Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಿರಿಯ ಚಿಂತಕ ಜ.ಹೊ.ನಾ. ಇನ್ನಿಲ್ಲ

ಹಿರಿಯ ಚಿಂತಕ ಜ.ಹೊ.ನಾ. ಇನ್ನಿಲ್ಲ

ವಾರ್ತಾಭಾರತಿವಾರ್ತಾಭಾರತಿ9 Nov 2018 10:11 PM IST
share
ಹಿರಿಯ ಚಿಂತಕ ಜ.ಹೊ.ನಾ. ಇನ್ನಿಲ್ಲ

ಮೈಸೂರು, ನ.9: ರಾಷ್ಟ್ರಕವಿ ಕುವೆಂಪುರವರ ಆಪ್ತಶಿಷ್ಯ, ನಾಡಿನ ಹಿರಿಯ ವೈಚಾರಿಕ ಚಿಂತಕ, ವೈಜ್ಞಾನಿಕ ಮನೋಧರ್ಮಿ ಪ್ರಗತಿಪರ ಚಿಂತಕ ಜ.ಹೊ.ನಾರಾಯಣಸ್ವಾಮಿ (78) ಇಂದು ನಿಧನರಾಗಿದ್ದಾರೆ. 3-4 ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರು, ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 

ಶುಕ್ರವಾರ ಅವರ ದೇಹದಲ್ಲಿ ರಕ್ತಕಣಗಳು ಕಡಿಮೆಯಾದ ಪರಿಣಾಮ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ನಿಧನಹೊಂದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಜ.ಹೊ.ನಾರಾಯಣಸ್ವಾಮಿ ಅವರು ಪತ್ನಿ ತಾರಾ, ಮಕ್ಕಳಾದ ಜ.ನಾ.ತೇಜಶ್ರೀ ಹಾಗೂ ಶ್ರೀತೇಜಸ್ವಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಜ.ಹೊ.ನಾ ಎಂದೇ ಖ್ಯಾತರಾದ ಇವರು 1941 ಜು.13ರಂದು ಹಾಸನ ತಾಲೂಕಿನ ಜನಿವಾರ ಗ್ರಾಮದ ಹೊನ್ನಯ್ಯ ಮತ್ತು ತಿಮ್ಮಮ್ಮ ದಂಪತಿಯ ಪುತ್ರರಾಗಿ ಜನಿಸಿದರು. ಇವರ ಅಗಲಿಕೆಯಿಂದ ಹಾಸನಕ್ಕೆ ಮಾತ್ರವಲ್ಲದೆ ಇಡೀ ಕನ್ನಡ ಸಾಹಿತ್ಯಕ್ಕೆ ತುಂಬಲಾರದ ನಷ್ಟವುಂಟಾಗಿದೆ.

ಮಹಾಕವಿ ಕುವೆಂಪುರವರ ಬೆರಳೆಣಿಕೆಯ ಆಪ್ತ ಶಿಷ್ಯ ವೃಂದದಲ್ಲಿ ಜ.ಹೊ.ನಾ ಪ್ರಮುಖರು. ಸಾಹಿತ್ಯ ವಲಯದಲ್ಲಿ ಆಲೋಚನೆಯ ದಾರಿದ್ರ್ಯ ಹಿಡಿದು ಸಂಪ್ರದಾಯ ನೇಣುಗಂಬಕ್ಕೆ ತುತ್ತಾದ ಸಂದರ್ಭದಲ್ಲಿ ಜ.ಹೊ.ನಾ ಅದಾರಾಚೆಯ ವೈಚಾರಿಕ ಲೋಕ ದರ್ಶನ ಮಾಡಿಸಿದವರು. ಮಾನವ ಕುಲಂ ತಾನೋಂದೇ ವಲಂ ಎನ್ನುವಂತೆ ವೇದ, ಕುರಾನ್ ಆಚೆಗೆ ನಮ್ಮನ್ನೆಲ್ಲಾ ಕೊಂಡೋಯ್ದು ಮಠ, ಮಂದಿರ, ಚರ್ಚ್, ಮಸೀದಿಗಳ ತೊರೆದು ಹೊರಬಂದು ಮಾನವೀಯ ಮೌಲ್ಯಗಳ ಆವಿರ್ಭವಿಸಿಕೊಳ್ಳುವಂತೆ ಕರೆನೀಡಿದ ಮಾನವತಾವಾದಿ ಜ.ಹೊ.ನಾ. ಪ್ರಾಥಮಿಕ ಶಿಕ್ಷಣದಿಂದ ಪದವಿಪೂರ್ವ ಶಿಕ್ಷಣವನ್ನು ಹಾಸನದಲ್ಲಿಯೇ ಪಡೆದು, ಉದ್ಯೋಗಕ್ಕಾಗಿ ಬೆಂಗಳೂರಿಗೆ ಹೊಗಿ ಮತ್ತೆ ಹಾಸನಕ್ಕೆ ಬಂದು ವಕೀಲಿ ವೃತ್ತಿ ನಡೆಸಿ ಎರಡು ಬಾರಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಸೇವೆ ಸಲ್ಲಿಸಿದ್ದರು.

ಕರ್ನಾಟಕ ಸಾಹಿತ್ಯ ಅಕಾಡಮಿಯ ಸದಸ್ಯರಾಗಿ, ಹಾಸನ ಜಿಲ್ಲಾ ಬಿಜಿವಿಎಸ್ ಸಂಸ್ಥಾಪಕ ಅಧ್ಯಕ್ಷರಾಗಿ, ಸಾಕ್ಷರತಾ ಆಂದೋಲನದ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಕಾರ್ಯದರ್ಶಿಯಾಗಿ, ಸಂವೇದನಾ ಕಲಾವಿದರು ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾಗಿ, ಜಿಲ್ಲಾ ಬರಹಗಾರರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾಗಿ, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಜ.ಹೊ.ನಾ ನಾಡಿನಾದ್ಯಾಂತ ಪ್ರಖ್ಯಾತರಾದವರು. ಇವರ ಅನೇಕ ಕೃತಿಗಳು ವಿವಿಧ ವಿಶ್ವವಿದ್ಯಾನಿಲಯಗಳಿಂದ, ಕನ್ನಡ ಪ್ರಾಧಿಕಾರಗಳಿಂದ ಪ್ರಕಟಗೊಂಡಿವೆ. ರೈತ ಚಳವಳಿಯಲ್ಲಿ ಸಕ್ರಿಯರಾಗಿ ಪಾಲ್ಗೊಂಡಿದ್ದ ಇವರು ಅನೇಕ ಸಮಾಜ ಪರ ಸಂಘ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ.

ಜ.ಹೊ.ನಾ ಕೃತಿಗಳು: ಜಗದ ತೊಟ್ಟಿಲು-ಕವನ ಸಂಕಲನ, ಬೆಳಕಿನ ದಾರಿ, ವಿವೇಕಾನಂದರ ಕ್ರಾಂತಿಕಾರಿ ವಿಚಾರಗಳು, ವೇದ ಕುರಾನ್ ಆಚೆಗೆ, ವಿವೇಕಾನಂದ ಮಾನವತೆಗಾಗಿ ಕಾವಿಯೊಳಗೆ ಕುದಿದ ಕೆಂಡ, ಆವರಣ-ಅನಾವರಣ, ಬ್ರಾಹ್ಮಣ್ಯದ ತಂತ್ರಗಳು, ಸಂಪ್ರದಾಯದ ನೇಣುಗಂಬ, ಚೈತನ್ಯದ ಪೂಜೆ ಮುಂತಾದ ವೈಚಾರಿಕ ಕೃತಿಗಳು, ನರಬಲಿ,-ನಾಟಕ, ಅದಮ್ಯ, ಸಿದ್ಧಾರ್ಥ-ಕಾದಂಬರಿಗಳು, ಸ್ವಾಮಿ ವಿವೇಕಾನಂದ, ಜಯಪ್ರಕಾಶ ನಾರಾಯಣ, ಭಗತ್ ಸಿಂಗ್, ನಿಷ್ಠನ್ಯಾಯವಾದಿ ಎಚ್‌ಎಸ್‌ಎಂ, ಕಾರುಗೋಡಿನ ತೊಟ್ಟಿಮನೆ ಕೆ.ಎಂ. ಚಂದ್ರಶೇಖರ್ ಮುಂತಾದವರ ಜೀವನ ಚರಿತ್ರೆಗಳು, ಹರ್ಮನ್‌ಸೇನ್-ವಾಚಿಕೆ; ಶ್ರೀಕುವೆಂಪು-ಸಂಕೀರ್ಣ; ಭಾರತದ ರೈತ-ಅನುವಾದ; ಬೇಲೂರು ಹಳೆಬೀಡು-ನವಸಾಕ್ಷರಿಗಾಗಿ ಬರೆದ ಬರಹಗಳು ಹೀಗೆ 25ಕ್ಕೂ ಅನೇಕ ಬಗೆಯ ಕೃತಿಗಳನ್ನು ಜ.ಹೊ.ನಾ ಕನ್ನಡ ಸಾರಸ್ವತ ಲೋಕಕ್ಕೆ ನೀಡಿದ್ದಾರೆ.

ಪ್ರಶಸ್ತಿಗಳು: ಇವರ ವೇದ ಕುರಾನ್ ಆಚೆಗೆ ಕೃತಿಗೆ ಡಾ.ಹೆಚ್. ನರಸಿಂಹಯ್ಯ ದತ್ತಿನಿಧಿ ಪ್ರಶಸ್ತಿ, ಬಂದಿದೆ. ಅಲ್ಲದೆ, ಅನಿಕೇತನ ಪ್ರಶಸ್ತಿ, ಹಾಸನ ಜಿಲ್ಲಾ ರಾಜೋತ್ಸವ ಪ್ರಶಸ್ತಿ ಹಾಗೂ ಹಲವು ಸಂಘಗಳಿಂದ ಅನೇಕ ಗೌರವ ಪುರಸ್ಕಾರಗಳು ಲಭಿಸಿವೆ. ಹಾಸನ ಜಿಲ್ಲಾ ಏಳನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X