Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚುನಾವಣೆಗಳ ಸಾಲುಸಾಲು: 'ಸಕಾಲ'...

ಚುನಾವಣೆಗಳ ಸಾಲುಸಾಲು: 'ಸಕಾಲ' ರ‍್ಯಾಂಕಿಂಗ್‌ನಲ್ಲಿ 22ನೇ ಸ್ಥಾನಕ್ಕೆ ಕುಸಿದ ಶಿವಮೊಗ್ಗ

ತುಮಕೂರು ಪ್ರಥಮ, ಬೆಂಗಳೂರಿಗೆ ಕೊನೆಯ ಸ್ಥಾನ

ವರದಿ: ಬಿ. ರೇಣುಕೇಶ್ವರದಿ: ಬಿ. ರೇಣುಕೇಶ್8 Nov 2018 11:05 PM IST
share
ಚುನಾವಣೆಗಳ ಸಾಲುಸಾಲು: ಸಕಾಲ ರ‍್ಯಾಂಕಿಂಗ್‌ನಲ್ಲಿ 22ನೇ ಸ್ಥಾನಕ್ಕೆ ಕುಸಿದ ಶಿವಮೊಗ್ಗ

ಶಿವಮೊಗ್ಗ, ನ. 8: ಜಿಲ್ಲೆಯಲ್ಲಿ ಒಂದರ ಹಿಂದೊಂದರಂತೆ ಎದುರಾಗುತ್ತಿರುವ ಸಾಲುಸಾಲು ಚುನಾವಣೆಗಳು, ಸ್ಥಳೀಯ ಆಡಳಿತ ಯಂತ್ರದ ಮೇಲೂ ಪರಿಣಾಮ ಬೀರಿದೆ. ಅಧಿಕಾರಿಗಳು ಚುನಾವಣೆಗೆ ಹೆಚ್ಚಿನ ಸಮಯ ಮೀಸಲಿಡುತ್ತಿರುವುದರಿಂದ ಕಾಲಮಿತಿಯಲ್ಲಿ ಕಡತ ವಿಲೇವಾರಿ ಸಾಧ್ಯವಾಗದಂತಾಗಿದೆ. ಇದಕ್ಕೆ 'ಸಕಾಲ' ರ್ಯಾಂಕಿಂಗ್‍ನಲ್ಲಿ ಜಿಲ್ಲೆ ಕೆಳಕ್ಕೆ ಕುಸಿದಿರುವುದೇ ಸಾಕ್ಷಿಯಾಗಿದೆ.

ಇತ್ತೀಚೆಗೆ ರಾಜ್ಯ ಸರ್ಕಾರ ಪ್ರಕಟಿಸಿರುವ 'ಸಕಾಲ ರ್ಯಾಂಕಿಂಗ್' ಪಟ್ಟಿಯಲ್ಲಿ, ಶಿವಮೊಗ್ಗ ಜಿಲ್ಲೆಯು 22 ನೇ ರ್ಯಾಂಕಿಂಗ್ ಪಡೆದುಕೊಂಡಿದೆ. ಸಾಕಷ್ಟು ಹಿನ್ನಡೆ ಅನುಭವಿಸಿದೆ. ಇದು ಅಧಿಕಾರಿ-ನೌಕರರ ವಲಯದಲ್ಲಿ ವ್ಯಾಪಕ ಚರ್ಚೆಗೆಡೆ ಮಾಡಿಕೊಟ್ಟಿದೆ. ನಿರಂತರವಾಗಿ ಎದುರಾಗುತ್ತಿರುವ ಚುನಾವಣೆಗಳೇ 'ಸಕಾಲ ರ್ಯಾಂಕಿಂಗ್'ನಲ್ಲಿ ಜಿಲ್ಲೆಯ ಸಾಧನೆ ಕುಸಿತವಾಗಲು ಕಾರಣವೆಂದು ಆಡಳಿತ ವಲಯ ಹೇಳುತ್ತದೆ.

ರ್ಯಾಂಕಿಂಗ್ ವಿವರ: ಕಳೆದ ನ. 5 ರಂದು ರಾಜ್ಯ ಸರ್ಕಾರ ಪ್ರಕಟಿಸಿದ 'ಸಕಾಲ' ರ್ಯಾಂಕಿಂಗ್ ಪಟ್ಟಿಯ ಅನುಸಾರ ತುಮಕೂರು ಮೊದಲ ಸ್ಥಾನದಲ್ಲಿದೆ. ಉಳಿದಂತೆ ಟಾಪ್- 10 ರೊಳಗೆ ಕ್ರಮವಾಗಿ ರಾಯಚೂರು, ಬಾಗಲಕೋಟೆ, ಚಿಕ್ಕಮಗಳೂರು, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಯಾದಗಿರಿ, ಕಲಬುರಗಿ, ವಿಜಯಪುರ ಜಿಲ್ಲೆಗಳಿವೆ.

ಪಟ್ಟಿಯಲ್ಲಿ ಕ್ರಮವಾಗಿ 20 ರಿಂದ 30 ನೇ ರ್ಯಾಂಕ್ ಪಡೆದ ಜಿಲ್ಲೆಗಳ ವಿವರ ಈ ಮುಂದಿನಂತಿದೆ. ಚಿತ್ರದುರ್ಗ, ಕೋಲಾರ, ಶಿವಮೊಗ್ಗ, ರಾಮನಗರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಕೊಡಗು, ಮೈಸೂರು, ಮಂಡ್ಯ ಹಾಗೂ ಕಡೆಯ ಸ್ಥಾನದಲ್ಲಿ ಬೆಂಗಳೂರು ನಗರವಿದೆ.

ಏನಿದು ರ್ಯಾಂಕಿಂಗ್?: ನಾಗರಿಕರಿಗೆ ಸಕಾಲದಲ್ಲಿ ಸರ್ಕಾರದ ಸೇವೆ ಲಭ್ಯವಾಗಬೇಕು, ನಿರ್ದಿಷ್ಟ ಅವಧಿಯಲ್ಲಿ ಅರ್ಜಿಗಳ ವಿಲೇವಾರಿಗೊಳಿಸುವ ಉದ್ದೇಶದಿಂದ ಕಳೆದ ಹಲವು ವರ್ಷಗಳ ಹಿಂದೆಯೇ ರಾಜ್ಯ ಸರ್ಕಾರ 'ಸಕಾಲ ಯೋಜನೆ' ಜಾರಿಗೊಳಿಸಿದೆ. ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಹಲವು ಸೇವೆಗಳನ್ನು 'ಸಕಾಲ' ವ್ಯಾಪ್ತಿಯಡಿ ತರಲಾಗಿದೆ. 'ಸಕಾಲ ಯೋಜನೆ'ಯಡಿ ನಾಗರಿಕರು ಅರ್ಜಿ ಸಲ್ಲಿಸಿದಾಗ, ಸರ್ಕಾರದ ನಿಗದಿಪಡಿಸಿದ ದಿನದೊಳಗೆ ಸಂಬಂಧಿಸಿ ಅಧಿಕಾರಿ-ನೌಕರರು ಅರ್ಜಿ ವಿಲೇಗೊಳಿಸಬೇಕು. ಒಂದು ವೇಳೆ ವಿಳಂಬ ಮಾಡಿದರೆ ದಂಡ ವಿಧಿಸಲಾಗುತ್ತದೆ.

ಅದರಂತೆ ಕಂದಾಯ ಇಲಾಖೆಯಲ್ಲಿ 'ಸಕಾಲ ಯೋಜನೆ'ಯಡಿ ಸ್ವೀಕರಿಸಿದ ಅರ್ಜಿಗಳ ವಿಲೇವಾರಿಯ ಪ್ರಗತಿಗೆ ಸಂಬಂಧಿಸಿದಂತೆ, 30 ಜಿಲ್ಲೆಗಳು ಸಾಧಿಸಿರುವ ಸಾಧನೆಯ ಬಗ್ಗೆ ನಿಯಮಿತವಾಗಿ ರಾಜ್ಯ ಸರ್ಕಾರ ರ್ಯಾಂಕಿಂಗ್ ಪ್ರಕಟಿಸುತ್ತಿರುತ್ತದೆ. ಅರ್ಜಿಗಳ ವಿಲೇಯಲ್ಲಿ ತೋರಿದ ಸಾಧನೆಗೆ ಅನುಗುಣವಾಗಿ ಜಿಲ್ಲಾವಾರು ರ್ಯಾಂಕಿಂಗ್ ಬಿಡುಗಡೆ ಮಾಡುತ್ತದೆ.

ಶಿವಮೊಗ್ಗ ವಿವರ: ಕಳೆದ ಕೆಲ ವರ್ಷಗಳ ಹಿಂದೆ ಶಿವಮೊಗ್ಗ ಜಿಲ್ಲೆಯು, 'ಸಕಾಲ ರ್ಯಾಂಕಿಂಗ್'ನಲ್ಲಿ ಹಿನ್ನಡೆಯಲ್ಲಿತ್ತು. ಡಾ. ಎಂ. ಲೋಕೇಶ್ ಜಿಲ್ಲಾಧಿಕಾರಿ ಹಾಗೂ ಕೆ. ಚೆನ್ನಬಸಪ್ಪ ಅಪರ ಜಿಲ್ಲಾಧಿಕಾರಿಯಾಗಿದ್ದ ವೇಳೆ, ರ್ಯಾಂಕಿಂಗ್‍ನಲ್ಲಿ ಒಮ್ಮೆ ಮೊದಲ ಸ್ಥಾನ ಪಡೆದುಕೊಂಡಿತ್ತು. ಜೊತೆಗೆ ಟಾಪ್ - 10 ರೊಳಗೆ ಸ್ಥಾನ ಪಡೆದುಕೊಳ್ಳುತ್ತಿತ್ತು.

ಆದರೆ ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಐದಾರು ತಿಂಗಳ ಅವಧಿಯಲ್ಲಿ ನಿರಂತರವಾಗಿ ಎದುರಾಗುತ್ತಿರುವ ಚುನಾವಣೆಗಳು ಆಡಳಿತದ ಮೇಲೆ ಪರಿಣಾಮ ಬೀರುವಂತಾಗಿದೆ. ಅಧಿಕಾರಿ-ಸಿಬ್ಬಂದಿಗಳು ಚುನಾವಣೆಯಲ್ಲಿಯೇ ಹೆಚ್ಚು ತಲ್ಲೀನವಾಗುವಂತಾಗಿದೆ. ಇದರಿಂದ ಸಕಾಲ ರ್ಯಾಂಕಿಂಗ್‍ನಲ್ಲಿ ಹಿನ್ನಡೆ ಆಗಿದೆ. ಆದರೆ ಈ ರ್ಯಾಂಕಿಂಗ್ ನಿಯಮಿತವಾಗಿ ಬದಲಾಗುತ್ತಿರುತ್ತದೆ. ಮುನ್ನಡೆಯಲ್ಲಿರುವ ಜಿಲ್ಲೆಗಳು ಹಿನ್ನಡೆ ಅನುಭವಿಸುತ್ತವೆ. ಇದೆಲ್ಲ ಸರ್ವೇಸಾಮಾನ್ಯ ಸಂಗತಿಯಾಗಿದೆ ಎಂದು ಹೆಸರೇಳಲಿಚ್ಚಿಸದ ಜಿಲ್ಲಾಡಳಿತದ ಹಿರಿಯ ಅಧಿಕಾರಿಯೋರ್ವರು ಹೇಳುತ್ತಾರೆ.

ಸೇವೆ ಸಲ್ಲಿಸಿದ್ದ ಅಧಿಕಾರಿಗಳು: ಸಕಾಲ ರ್ಯಾಂಕಿಂಗ್ ಪಟ್ಟಿಯಲ್ಲಿ ಪ್ರಥಮ ಸ್ಥಾನ ಪಡೆದಿರುವ ತುಮಕೂರು ಜಿಲ್ಲೆಯ ಹಾಲಿ ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‍ ಕುಮಾರ್ ಹಾಗೂ ಅಪರ ಜಿಲ್ಲಾಧಿಕಾರಿಯಾಗಿರುವ ಕೆ. ಚೆನ್ನಬಸಪ್ಪರವರು ಈ ಮೊದಲು ಶಿವಮೊಗ್ಗ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದ್ದರು. ಡಾ. ಕೆ. ರಾಕೇಶ್‍ ಕುಮಾರ್ ವರು ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದರೆ, ಕೆ. ಚೆನ್ನಬಸಪ್ಪರವರು ಅಪರ ಜಿಲ್ಲಾಧಿಕಾರಿಯಾಗಿದ್ದರು.

ಈ ಇಬ್ಬರು ಅಧಿಕಾರಿಗಳು ಸರಿಸುಮಾರು ಎರಡು ವರ್ಷಗಳ ಕಾಲ ಶಿವಮೊಗ್ಗ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ್ದರು. ಉತ್ತಮ ಹೆಸರು ಸಂಪಾದಿಸಿದ್ದರು. ಅಪರ ಜಿಲ್ಲಾಧಿಕಾರಿಯಾಗಿದ್ದ ಕೆ. ಚೆನ್ನಬಸಪ್ಪರವರು, ಈ ಹಿಂದೆ ಶಿವಮೊಗ್ಗ ಜಿಲ್ಲೆಯು ಸಕಾಲ ರ್ಯಾಂಕಿಂಗ್‍ನಲ್ಲಿ ಮೊದಲ ಸ್ಥಾನ ಪಡೆಯುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಜನಸ್ನೇಹಿ ಐ.ಎ.ಎಸ್ ಅಧಿಕಾರಿ: ಕಳೆದ ಕೆಲ ತಿಂಗಳಗಳ ಹಿಂದೆ ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಆಗಮಿಸಿರುವ ಡಾ. ಕೆ.ಎ. ದಯಾನಂದ್‍ರವರು, ಜನಸ್ನೇಹಿ ಐ.ಎ.ಎಸ್ ಅಧಿಕಾರಿ ಎಂಬ ಹೆಸರಿಗೆ ಪಾತ್ರರಾಗಿದ್ದಾರೆ. ಜನಸಾಮಾನ್ಯರು ಮುಕ್ತವಾಗಿ ಭೇಟಿಯಾಗಿ ತಮ್ಮ ಅಹವಾಲು ತೋಡಿಕೊಳ್ಳುವ ವ್ಯವಸ್ಥೆ ಮಾಡಿದ್ದಾರೆ. ಜನತಾ ದರ್ಶನ, ಗ್ರಾಮ ವಾಸ್ತವ್ಯದಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದಾರೆ.

ಆದರೆ ಕೆಲ ತಾಲೂಕು ಆಡಳಿತಗಳ ಕಾರ್ಯನಿರ್ವಹಣೆ ತೃಪ್ತಿದಾಯಕವಾಗಿಲ್ಲ. ಇದರಿಂದ ಸಕಾಲ ರ್ಯಾಂಕಿಂಗ್‍ನಲ್ಲಿ ಜಿಲ್ಲೆ ಹಿನ್ನಡೆ ಅನುಭವಿಸುವಂತಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಸೂಕ್ತ ಗಮನಹರಿಸಬೇಕಾಗಿದೆ. ಕಡತ, ಅರ್ಜಿಗಳ ವಿಲೇಯಲ್ಲಿ ವಿಳಂಬ ಧೋರಣೆ ಅನುಸರಿಸುವವರಿಗೆ ತಕ್ಕ ಶಾಸ್ತಿ ಮಾಡಬೇಕಾಗಿದೆ.

ಸಕಾಲ ರ್ಯಾಂಕಿಂಗ್‍ನಲ್ಲಿ ಮೊದಲ ಸಾಲಿನಲ್ಲಿರುವ 5 ಜಿಲ್ಲೆಗಳು

(5-11-2018 ರ ಮಾಹಿತಿಯಂತೆ)

1. ತುಮಕೂರು 2. ರಾಯಚೂರು 3. ಬಾಗಲಕೋಟೆ 4. ಚಿಕ್ಕಮಗಳೂರು 5. ದಾವಣಗೆರೆ

ಸಕಾಲ ರ್ಯಾಂಕಿಂಗ್‍ನಲ್ಲಿ ಕೊನೆಯ ಸಾಲಿನಲ್ಲಿರುವ 5 ಜಿಲ್ಲೆಗಳು

(5-11-2018 ರ ಮಾಹಿತಿಯಂತೆ)

1. ಬೆಳಗಾವಿ 2. ಕೊಡಗು 3. ಮೈಸೂರು 4. ಮಂಡ್ಯ 5. ಬೆಂಗಳೂರು ನಗರ

share
ವರದಿ: ಬಿ. ರೇಣುಕೇಶ್
ವರದಿ: ಬಿ. ರೇಣುಕೇಶ್
Next Story
X