Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೃಶ್ಯಮಾಧ್ಯಮಗಳಿಂದ ಕನ್ನಡದ ಕೊಲೆ:...

ದೃಶ್ಯಮಾಧ್ಯಮಗಳಿಂದ ಕನ್ನಡದ ಕೊಲೆ: ಜೆಎನ್ಯು ಕನ್ನಡ ವಿಭಾಗದ ಮುಖ್ಯಸ್ಥ ಪುರುಷೋತ್ತಮ ಬಿಳಿಮಲೆ

ವಾರ್ತಾಭಾರತಿವಾರ್ತಾಭಾರತಿ8 Nov 2018 10:34 PM IST
share

ದಾವಣಗೆರೆ,ನ,8: ಈಗಿನ ದೃಶ್ಯ ಮಾಧ್ಯಮಗಳು ಕನ್ನಡವನ್ನು ಕೊಲ್ಲುತ್ತಿವೆ. ಅವರು ಬಳಸುತ್ತಿರುವ ಕನ್ನಡದಲ್ಲಿ ಶೇ 60ರಷ್ಟು ಇಂಗ್ಲಿಷ್ ಪದಗಳೇ ಇವೆ ಎಂದು ನವದೆಹಲಿ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದರು. 

ನಗರದ  ಸರ್ಕಾರಿ ಪ್ರಥಮದರ್ಜೆ ಕಾಲೇಜು, ಸ್ನಾತಕೋತ್ತರ ವಿಭಾಗದಿಂದ ಕಾಲೇಜು ಸಭಾಂಗಣದಲ್ಲಿ 'ಸಾಹಿತ್ಯದ ಹೊಸದಿಕ್ಕು' ಬಗ್ಗೆ ಅವರು ವಿಶೇಷ ಉಪನ್ಯಾಸ ನೀಡಿದರು.  

ಪ್ರಾದೇಶಿಕ ಭಾಷೆಯ ಮಾಧ್ಯಮಗಳು ಆ ಭಾಷೆಯ ಬೆಳವಣಿಗೆಗೆ ಕೊಡುಗೆ ನೀಡಬೇಕು. ಆದರೆ ಕನ್ನಡದ ಬಗ್ಗೆ ಕೀಳರಿಮೆ ಮೂಡಲು ಇವರೇ ಮುಖ್ಯ ಕಾರಣರಾಗುತ್ತಿದ್ದಾರೆ. ತಮಿಳರು ನಡೆಸುತ್ತಿದ್ದ ಕನ್ನಡ ಚಾನಲ್‍ನಲ್ಲಿ ಸರಿಯಾದ ಕನ್ನಡ ಇತ್ತು. ಆದರೆ ಕನ್ನಡಿಗರೇ ನಡೆಸುತ್ತಿರುವ ಕನ್ನಡ ಚಾನಲ್‍ಗಳು ಕನ್ನಡವನ್ನೇ ನಾಶ ಮಾಡುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.  

ಕನ್ನಡವು ಪುಸ್ತಕದಲ್ಲಿ, ಮಾತಿನಲ್ಲಿ ಮಾತ್ರ ಇರುವುದಲ್ಲ. ಕನ್ನಡದ ಸೊಬಗು ನಮ್ಮ ಸುತ್ತಮುತ್ತಲಿನಲ್ಲಿಯೇ ಇದೆ. ಆದರೆ, ಅದನ್ನು ನೋಡುವುದನ್ನು ನಾವು ಕಲಿತಿಲ್ಲ. ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ಏಳೆಂಟು ಲಕ್ಷ ಜನ ಸೇರುತ್ತಾರೆ. ಅಲ್ಲಿ ಕೊನೇ ದಿನ ಒಂದು ವಾಕ್ಯ ಕಾರಣಿಕ ಹೇಳಲಾಗುತ್ತದೆ. ಅದನ್ನು ಜನ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ತಮಗೆ ಬೇಕಾದ ಹಾಗೆ ಅರ್ಥ ಹೇಳುತ್ತಾರೆ. ಈ ರೀತಿಯ ಪುನರ್ ಸೃಷ್ಟಿಯೇ ಕನ್ನಡದ ಸಂಸ್ಕೃತಿ ಎಂದು ಹೇಳಿದರು. 

ಸಂಸ್ಕೃತಿ ಚಿಂತಕ ಡಾ. ಮಲ್ಲಿಕಾರ್ಜುನ ಕಲಮರಹಳ್ಳಿ ಕಾರ್ಯ ಕ್ರಮ ಉದ್ಘಾಟಿಸಿದರು. ಪ್ರಾಂಶುಪಾಲ ಪ್ರೊ. ಶಂಕರ್ ಆರ್. ಶೀಲಿ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಬಸವರಾಜ ತೂಲಹಳ್ಳಿ, ಪ್ರೊ. ವೀರನಾಯಕ, ಪ್ರೊ. ವೀರೇಶ್, ಎಸ್.ಆರ್. ಭಜಂತ್ರಿ, ಡಾ.ಎಲ್. ಮರುಳಸಿದ್ದಪ್ಪ, ಡಾ. ಆರ್.ಸಿ. ನಾಗರಾಜ್, ಡಾ.ನಾರಾಯಣ ಸ್ವಾಮಿ ಇದ್ದರು. ಸ್ನಾತಕೋತ್ತರ ವಿಭಾಗ ಸಂಯೋಜಕ ಡಾ.ಎಂ. ಮಂಜಣ್ಣ ಸ್ವಾಗತಿಸಿದರು. ಪ್ರಭಾಕರ ಅತಿಥಿಗಳನ್ನು ಪರಿಚಯಿಸಿದರು. ವೆಂಕಟೇಶ್ ಬಾಬು ವಂದಿಸಿದರು. ಡಾ. ಶಿವಕುಮಾರ್ ಕಂಪ್ಲಿ ಕಾರ್ಯಕ್ರಮ ನಿರೂಪಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X