಸೂಚ್ಯಾಂಕ (ಎಕ್ಯೂಐ) ಅತೀ ಕಳಪೆ 302 ದಾಖಲಾಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ.

 ಸಂಜೆ 7 ಗಂಟೆಯಿಂದ ವಾಯು ಗುಣಮಟ್ಟ ಕ್ಷೀಣಿಸುತ್ತಾ ಬಂತು. ಎಕ್ಯೂಐ 7 ಗಂಟೆಗೆ 281 ಇತ್ತು. 8 ಗಂಟೆಗೆ ಅದು 291ಕ್ಕೆ ಏರಿಕೆಯಾಯಿತು. 9 ಗಂಟೆಗೆ ಇನ್ನಷ್ಟು ಕ್ಷೀಣಿಸಿ 294ಕ್ಕೆ ಏರಿತು ಹಾಗೂ 10 ಗಂಟೆಗೆ 296ಕ್ಕೆ ಏರಿಕೆಯಾಯಿತು ಎಂದು ಮಂಡಳಿ ತಿಳಿಸಿದೆ. ದೀಪಾವಳಿ ಹಾಗೂ ಇತರ ಹಬ್ಬಗಳ ಸಂದರ್ಭ ರಾತ್ರಿ 8ರಿಂದ 10 ಗಂಟೆ ವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿತ್ತು. ಅಲ್ಲದೆ, ಕಡಿಮೆ ಪ್ರಕಾಶ, ಹೊಗೆ ಹಾಗೂ ಕಡಿಮೆ ಹಾನಿಕಾರಕ ರಾಸಾಯನಿಕ ಇರುವ ಪರಿಸರ ಸ್ನೇಹಿ ಪಟಾಕಿಗಳ ಉತ್ಪಾದನೆ ಹಾಗೂ ಮಾರಾಟಕ್ಕೆ ಮಾತ್ರ ಅನುಮತಿ ನೀಡಿತ್ತು.

ನಿಷೇಧಿತ ಪಟಾಕಿ ಮಾರಾಟ ಮಾಡದಂತೆ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಆದೇಶವನ್ನು ಯಾವುದೇ ರೀತಿಯಲ್ಲಿ ಉಲ್ಲಂಘಿಸಿದರೆ, ಸಂಬಂಧಿತ ಪೊಲೀಸ್ ಠಾಣೆಯ ಎಸ್‌ಎಚ್‌ಒ ಅವರನ್ನು ವೈಯುಕ್ತಿಕವಾಗಿ ಬಾಧ್ಯಸ್ತರನ್ನಾಗಿ ಮಾಡಲಾಗುವುದು ಎಂದು ನ್ಯಾಯಾಲಯ ಹೇಳಿತ್ತು. ಸುಪ್ರೀಂ ಕೋರ್ಟ್ ತೀರ್ಪಿನ ಹೊರತಾಗಿಯೂ ಹಲವು ಪ್ರದೇಶಗಳಲ್ಲಿ 10 ಗಂಟೆಯ ಬಳಿಕವೂ ಪಟಾಕಿ ಸಿಡಿಸಿ ಆದೇಶ ಉಲ್ಲಂಘಿಸಿರುವುದು ಬೆಳಕಿಗೆ ಬಂದಿದೆ. ಹಲವು ಪ್ರದೇಶಗಳಲ್ಲಿ ವಾಯ ಮಾಲಿನ್ಯ ತೀವ್ರವಾಗಿದೆ. ಆನಂದ್ ವಿಹಾರ್, ಐಟಿಒ ಹಾಗೂ ಜಹಾಂಗೀರ್‌ಪುರಿಯಂತಹ ಪ್ರದೇಶಗಳಲ್ಲಿ ಅತ್ಯಧಿಕ ವಾಯು ಮಾಲಿನ್ಯ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X