ಬೆಂಗಳೂರು: ನ.18ಕ್ಕೆ ಕನ್ನಡ ಅಧಿವೇಶನ
ಬೆಂಗಳೂರು, ನ. 10: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಕೇಂದ್ರ ಕನ್ನಡ ಕ್ರಿಯಾ ಸಮಿತಿಯು ಸಾರಿಗೆ ಸಂಸ್ಥೆಯಲ್ಲಿ ಕನ್ನಡ ಹಾಗೂ ಕನ್ನಡಿಗರ ಹಿತಾಸಕ್ತಿಯನ್ನು ಕಾಪಾಡಲು ನ.18ರಂದು ಗದಗದಲ್ಲಿ 9ನೆ ರಾಜ್ಯ ಮಟ್ಟದ ಅಧಿವೇಶನವನ್ನು ಹಮ್ಮಿಕೊಳ್ಳಲಾಗಿದೆ.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಕ್ರಿಯಾ ಸಮಿತಿಯ ಅಧ್ಯಕ್ಷ ವ.ಚ.ಚನ್ನೇಗೌಡ ಮಾತನಾಡಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ.ಎಸ್.ಜಿ.ಸಿದ್ಧಾರಾಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮಾಜಿ ಸಚಿವ ಎಚ್.ಕೆ.ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರು ಪುಸ್ತಕ ಬಿಡುಗಡೆ ಮಾಡಲಿದ್ದು, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಪಿ.ರಾಜೇಂದ್ರಚೋಳನ್ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
Next Story





