Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಾಮಾಜಿಕ ಸ್ಥಿತಿಗತಿಗಳ ದಾಖಲೀಕರಣವೂ...

ಸಾಮಾಜಿಕ ಸ್ಥಿತಿಗತಿಗಳ ದಾಖಲೀಕರಣವೂ ಆಗುತ್ತಿರುವುದು ಸಿನಿಮಾದ ಮಹತ್ವ: ನಿರ್ದೇಶಕ ಗಿರೀಶ್ ಕಾಸರವಳ್ಳಿ

ಚಲನಚಿತ್ರ ರಸಗ್ರಹಣ ಶಿಬಿರ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ10 Nov 2018 8:51 PM IST
share

ಬೆಂಗಳೂರು, ನ. 10: ಕಾಲದಿಂದ ಕಾಲಕ್ಕೆ ಚಲನಚಿತ್ರದ ಬೆಳವಣಿಗೆಯ ಮೂಲಕವೇ ಆಯಾ ಕಾಲದ ಸಾಮಾಜಿಕ ಸ್ಥಿತಿಗತಿಗಳ ದಾಖಲೀಕರಣವೂ ಆಗುತ್ತಿರುವುದು ಸಿನಿಮಾದ ಮಹತ್ವದ ಅಂಶವಾಗಿದೆ ಎಂದು ನಿರ್ದೇಶಕ ಡಾ. ಗಿರೀಶ್ ಕಾಸರವಳ್ಳಿ ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ ವಾರ್ತಾ ಇಲಾಖೆಯ ಸುಲೋಚನಾ ಚಿತ್ರಮಂದಿರದಲ್ಲಿ ಚಲನಚಿತ್ರ ಅಕಾಡೆಮಿ ಹಾಗೂ ವಾರ್ತಾ ಇಲಾಖೆ ಸಹಯೋಗದಲ್ಲಿ ಪೂನಾದ ಫಿಲಂ ಅಂಡ್ ಟೆಲಿವಿಷನ್ ಇನ್ಸ್‌ಟಿಟ್ಯೂಟ್ ವತಿಯಿಂದ ನಡೆಯುತ್ತಿರುವ ಐದು ದಿನಗಳ ಚಲನಚಿತ್ರ ರಸಗ್ರಹಣ ಶಿಬಿರವನ್ನು ಉದ್ಘಾಟಸಿ ಅವರು ಮಾತನಾಡುತ್ತಿದ್ದರು.

ಯಾವುದೇ ಕಲಾ ಮಾಧ್ಯಮಕ್ಕೆ ಇಲ್ಲದ ರಸಗ್ರಹಣ ಸಿನಿಮಾ ಮಾಧ್ಯಮಕ್ಕೆ ಏಕೆ ಬೇಕು ಎಂಬುದನ್ನು ವಿಷದೀಕರಿಸಿದ ಗಿರೀಶ್ ಕಾಸರವಳ್ಳಿ, ಸಿನಿಮಾ ಮಾಧ್ಯಮಕ್ಕೆ ಇರುವ ವಿವಿಧ ಆಯಾಮಗಳು ಅದನ್ನು ಬೇಡುತ್ತವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಕಲಾತ್ಮಕತೆಯ ಆಯಾಮದಲ್ಲಿ ಮಾಡುವ ಚಲನಚಿತ್ರವೊಂದಕ್ಕೆ ಕಥಾ ಹಂದರದ ಜೊತೆ ಜೊತೆಗೆ ನಿರ್ದೇಶಕನ ಸೃಜನಶೀಲತೆಯೂ ಕಾರಣವಾಗುತ್ತದೆ. ಅಂದಿನ ಆ ಪರಿಸರದ ಸಮಕಾಲೀನತೆಯ ಸ್ಪರ್ಷವೂ ಇರುತ್ತದೆ. ಆದುದರಿಂದ ರಸಗ್ರಹಣ ಶಿಬಿರಗಳು ಈ ವಿಶ್ಲೇಷಣೆಗೆ ಪೂರಕವಾದ ಮನಸ್ಸುಗಳನ್ನು ಸೃಷ್ಟಿಸುತ್ತದೆ ಎಂದರು.

ಆಶಯ ಭಾಷಣ ಮಾಡಿದ ಪೂನಾ ಫಿಲಂ ಮತ್ತು ಟೆಲಿವಿಷನ್ ಸಂಸ್ಥೆಯ ನಿರ್ದೇಶಕ ಭೂಪೇಂದ್ರ ಖೈನ್‌ತೊಲ, ಇಡೀ ಭಾರತದಲ್ಲಿ ಪೂನಾ ಫಿಲಂ ಇನ್ಸ್‌ಟಿಟ್ಯೂಟ್ ಸಿನಿಮಾ ರಸಗ್ರಹಣ ಶಿಬಿರವನ್ನು ನಡೆಸಲಾಗುತ್ತದೆ. ಜನಸಾಮಾನ್ಯನಿಗೂ ಸಿನಿಮಾ ತಂತ್ರಜ್ಞಾನವನ್ನು ಸುಲಭವಾಗಿ ದಾಟಿಸುವ ಕೆಲಸವನ್ನು ಈ ಮೂಲಕ ನಡೆಸಲಾಗುತ್ತಿದೆ ಎಂದರು.

ಚಲನಚಿತ್ರ ಆಸಕ್ತಿ ಬೆಂಗಳೂರಿನಂತಹ ಪ್ರದೇಶದಲ್ಲಿ ಹೆಚ್ಚಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಅವರು, ಮುಂದಿನ ದಿನಗಳಲ್ಲಿ ಬೆಂಗಳೂರು ಜಗತ್ತಿನ ಪ್ರಮುಖ ಸಿನಿಮಾ ಕೇಂದ್ರವಾಗಲಿರುವ ವಿಶ್ವಾಸ ವ್ಯಕ್ತಪಡಿಸಿದರು. ಅಕಾಡೆಮಿ ರಿಜಿಸ್ಟ್ರಾರ್ ಎಚ್.ಬಿ.ದಿನೇಶ್ ಮಾತನಾಡಿ, ಅಕಾಡೆಮಿ ಮುಂದಿನ ದಿನಗಳಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹೆಚ್ಚಾಗಿ ನಡೆಸಲಿದೆ ಎಂದರಲ್ಲದೆ, ಚಲನಚಿತ್ರ ರಸಗ್ರಹಣ ಶಿಬಿರಕ್ಕೆ ಯುವ ಉತ್ಸಾಹಿ ನಿರ್ದೇಶಕರು ಆಸಕ್ತಿ ತೋರಿರುವುದು ಗಮನಾರ್ಹ ಎಂದರು.

ಜಿಲ್ಲಾ ಮಟ್ಟದಲ್ಲೂ ಚಲನಚಿತ್ರ ರಸಗ್ರಹಣ ಶಿಬಿರವನ್ನು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದ ಅವರು ಪ್ರಕಟಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಅಕಾಡೆಮಿ ಅಧ್ಯಕ್ಷ ಡಾ.ನಾಗತಿಹಳ್ಳಿ ಚಂದ್ರಶೇಖರ್, ನಮ್ಮ ಮಾತೃಭಾಷೆಯಲ್ಲೇ ಅಭಿವ್ಯಕ್ತಿಸುವ ಸಿನಿಮಾಗಳು ಹೆಚ್ಚು ಪ್ರಯೋಗಶೀಲವಾಗಿರುತ್ತವೆ. ಕನ್ನಡ ಚಲನ ಚಿತ್ರರಂಗದ ಹೆಗ್ಗಳಿಕೆಯು ಅದೇ ಆಗಿದೆ ಎಂದು ಹೇಳಿದರು.

ಪೂನಾ ಫಿಲಂ ಇನ್ಸ್‌ಟಿಟ್ಯೂಟ್ ತಜ್ಞರಾದ ಪಂಕಜ್ ಸಕ್ಸೇನಾ ಹಾಗೂ ಮನೀಶ್ ಭಾರದ್ವಾಜ್ ಮಾತನಾಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಂಟಿ ನಿರ್ದೇಶಕ ಎ.ಆರ್. ಪ್ರಕಾಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X