Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣಗೆರೆ: ಖರೀದಿ ಕೇಂದ್ರ ತೆರೆಯಲು...

ದಾವಣಗೆರೆ: ಖರೀದಿ ಕೇಂದ್ರ ತೆರೆಯಲು ಆಗ್ರಹಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ12 Nov 2018 10:56 PM IST
share
ದಾವಣಗೆರೆ: ಖರೀದಿ ಕೇಂದ್ರ ತೆರೆಯಲು ಆಗ್ರಹಿಸಿ ಪ್ರತಿಭಟನೆ

ದಾವಣಗೆರೆ,ನ.12: ಖರೀದಿ ಕೇಂದ್ರ ತೆರೆಯಲು ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ, ಜಿಲ್ಲಾ ಸಮಿತಿ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.  

ನಗರದ ಜಯದೇವ ವೃತ್ತದಿಂದ ರೈತರು ಹಳೆ ಪಿ.ಬಿ.ರಸ್ತೆ  ಮಾರ್ಗವಾಗಿ ಘೋಷಣೆಗಳನ್ನು ಕೂಗುತ್ತಾ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮುತ್ತಿಗೆ ಹಾಕುವ ಮೂಲಕ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.   

ರೈತ ಸಂಘದ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ  ಮಾತನಾಡಿ, ಕೇಂದ್ರ ಸರ್ಕಾರವು ಮೆಕ್ಕೆಜೋಳ, ಭತ್ತಕ್ಕೆ ಬೆಂಬಲ ಬೆಲೆ ನೀಡಿದ್ದು, ಅದಕ್ಕೆ ರಾಜ್ಯ ಸರ್ಕಾರವು ಬತ್ತಕ್ಕೆ 2000 ರೂ., ಮೆಕ್ಕೆಜೋಳಕ್ಕೆ 1500 ರೂ. ಬೋನಸ್ ನೀಡಬೇಕು. ಖರೀದಿ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಮೆಕ್ಕೆಜೋಳ, ಭತ್ತ ಖರೀದಿ ಮಾಡಬೇಕು ಎಂದು ಒತ್ತಾಯಿಸಿದರು. 

ಶೇಂಗಾ, ಬತ್ತ, ಮೆಕ್ಕೆಜೋಳ, ಸೂರ್ಯಕಾಂತಿಗೆ ಬೆಂಬಲ ಬೆಲೆಯ ಜೊತೆಗೆ ಬೋನಸ್ ನೀಡಿ, ಖರೀದಿ ಕೇಂದ್ರದ ಮೂಲಕ ಖರೀದಿ ಪ್ರಕ್ರಿಯೆ ಆರಂಭಿಸ ಬೇಕು. ಕೇಂದ್ರ, ರಾಜ್ಯ ಸರ್ಕಾರಗಳು ಘೋಷಿಸಿರುವ ಬೆಂಬಲ ಬೆಲೆಗಿಂತಲೂ ಕಡಿಮೆ ದರಕ್ಕೆ ಖರೀದಿಸುವ ಖರೀದಿದಾರರ ಲೈಸೆನ್ಸ್ ರದ್ಧುಪಡಿಸುವ ಜೊತೆಗೆ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಈ ನಿಟ್ಟಿನಲ್ಲಿ ಎಪಿಎಂಸಿ ಕಾಯ್ದೆಯನ್ನು ರಾಜ್ಯ ಸರ್ಕಾರ ಜಾರಿಗೆ ತರಬೇಕು ಎಂದು ಅವರು ಆಗ್ರಹಿಸಿದರು. 

ದಾವಣಗೆರೆ ಜಿಲ್ಲೆಯ ಬೆಳೆ ನಷ್ಟ ವಿವರವನ್ನು ಸಮರ್ಪಕವಾಗಿ ಕೃಷಿ ಇಲಾಖೆ ನೀಡಿಲ್ಲ. ಶೇ.50ರಷ್ಟು ಮಾತ್ರ ಬೆಳೆ ಹಾನಿ ಬಗ್ಗೆ ಸರ್ಕಾರಕ್ಕೆ ವರದಿ ನೀಡಿದೆ. ಇದು ತಪ್ಪು ಗ್ರಹಿಕೆಯಿಂದ ಕೂಡಿರುವ ಬೆಳೆ ಹಾನಿ ವರದಿಯಾಗಿದೆ. ಜಿಲ್ಲೆಯಲ್ಲಿ ಶೇ.80ರಷ್ಟು ಬೆಳೆ ನಾಶವಾಗಿದ್ದು, ಜಿಲ್ಲಾಡಳಿತವು ತಕ್ಷಣವೇ ಬೆಳೆ ಹಾನಿ ಬಗ್ಗೆ ಮರು ಪರಿಶೀಲನೆ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಬೆಳೆ ಹಾನಿಯಿಂದ ಆಗಿರುವ ನಷ್ಟ, ಹಾನಿ ಬಗ್ಗೆ ವಾಸ್ತವ ವರದಿ ನೀಡಬೇಕು ಎಂದು ಒತ್ತಾಯಿಸಿದರು. 

ಅರಸನಾಳು ಸಿದ್ದಪ್ಪ, ಚಿಕ್ಕಮಲ್ಲನಹಳ್ಳಿ ಚಿರಂಜೀವಿ, ಗುಮ್ಮನೂರು ಬಸವರಾಜ, ಯಲೋದಹಳ್ಳಿ ರವಿಕುಮಾರ, ದ್ಯಾಮಜ್ಜಿ ಹನುಮಂತಪ್ಪ, ಆಲೂರು ಪರಶುರಾಮ, ಗಡಿಮಾಕುಂಟೆ ಬಸವರಾಜಪ್ಪ, ಇಂಗಳಗುಂದಿ ದುರುಗಪ್ಪ, ಅರಕೇರಿ ನಾಗರಾಜ, ಲಕ್ಷ್ಮಣ ನಾಯ್ಕ, ಪುಟ್ಟನಾಯ್ಕ, ಹುಚ್ಚವ್ವನಹಳ್ಳಿ ಪ್ರಕಾಶ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X