ಕರಾವಳಿ ಉತ್ಸವಕ್ಕೆ ಕಲಾ ತಂಡಗಳಿಂದ ಅರ್ಜಿ ಆಹ್ವಾನ
ಮಂಗಳೂರು, ನ.12: ದ.ಕ.ಜಿಲ್ಲಾಡಳಿತದಿಂದ ಕರಾವಳಿ ಉತ್ಸವವು ಡಿ.21ರಿಂದ 30ರವರೆಗೆ ನಡೆಯಲಿದೆ. ಕರಾವಳಿ ಉತ್ಸವದ ವಿವಿಧ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಲು ಜಿಲ್ಲೆಯ ವಿವಿಧ ಕಲಾ ತಂಡಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಕಲಾತಂಡಗಳು ಅರ್ಜಿಗಳನ್ನು ಸಲ್ಲಿಸುವಾಗ ತಮ್ಮ ಕಲಾಪ್ರಕಾರ, ಈ ಹಿಂದೆ ನೀಡಿರುವ ಕಾರ್ಯಕ್ರಮಗಳ ಬಗ್ಗೆ ವಿವರ, ಛಾಯಾಚಿತ್ರಗಳು ಮತ್ತು ಆ ಬಗ್ಗೆ ಪತ್ರಿಕಾ ವರದಿಗಳನ್ನೊಳಗೊಂಡ ದಾಖಲೆಗಳೊಂದಿಗೆ ಅರ್ಜಿಯನ್ನು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತುಳು ಭವನ, ಉರ್ವ ಸ್ಟೋರ್, ಮಂಗಳೂರು-575006 ಇವರಿಗೆ ನ.23ರೊಳಗೆ ತಲುಪುವಂತೆ ಕಳುಹಿಸಲು ಪ್ರಕಟನೆ ತಿಳಿಸಿದೆ.
Next Story





