Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕನಕಪುರ: ಮಾರಕಾಸ್ತ್ರಗಳಿಂದ ಕಡಿದು...

ಕನಕಪುರ: ಮಾರಕಾಸ್ತ್ರಗಳಿಂದ ಕಡಿದು ಜೆಡಿಎಸ್ ದಲಿತ ಮುಖಂಡನ ಹತ್ಯೆ

ವಾರ್ತಾಭಾರತಿವಾರ್ತಾಭಾರತಿ12 Nov 2018 11:08 PM IST
share
ಕನಕಪುರ: ಮಾರಕಾಸ್ತ್ರಗಳಿಂದ ಕಡಿದು ಜೆಡಿಎಸ್ ದಲಿತ ಮುಖಂಡನ ಹತ್ಯೆ

ಕನಕಪುರ, ನ.12: ಜೆಡಿಎಸ್ ರಾಜ್ಯ ಎಸ್ಸಿ-ಎಸ್ಟಿ ಘಟಕದ ಮುಖಂಡರೊಬ್ಬರನ್ನು ಮೂವರು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರ ಗಳಿಂದ ಕಡಿದು ಹತ್ಯೆಗೈದಿರುವ ಘಟನೆ ಕನಕಪುರ ಟೌನ್ ಠಾಣಾ ವ್ಯಾಪ್ತಿಯಲ್ಲಿ ಸಂಜೆ 7:15ರ ಸುಮಾರಿಗೆ ನಡೆದಿದೆ.

ತಾಲೂಕಿನ ಕಸ್ಬ ಹೋಬಲಿಯ ಪಿ.ರಾಮಪುರ ನಿವಾಸಿ, ಪ್ರಸಕ್ತ ಕನಕಪುರ ನಗರದಲ್ಲಿ ನಿರ್ವಾಹಣೇಶ್ವರ ಗಿರೀಶ್ ಕಲ್ಯಾಣ ಮಂಟಪದ ಬಳಿ ವಾಸವಿರುವ ಆರ್.ಟಿ.ರಾಜ್‌ಗೋಪಾಲ್(42) ಕೊಲೆಯಾದವರು. ಇವರು ಜೆಡಿಎಸ್ ರಾಜ್ಯ ಎಸ್ಸಿ ಎಸ್ಟಿ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಸೋಮವಾರ ಸಂಜೆ ಪಟ್ಟಣದ ಹಳೇ ಪೊಲೀಸ್ ಠಾಣಾ ರಸ್ತೆಯಲ್ಲಿರುವ ಹೊಟೇಲ್ ಒಂದರಲ್ಲಿ ತನ್ನ ಸ್ನೇಹಿತರೊಂದಿಗೆ ಚಾ ಕುಡಿಯುತ್ತಿದ್ದಾಗ ಅವರ ಮೊಬೈಲ್‌ಗೆ ಕರೆಯೊಂದು ಬಂದಿದ್ದು, ಮೊಬೈಲ್‌ನಲ್ಲಿ ಮಾತನಾಡುತ್ತಾ ಅವರು ಹೊಟೇಲ್‌ನಿಂದ ಹೊರ ಹೋಗಿದ್ದರು ಎನ್ನಲಾಗಿದೆ. ಹೊಟೇಲ್‌ನಿಂದ ಹೊರ ಹೋದ ಅವರು ಜನನಿ ಕ್ಲೀನಿಕ್ ಪಕ್ಕದಲ್ಲಿ ನಿಂತು ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ನಡೆದುಕೊಂಡು ಬಂದ ಮೂವರು ದುಷ್ಕರ್ಮಿಗಳು ತಲವಾರಿನಿಂದ ದಾಳಿ ನಡೆಸಿ ಪರಾರಿಯಾಗಿದ್ದಾರೆ. ದುಷ್ಕರ್ಮಿಗಳ ದಾಳಿಯಿಂದ ಮುಖ ಮತ್ತು ಕುತ್ತಿಗೆ ಭಾಗಕ್ಕೆ ಗಂಭೀರ ಗಾಯಗಳಾದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಸರಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಿದರು. ಡಿವೈಎಸ್ಪಿ ಮತ್ತು ವೃತ್ತ ನಿರೀಕ್ಷಕ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಹಿಂದೆ ಬಿಎಸ್ಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಆರ್.ಟಿ.ರಾಜ್‌ಗೋಪಾಲ್ ಎರಡು ವರ್ಷಗಳಿಂದ ಜೆಡಿಎಸ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಮೃತರು ತಂದೆ, ತಾಯಿ, ಪತ್ನಿ, ಸಹೋದರರನ್ನು ಅಗಲಿದ್ದಾರೆ. ಆಸ್ಪತ್ರೆ ಎದುರು ಜಮಾಯಿಸಿದ ಜೆಡಿಎಸ್ ಕಾರ್ಯಕರ್ತರು ಹಾಗೂ ದಲಿತ ಮುಖಂಡರು ಕೊಲೆಯನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿ ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಜರಗಿಸುವಂತೆ ಆಗ್ರಹಿಸಿದರು. ಇದರಿಂದ ಸ್ಥಳದಲ್ಲಿ ಕೆಲವು ಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು. ನಗರದಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X