Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮತಕ್ಕಾಗಿ ಭಿನ್ನಾಭಿಪ್ರಾಯ...

ಮತಕ್ಕಾಗಿ ಭಿನ್ನಾಭಿಪ್ರಾಯ ಮೂಡಿಸುವವರನ್ನು ಖಂಡಿಸಬೇಕು: ಸಚಿವ ಎಸ್.ಆರ್ ಶ್ರೀನಿವಾಸ್

ದಾವಣಗೆರೆ ಜಿಲ್ಲಾಡಳಿತದಿಂದ ಟಿಪ್ಪು ಜಯಂತಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ10 Nov 2018 10:13 PM IST
share
ಮತಕ್ಕಾಗಿ ಭಿನ್ನಾಭಿಪ್ರಾಯ ಮೂಡಿಸುವವರನ್ನು ಖಂಡಿಸಬೇಕು: ಸಚಿವ ಎಸ್.ಆರ್ ಶ್ರೀನಿವಾಸ್

ದಾವಣಗೆರೆ,ನ.10: ಮತಕ್ಕಾಗಿ ಸಮುದಾಯಗಳ ಮಧ್ಯೆ ಭಿನ್ನಾಭಿಪ್ರಾಯ ಮೂಡಿಸುವ ಕೆಲಸ ಮಾಡುತ್ತಿರುವವರನ್ನು ಪ್ರತಿಯೊಬ್ಬರು ಖಂಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಆರ್ ಶ್ರೀನಿವಾಸ್ ಕರೆ ನೀಡಿದರು.

ನಗರದ ಹೈಸ್ಕೂಲ್ ಮೈದಾನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸ್ವಾತಂತ್ರಕ್ಕಾಗಿ ಬ್ರಿಟೀಷರ ವಿರುದ್ಧ ಟೊಂಕಕಟ್ಟಿ ನಿಂತು ಹೋರಾಡಿ, ಸ್ವಾತಂತ್ರಕ್ಕಾಗಿ ತನ್ನ ಮಕ್ಕಳನ್ನೇ ಒತ್ತೆಯಾಗಿಟ್ಟ ಮಹಾನ್ ವೀರ, ದೇಶಪ್ರೇಮಿ ಟಿಪ್ಪು ಅವರ ಜಯಂತಿಗೆ ಅಪಸ್ವರ, ನೀಚಕಾರ್ಯಕ್ಕೆ ಮುಂದಾಗಿದ್ದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ಟಿಪ್ಪು ಆಡಳಿತದಲ್ಲಿ ಉಳುವವನೇ ಭೂಮಿ ಒಡೆಯ ಕಾನೂನು ಜಾರಿಗೆ ತಂದು ಕೊಟ್ಯಂತರ ಬಡವರಿಗೆ ಭೂಮಿ ದಕ್ಕುವಂತೆ ಮಾಡಿದರು, ರೇಷ್ಮೆ ಉತ್ಪನ್ನಕ್ಕೆ ಉತ್ತೇಜನ ಸೇರಿದಂತೆ ಮನುಕುಲಕ್ಕೆ ಒಳಿತಾಗುವ ನೂರಾರು ಕಾರ್ಯ ಮಾಡಿದ ಟಿಪ್ಪು ಜಯಂತಿಯನ್ನು ಎಲ್ಲರೂ ಎಲ್ಲಾ ಸಮಾಜದವರು ಒಟ್ಟಾಗಿ ಸೇರಿ ಆಚರಿಸುವಂತಾಗಬೇಕು ಎಂದು ಅವರು ಆಶಿಸಿದರು.

ಮೈಸೂರು ಹುಲಿ, ದೇಶಕಂಡ ಅಪ್ರತಿಮ ಹೋರಾಟಗಾರ, ಬ್ರಿಟೀಷರಿಗೆ ಸಿಂಹಸ್ವಪ್ನವಾಗಿದ್ದ ಟಿಪ್ಪು ಜಯಂತಿ ಆಚರಿಸುತ್ತಿರುವುದು ನಮ್ಮ ದೇಶದ ಹೆಮ್ಮೆ. ಮಹಾತ್ಮ ಗಾಂಧಿಜೀ ಮನುಕುಲದ ಒಳಿತಿಗಾಗಿ ಸರ್ವಜನಾಂಗದ ಶಾಂತಿಗಾಗಿ ಸ್ವಾತಂತ್ರ ತಂದುಕೊಟ್ಟರು. ಆದರೆ, ಟಿಪ್ಪು ಜಯಂತಿ ಆಚರಣೆಗೆ ವಿರೋಧ ವ್ಯಕ್ತವಾಗುತ್ತಿರುವುದು ನಾಗರಿಕ ಸಮಾಜ ತಲೆತಗ್ಗಿಸುವ ಕಾರ್ಯವಾಗಿದೆ ಎಂದು ಅವರು ವಿಷಾಧ ವ್ಯಕ್ತಪಡಿಸಿದರು.

ಕೆಲವರು ಹಿಂದೂ ಮುಸ್ಲಿಮರನ್ನು ವಿಭಾಗಗೊಳಿಸಿದರೆ ಹಿಂದೂ ಮತಗಳೆಲ್ಲಾ ಒಟ್ಟಾಗುತ್ತವೆ ಎಂದು ಭಾವಿಸಿ ಸಮಾಜದಲ್ಲಿ ಹುಳಿ ಹಿಂಡುವ ದುರಾಲೋಚನೆಯಲ್ಲಿ ತೊಡಗಿದ್ದಾರೆ. ಆದರೆ, ಇಲ್ಲಿ ಎಲ್ಲರಿಗೂ ಸ್ವಾತಂತ್ರವಿದೆ. ಸ್ವತಂತ್ರ ಬದುಕು ರೂಪಿಸಿಕೊಳ್ಳುವ ಹಕ್ಕಿದೆ. ಪ್ರಧಾನಿ ಮೋದಿ ಸರ್ವರೂ ಸಮಾನರು ಎಂದು ಭಾಷಣ ಮಾಡುತ್ತಾರೆ. ಆದರೆ, ಇಲ್ಲಿ ಟಿಪ್ಪು ಜಯಂತಿಗೂ ವಿರೋಧ ವ್ಯಕ್ತವಾಗುತ್ತಿದೆ. ಇದು ಪ್ರಧಾನಿ ಡೋಂಗಿತನ ತೋರಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ದಾವಣಗೆರೆ ಜಿಲ್ಲೆಯಲ್ಲಿ 2 ಲಕ್ಷಕ್ಕೂ ಅಧಿಕ ಮುಸ್ಲಿಂ ಬಾಂಧವರಿದ್ದರೂ ಈ ಕಾರ್ಯಕ್ರಮಕ್ಕೆ ಬೆರಳೆಣಿಕೆಯಲ್ಲಿ ಸೇರಿದ್ದಾರೆ. ಆದರೆ, ಮುಂದಿನ ದಿನಗಳಲ್ಲಿ ಎಲ್ಲರೂ ಭಾಗಿಯಾಗಬೇಕು ಎಂದು ಅವರು ಮನವಿ ಮಾಡಿದರು.

ನವದೆಹಲಿ ಕೇಂದ್ರ ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರದ ಸದಸ್ಯ, ರಂಗಕರ್ಮಿ ರವೀಂದ್ರನಾಥ್ ಸಿರಿವರ ಟಿಪ್ಪು ಕುರಿತು ವಿಶೇಷ ಉಪನ್ಯಾಸ ನೀಡಿದರು. ಜಿಲ್ಲಾ ಸುನ್ನಿ ಉಲಮಾ ಸಮಿತಿ ಅಧ್ಯಕ್ಷ ಮೌಲಾನಾ ಮಹಮದ್ ಹನೀಫ್ ರಝಾ ಸಾನಿಧ್ಯ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಎಚ್.ಎಸ್. ಶಿವಶಂಕರ್, ಮೇಯರ್ ಶೋಭಾ ಪಲ್ಲಾಗಟ್ಟೆ, ಉಪಮೇಯರ್ ಚಮನ್‍ ಸಾಬ್, ವಕ್ಫ್ ಮಂಡಳಿ ಅಧ್ಯಕ್ಷ ಮಹಮದ್ ಸಿರಾಜ್, ಸಾಧಿಕ್ ಪೈಲ್ವಾನ್, ಅಮಾನುಲ್ಲಾಖಾನ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಎಸ್ಪಿ ಆರ್. ಚೇತನ್, ಉಪವಿಭಾಗಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಮತ್ತಿತರರಿದ್ದರು. ಸುಮತಿ ಜಯಪ್ಪ ನಿರೂಪಿಸಿದರು. ಕುಮಾರ ಬೆಕ್ಕೇರಿ ಸ್ವಾಗತಿಸಿದರು.

ಜೈಲಲ್ಲಿ ಮಾಡೋದೇ ಬೆಸ್ಟ್!

ವಿಪ ಸದಸ್ಯ ಅಬ್ದುಲ್ ಜಬ್ಬಾರ್ ಕೆ. ಮಾತನಾಡಿ, ಟಿಪ್ಪು ಜಯಂತಿಯನ್ನೂ ಇಷ್ಟೊಂದು ಭದ್ರತೆ ನಡುವೆ ಮಾಡುತ್ತಿರುವುದು ನನಗೆ ತೀವ್ರ ಬೇಸರ ಮೂಡಿಸಿದೆ. ಇದರ ಬದಲು ಜೈಲಲ್ಲೇ ಟಿಪ್ಪು ಜಯಂತಿ ಆಚರಿಸಬಹುದಿತ್ತು ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಯಾರಿಗೋ ಹೆದರಿಕೊಂಡು ಟಿಪ್ಪು ಜಯಂತಿ ಮಾಡುವುದಾದರೇ ಇನ್ನು ಮುಂದೆ ಸಾರ್ವಜನಿಕವಾಗಿ ಆಚರಿಸುವುದೇ ಬೇಡ, ಬೇಕಾದರೆ ನಾವೇ ನಮ್ಮ ನಮ್ಮ ಮನೆಗಳಲ್ಲಿ ಆಚರಿಸಿಕೊಳ್ಳುತ್ತೇವೆ. ನಾವು ದೇವರೊಬ್ಬನನ್ನು ಬಿಟ್ಟು ಮತ್ತಾರಿಗೂ ಹೆದರಲ್ಲ. ಆದ್ದರಿಂದ ಕಾರ್ಯಕ್ರಮ ಮಾಡುವುದಾದರೇ ಬಹಿರಂಗವಾಗಿ ಎಲ್ಲರೊಟ್ಟಿಗೆ ಆಚರಿಸಿ ಇಲ್ಲದಿದ್ದರೇ ಮುಂದಿನ ಬಾರಿ ಇಂತಹ ಕಾರ್ಯಕ್ರಮಕ್ಕೆ ನಾನು ಬರುವುದೇ ಇಲ್ಲ ಎಂದು ಅವರು ತಿಳಿಸಿದರು.

ಇನ್ನೊಂದು ಸಮಾಜಕ್ಕೆ ಕೇಡು ಬಯಸುವವನು ಮುಸ್ಲಿಂ ಅಲ್ಲವೇ ಅಲ್ಲ. ಅಲ್ಲದೆ, ಇಲ್ಲಿ ಹಿಂದೂ ಮುಸ್ಲಿಮರು ಅಣ್ಣ ತಮ್ಮಂದಿರಂತಿದ್ದೇವೆ. ಹಾಗಾಗಿ, ಎಲ್ಲರೂ ಸೇರಿ ಒಟ್ಟಿಗೆ ಯಾವುದೇ ಭಯವಿಲ್ಲದೇ ಜಯಂತಿ ಆಚರಿಸೋಣ ಎಂದು ಅವರು ಮನವಿ ಮಾಡಿದರು.

ಬಿಗಿ ಭದ್ರತೆಯಲ್ಲಿ ಆಚರಣೆ

ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ಟಿಪ್ಪು ಜಯಂತಿಗೆ ಸಂಪೂರ್ಣವಾಗಿ ಭದ್ರತೆ ಒದಗಿಸಲಾಗಿತ್ತು. ಕಾರ್ಯಕ್ರಮ ಸ್ಥಳದ ಸುತ್ತ ತಗಡಿನ ಕಾಂಪೌಂಡ್ ನಿರ್ಮಿಸಲಾಗಿತ್ತು. ಕಾರ್ಯಕ್ರಮಕ್ಕೆ ಬಂದ ಪ್ರತಿಯೊಬ್ಬರನ್ನು ತಪಾಸಣೆ ನಡೆಸಿ ಒಳಬಿಡಲಾಯಿತು. ಕಾರ್ಯಕ್ರಮಕ್ಕೆ ದಾವಣಗೆರೆ ಉತ್ತರ ಹಾಗೂ ದಕ್ಷಿಣದ ಶಾಸಕರಾಗಲೀ, ಬಿಜೆಪಿಗರಾಗಲೀ ಆಗಮಿಸಿರಲಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X