ಉಡುಪಿ: ಎಂಸಿಸಿಯ ಮೊಬೈಲ್ ಬ್ಯಾಂಕಿಂಗ್ ಸೇವೆಗೆ ಚಾಲನೆ

ಉಡುಪಿ, ನ.10: ಮಂಗಳೂರು ಕೆಥೊಲಿಕ್ ಕ್ರೆಡಿಟ್ ಕೋ-ಅಪರೇಟಿವ್ ಬ್ಯಾಂಕ್‌ನ (ಎಂಸಿಸಿ) ವತಿಯಿಂದ ಉಡುಪಿ ಜಿಲ್ಲೆಯಲ್ಲಿ ಪ್ರಾರಂಭಗೊಂಡ ಮೊಬೈಲ್ ಬ್ಯಾಂಕಿಂಗ್ ಸೇವೆಗೆ ಶನಿವಾರ ಉಡುಪಿ ಶೋಕಮಾತಾ ಚರ್ಚಿನ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.
ಉಡುಪಿ ಕೆಥೊಲಿಕ್ ಧರ್ಮಪ್ರಾಂತದ ಧರ್ಮಾಧ್ಯಕ್ಷ ಅತಿ ವಂ.ಡಾ. ಜೆರಾಲ್ಡ್ ಐಸಾಕ್ ಲೋಬೊ ಮೊಬೈಲ್ ಬ್ಯಾಂಕಿಂಗ್ ಸೇವೆಗೆ ಚಾಲನೆ ನೀಡಿದರು. ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ವಲಯದ ಪ್ರಧಾನ ಧರ್ಮಗುರು ವಂ. ವಲೇರಿಯನ್ ಮೆಂಡೊನ್ಸಾ, ಉಡುಪಿ ಚೇಂಬರ್ ಆಫ್ ಕಾಮರ್ಸ್‌ನ ಅಧ್ಯಕ್ಷ ಕೃಷ್ಣರಾವ್ ಕೊಡಂಚ, ನ್ಯಾಯವಾದಿ ಮಹಮ್ಮದ್ ಇಕ್ಬಾಲ್ ಉಪಸ್ಥಿತರಿದ್ದರು.
ಉಡುಪಿ ಧರ್ಮಪ್ರಾಂತದ ಕೆಥೊಲಿಕ್ ಸಭಾ ಅಧ್ಯಕ್ಷ ಆಲ್ವಿನ್ ಕ್ವಾಡ್ರಸ್, ಐಸಿವೈಎಂ ಅಧ್ಯಕ್ಷ ಡಿಯೋನ್ ಡಿಸೋಜಾ, ಕೆಥೊಲಿಕ್ ಸ್ತ್ರೀ ಸಂಘಟನೆ ಅಧ್ಯಕ್ಷೆ ಜೆನೆಟ್ ಬಾರ್ಬೋಜಾ, ಬ್ಯಾಂಕಿನ ನಿರ್ದೇಶಕರಾದ ಐರಿನ್ ರೆಬೆಲ್ಲೊ, ಡಾ. ಫ್ರೀಡಾ ಫ್ಲಾವಿಯಾ ಡಿಸೋಜಾ, ಜೆ.ಪಿ ರೊಡ್ರಿಗಸ್, ಡೇವಿಡ್ ಡಿಸೋಜಾ, ಹೆರಾಲ್ಡ್ ಮೊಂತೆರೋ, ಮಾರ್ಸೆಲ್ ಡಿಸೋಜಾ, ಬ್ಯಾಂಕಿನ ಮಹಾ ಪ್ರಬಂಧಕ ಸುನೀಲ್ ಮಿನೇಜಸ್ ಉಪಸ್ಥಿತರಿದ್ದರು.
ನಿರ್ದೇಶಕರಾದ ಎಲ್‌ರೊಯ್ ಕಿರಣ್ ಕ್ರಾಸ್ಟೊ ಸ್ವಾಗತಿಸಿ, ಉಪಾಧ್ಯಕ್ಷ ಜೆರಾಲ್ಡ್ ಜ್ಯೂಡ್ ಡಿಸಿಲ್ವಾ ವಂದಿಸಿದರು. ಒವಿನ್ ರೆಬೆಲ್ಲೊ ಕಾರ್ಯಕ್ರಮ ನಿರೂಪಿಸಿದರು.
ಮೊಬೈಲ್ ಬ್ಯಾಂಕಿಂಗ್ ಸೇವೆಗಳಲ್ಲಿ ಗ್ರಾಹಕರಿಗೆ ಇ-ಸ್ಟ್ಯಾಂಪಿಂಗ್, ವಿದ್ಯಾ ಭವಿಷ್ಯ ಎಸ್‌ಬಿ ಖಾತೆ ತೆರೆಯಲು, ಪಾನ್ ಕಾರ್ಡ್, ಹಿರಿಯ ನಾಗರಿಕರ ಗುರುತು ಚೀಟಿ ಸೇವೆಗಳನ್ನು ಪಡೆಯಲು ಅವಕಾಶವಿದೆ.







