ನೇಣುಬಿಗಿದು ಯುವಕ ಆತ್ಮಹತ್ಯೆ
ಮಂಗಳೂರು, ನ.9: ಯುವಕನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತೋಟಬೆಂಗ್ರೆಯಲ್ಲಿ ಶುಕ್ರವಾರ ನಡೆದಿದೆ.
ತೋಟಬೆಂಗ್ರೆ ನಿವಾಸಿ ಸನಾತ್ (28) ಆತ್ಮಹತ್ಯೆ ಮಾಡಿಕೊಂಡ ಯುವಕ. ಮೃತ ಯುವಕನು ಕೆಲವು ವರ್ಷಗಳಿಂದ ಮನೆ ಬಿಟ್ಟು ಹೋಗಿದ್ದನು. ಇತ್ತೀಚೆಗೆ ಮನೆಗೆ ವಾಪಸಾಗಿದ್ದನು. ಈತ ಮಾನಸಿಕ ಅಸ್ವಸ್ಥನಾಗಿದ್ದು, ಈ ಕಾರಣದಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.
ಈ ಕುರಿತು ಪಣಂಬೂರು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
Next Story





