ಜೋಕಟ್ಟೆ ಅಂಜುಮಾನ್ ಸಂಸ್ಥೆಯಲ್ಲಿ ಶಾಲಾ ಶಿಕ್ಷಕರಿಗೆ ಕಾರ್ಯಾಗಾರ

ಮಂಗಳೂರು, ನ.12: ಜೋಕಟ್ಟೆಯ ಅಂಜುಮಾನ್ ಖುವ್ವತುಲ್ ಇಸ್ಲಾಮ್ ಶಿಕ್ಷಣ ಸಂಸ್ಥೆಯ ಸುವರ್ಣ ಮಹೋತ್ಸವದ ಅಂಗವಾಗಿ ಶನಿವಾರ ಸುಮಾರು 17 ಶಾಲಾ 117 ಶಿಕ್ಷಕರಿಗೆ ಕಾರ್ಯಾಗಾರ ನಡೆಯಿತು.
ದ.ಕ.ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೈ. ಶಿವರಾಮಯ್ಯ ಕಾರ್ಯಾಗಾರ ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷ ಹಾಜಿ ಮುಹಮ್ಮದ್ ಸಿರಾಜ್ ಮನೆಗಾರ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮಂಗಳೂರು ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ, ಅಂಜುಮಾನ್ ಸಂಸ್ಥೆಯ ಮಾಜಿ ಅಧ್ಯಕ್ಷ ಬಿ. ಮುಹಮ್ಮದ್, ಉಪಮೇಯರ್ ಮುಹಮ್ಮದ್ ಕುಂಜತ್ತಬೈಲ್, ಟಿಆರ್‌ಎಫ್ ಅಧ್ಯಕ್ಷ ರಿಯಾಝ್ ಕಣ್ಣೂರು, ಅಂಜುಮಾನ್ ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ಹಾಜಿ ಬಿ.ಎಸ್.ಹುಸೈನ್, ಸುವರ್ಣ ಮಹೋತ್ಸವ ಕಾರ್ಯಕ್ರಮ ನಿರ್ದೇಶಕ ಹಾಜಿ ಮೂಸಬ್ಬ ಪಿ.ಬ್ಯಾರಿ, ಸಂಸ್ಥೆಯ ಉಪಾಧ್ಯಕ್ಷ ಹಾಜಿ ಜೆ.ಎ. ಖಾದರ್, ಪ್ರಾಂಶುಪಾಲೆ ಡಾ. ಶಾಂತಿ ವಿಜಯಾ, ಮುಖ್ಯ ಶಿಕ್ಷಕಿ ಶುಭಾ ರವೀಂದ್ರ ಭಾಗವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಅರುಣಾ, ಸ್ಟಾನಿ ಎ.ಸಿ., ಸುಮಂಗಳಾ ನಾಯಕ್ ಭಾಗವಹಿಸಿದ್ದರು. ಅಂಜುಮಾನ್‌ನ ಹಾಜಿ ಬಿ.ಎ. ರಶೀದ್ ಸ್ವಾಗತಿಸಿ ದರು. ಕಾರ್ಯದರ್ಶಿ ಮುಹಮ್ಮದ್ ರಫೀಕ್ ವಂದಿಸಿದರು.





