ಗುಂಡು ಎಸೆತ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಬಿ.ವಿ ಆದ್ಯ
ಕೊಪ್ಪ,ನ.10: ಪಟ್ಟಣ ಜ್ಞಾನವಾಹಿನೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಬಿ.ವಿ.ಆದ್ಯ ಅಥ್ಲೆಟಿಕ್ಸ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಶನಿವಾರ ಸಂಗಮೇಶ್ವರ ಪೇಟೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲೆಗಳ ಅಥ್ಲೆಟಿಕ್ಸ್ ಸ್ಪರ್ಧೆಯ ಗುಂಡು ಎಸೆತ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಪ್ರತಿಭಾನ್ವಿತ ವಿದ್ಯಾರ್ಥಿಯಾಗಿರುವ ಈಕೆ ಶಾಲೆಯಲ್ಲಿ ಶೈಕ್ಷಣಿಕ ಹಾಗೂ ಸಾಂಸ್ಕ್ರತಿಕ ವಿಭಾಗಗಳಲ್ಲೂ ಉತ್ತಮ ಸಾಧನೆ ಮಾಡಿದ್ದಾಳೆ. ಆದ್ಯ ಬಾಳಗಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ವೆಂಕಪ್ಪ ಹಾಗೂ ಎಸ್.ಸಿ. ರೇಖಾ ದಂಪತಿಗಳ ಸುಪುತ್ರಿ.
Next Story





