ಜೂಜಾಟ ಆರೋಪ: ಇಬ್ಬರು ಬಂಧನ
ಬಂಟ್ವಾಳ, ನ. 10: ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇರೆಗೆ ಬಂಟ್ವಾಳ ನಗರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಶನಿವಾರ ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕು ಬಿಮೂಡ ಗ್ರಾಮದ ಅಲೆತ್ತೂರು ನಿವಾಸಿಗಳಾದ ಅಬ್ದುಲ್, ಮುಹಮ್ಮದ್ ಝಾಕೀರ್ ಬಂಧಿತರು. ಬಂಧಿತರಿಂದ 1,750 ರೂ. ಹಾಗೂ ಇನ್ನಿತರ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಟ್ವಾಳ ತಾಲೂಕು ಬಿಮೂಡ ಗ್ರಾಮದ ಅಲೆತ್ತೂರು ಎಂಬಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ಜೂಜಾಟದಲ್ಲಿ ತೊಡಗಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ದಾಳಿ ವೇಳೆ ಉಳಿದ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





