Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಬೆಲ್ಚಪ್ಪ’ ತುಳು ಸಿನೆಮಾಕ್ಕೆ ಮುಹೂರ್ತ

‘ಬೆಲ್ಚಪ್ಪ’ ತುಳು ಸಿನೆಮಾಕ್ಕೆ ಮುಹೂರ್ತ

ವಾರ್ತಾಭಾರತಿವಾರ್ತಾಭಾರತಿ9 Nov 2018 6:40 PM IST
share
‘ಬೆಲ್ಚಪ್ಪ’ ತುಳು ಸಿನೆಮಾಕ್ಕೆ ಮುಹೂರ್ತ

ಉಡುಪಿ, ನ.9: ಜಯದುರ್ಗಾ ಪ್ರೊಡಕ್ಷನ್ ನಿರ್ಮಿಸುತ್ತಿರುವ ‘ಬೆಲ್ಚಪ್ಪ’ ತುಳು ಸಿನೆಮಾದ ಮುಹೂರ್ತ ಸಮಾರಂಭವು ಶುಕ್ರವಾರ ಬೈಲೂರು ಶ್ರೀಮಹಿಷ ಮರ್ದಿನಿ ದೇವಸ್ಥಾನದಲ್ಲಿ ಜರಗಿತು.

ಕನ್ನಪಾರ್ಡಿ ಶ್ರೀಜಯದುರ್ಗಾ ಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪಕರ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ ಆಚಾರ್ಯ ಕ್ಯಾಮರಾಕ್ಕೆ ಚಾಲನೆ ನೀಡಿದರು. ಉದ್ಯಮಿ ಪ್ರಕಾಶ್ ನಾಯಕ್ ಆರಂಭ ಫಲಕವನ್ನು ನೆರವೇರಿಸಿದರು.

ಉದ್ಯಮಿ ರಾಜೇಶ್ ಕರ್ಕೇರ, ಮೂಡಬಿದ್ರೆ ವಕೀಲರ ಸಂಘದ ಅಧ್ಯಕ್ಷ ನಾಗೇಶ್ ಶೆಟ್ಟಿ, ವಾಮನ ಮುರಳಿ, ಮೋಹನ್‌ದಾಸ್ ರೈ, ಕನ್ನಡ ಚಿತ್ರನಟ ಸಚಿನ್ ಪುರೋಹಿತ್, ರವಿ ಎಸ್.ದೇವಾಡಿಗ, ಮೋಹನ್‌ದಾಸ್ ಹಿರಿಯಡ್ಕ, ಮನೋವೈದ್ಯ ಡಾ.ಪಿ.ವಿ.ಭಂಡಾರಿ, ಯಶೋದ ಕೇಶವ್, ನಗರಸಭೆ ಸದಸ್ಯ ವಿಜಯ ಮುಖ್ಯ ಅತಿಥಿಗಳಾಗಿದ್ದರು.

ಬಳಿಕ ಮಾತನಾಡಿದ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ನಿರ್ದೇಶಕ ರಜನೀಶ್ ದೇವಾಡಿಗ, ಸಂಪೂರ್ಣ ಹಾಸ್ಯಮಯವಾದ ಈ ಸಿನೆಮಾ ವಿಭಿನ್ನ ರೀತಿಯ ಕಥೆಯನ್ನು ಹೊಂದಿದೆ. ಗೆಳೆಯರೇ ಸೇರಿ ಹಣ ಹೊಂದಿಸಿ ಸುಮಾರು 30ಲಕ್ಷ ರೂ. ಬಜೆಟ್‌ನಲ್ಲಿ ಈ ಸಿನೆಮಾವನ್ನು ನಿರ್ಮಿಸುತ್ತಿದ್ದೇವೆ. ಸುಮಾರು 50 ಕಲಾವಿದರು ಇದರಲ್ಲಿ ನಟಿಸುತ್ತಿದ್ದು, ಹೊಸಮುಖಗಳಿಗೆ ಅವಕಾಶ ನೀಡಲಾಗಿದೆ ಎಂದರು.

ಉಡುಪಿ ಮತ್ತು ಮಲ್ಪೆ ಪರಿಸರದಲ್ಲಿ 25 ದಿನಗಳಲ್ಲಿ ಚಿತ್ರೀಕರಣ ಮುಗಿಸಿ, ಯುಗಾದಿ ಸಂದರ್ಭದಲ್ಲಿ ಬಿಡುಗಡೆ ಮಾಡುವ ಉದ್ದೇಶ ಹೊಂದಿದ್ದೇವೆ. ಇದರಲ್ಲಿ ನಾಲ್ಕು ಹಾಡುಗಳು, ಒಂದು ಫೈಟ್ ಇದೆ. ಸಿನೆಮಾಗೆ ಸಂಗೀತ ವಿಕ್ರಮ್ ಸೆಲ್ವ, ವೈ.ಎಸ್.ಶ್ರೀಧರ್ ಸಂಕಲನ ಹಾಗೂ ಸಾಹಸ ಕೌರವ್ ವೆಂಕಟೇಶ್, ನೃತ್ಯ ಸ್ಟಾರ್ ಗಿರಿ ನೀಡಿದ್ದಾರೆ ಎಂದು ಅವರು ಹೇಳಿದರು.

ಚಿತ್ರದ ಸಿನಿಮಾಟೋಗ್ರಾಫರ್ ಲಕ್ಷ್ಮೀಶ ಶೆಟ್ಟಿ ಮಾತನಾಡಿ, ಟ್ರೋಲಿ ಟ್ರಾಕ್ ಬದಲು ದೇಶದಲ್ಲೇ ಪ್ರಥಮ ಎಂಬಂತೆ ಸ್ಟಡಿ ಸೈಕಲ್‌ನ್ನು ಸಿನೆಮಾದಲ್ಲಿ ಬಳಕೆ ಮಾಡಲಾಗಿದೆ. ಹಾಲಿವುಡ್ ಸಿನೆಮಾಗಳಲ್ಲಿ ಬಳಸುವ ಈ ಸೈಕಲ್‌ನ್ನು ನಾನೇ ಸುಮಾರು ಒಂದು ಲಕ್ಷ ರೂ. ವ್ಯಯಿಸಿ ತಯಾರಿಸಿದ್ದೇನೆ ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ಹಾಸ್ಯನಟ ಅರವಿಂದ ಬೋಳಾರ್, ಚಿತ್ರದ ನಾಯಕಿ ಯಶಸ್ವಿನಿ ದೇವಾಡಿಗ, ನಟಿ ಸುಕನ್ಯಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X