Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಜುವೆಲ್ಲರಿ ಮಾಲಕನ ದರೋಡೆಗೆ...

ಮಂಗಳೂರು: ಜುವೆಲ್ಲರಿ ಮಾಲಕನ ದರೋಡೆಗೆ ಸಂಚು ರೂಪಿಸಿದ ಆರೋಪಿಗಳು ಸೆರೆ

ವಾರ್ತಾಭಾರತಿವಾರ್ತಾಭಾರತಿ13 Nov 2018 9:17 PM IST
share
ಮಂಗಳೂರು: ಜುವೆಲ್ಲರಿ ಮಾಲಕನ ದರೋಡೆಗೆ ಸಂಚು ರೂಪಿಸಿದ ಆರೋಪಿಗಳು ಸೆರೆ

ಮಂಗಳೂರು, ನ.13: ನಗರದ ಜುವೆಲ್ಲರಿ ಮಾಲಕನ ದರೋಡೆಗೆ ಸಂಚು ರೂಪಿಸಿದ ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ದಕ್ಷಿಣ ಉಪವಿಭಾಗದ ರೌಡಿ ನಿಗ್ರಹ ದಳದ ಪೊಲೀಸರು ಯಶಸ್ವಿಯಾಗಿದ್ದಾರೆ.

ಶೇಖ್ ಮಹಮ್ಮದ್ ಅನ್ಸಾರ್ ಯಾನೆ ಅನ್ಸಾರ್ (34), ಕೆ.ಸಿ.ರೋಡ್ ನಿವಾಸಿ ರಮೀಝ್ (21), ಮುಹಮ್ಮದ್ ತೌಸೀಫ್ ಯಾನೆ ತಚ್ಚು (24), ಉಬೈದುಲ್ಲಾ (25), ಮುಹಮ್ಮದ್ ತೌಸೀಫ್ ಯಾನೆ ತೌಸೀಫ್ (25), ಮುಹಮ್ಮದ್ ಅಲಿ (25), ಅಂತಾರಾಜ್ಯ ಆರೋಪಿಗಳಾದ ಅಹ್ಮದ್ ಕಬೀರ್ (30), ಅಸ್ಗರ್ ಅಲಿ (27), ಸಾಬೀತ್ (19), ಮುಹಮ್ಮದ್ ಸಬಾದ್ (22), ಅಮೀರ್ ಅಲಿ (19) ಬಂಧಿತ ಆರೋಪಿಗಳು.

ಮಂಗಳೂರು ತಾಲೂಕು ಪಚ್ಚನಾಡಿ ಗ್ರಾಮದ ಮಂಗಳೂರು ಹಿಲ್ಸ್ ರಸ್ತೆಯಲ್ಲಿ ತಂಡವೊಂದು ದರೋಡೆ ನಡೆಸುವ ಸಿದ್ಧತೆಯಲ್ಲಿ ಇರುವ ಬಗ್ಗೆ ಖಚಿತ ಪಡೆದ ಎಸಿಪಿ, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ಸಿದ್ದಗೌಡ ಭಜಂತ್ರಿ ಮತ್ತು ದಕ್ಷಿಣ ಉಪವಿಭಾಗದ ರೌಡಿ ನಿಗ್ರಹ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದರು.

ಬಂಧಿತ ಆರೋಪಿಗಳಿಂದ 50 ಸಾವಿರ ರೂ. ಮೌಲ್ಯದ ಮಾರುತಿ ಕಾರು, ಮೂರು ಲಕ್ಷ ರೂ. ಮೌಲ್ಯದ ಮಾರುತಿ ರಿಟ್ಝ್  ಕಾರು, ಮೂರು ಕಬ್ಬಿಣದ ಚೂರಿಗಳು, ಮೂರು ಕಾಟುಮರದ ಸೋಂಟೆ, ನಾಲ್ಕು ನಕಲಿ ನಂಬರ್ ಪ್ಲೇಟ್, 16,050 ರೂ. ನಗದು ಸೇರಿದಂತೆ ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 3,66,050 ರೂ. ಎಂದು ಅಂದಾಜಿಸಲಾಗಿದೆ.

ಆರೋಪಿಗಳನ್ನು ಹೆಚ್ಚಿನ ತನಿಖೆಗೆ ಒಳಪಡಿಸಿದಾಗ, ರಥಬೀದಿಯ ವೈಷ್ಣವಿ ಜುವೆಲ್ಲರಿ ಮಾಲಕ ಸಂತೋಷ್ ಎಂಬವರ ನಗದು ಮತ್ತು ಚಿನ್ನಾಭರಣಗಳನ್ನು ಲೂಟಿ ಮಾಡಲು ಸಂಚು ರೂಪಿಸಿದ್ದ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ದರೋಡೆ ಸಂಚಿನಲ್ಲಿದ್ದ ನಾಲ್ವರು ಆರೋಪಿಗಳು ಪರಾರಿಯಾಗಿದ್ದು, ಶೀಘ್ರದಲ್ಲಿ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ವಿವಿಧ ಪ್ರಕರಣ: ಆರೋಪಿಗಳ ವಿರುದ್ಧ ಕರ್ನಾಟಕ ಮತ್ತು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ ಕೊಲೆ, ಕೊಲೆಯತ್ನ, ದರೋಡೆ, ಹಲ್ಲೆ ಪ್ರಕರಣ ಮತ್ತು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಬಗ್ಗೆ ತನಿಖೆಯ ವೇಳೆ ತಿಳಿದುಬಂದಿದೆ.

ಸುಮಾರು 20 ದಿನಗಳ ಹಿಂದೆ ರಥಬೀದಿಯ ಇದೇ ವೈಷ್ಣವಿ ಜುವೆಲ್ಲರಿ ಮಾಲಕನಿಗೆ ಸೇರಿದ ನಗದನ್ನು ಬೇರೆ ತಂಡವೊಂದು ಲೂಟಿ ಮಾಡಿದ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ನಿರ್ದೇಶನದಂತೆ, ಡಿಸಿಪಿಗಳಾದ ಹನುಮಂತರಾಯ, ಉಮಾ ಪ್ರಶಾಂತ್ ಮಾರ್ಗದರ್ಶನದಲ್ಲಿ ಮಂಗಳೂರು ದಕ್ಷಿಣ ರೌಡಿ ನಿಗ್ರಹ ದಳದ ಎಸಿಪಿ ಕೆ.ರಾಮರಾವ್ ಮತ್ತು ರೌಡಿ ನಿಗ್ರಹ ದಳದ ಸಿಬ್ಬಂದಿ ಎಎಸ್ಸೈ ಮೋಹನ ಕೆ.ವಿ., ಎಚ್.ಸಿ.ಗಳಾದ ಗಿರೀಶ್ ಬೆಂಗ್ರೆ, ಸುನೀಲ್‌ಕುಮಾರ್, ರೆಜಿ ವಿ.ಎಂ., ರವಿಚಂದ್ರ ಪಡ್ರೆ, ದಾಮೋದರ ,ರಾಜರಾಮ್, ಮಹೇಶ್, ಮುಹಮ್ಮದ್ ಶರೀಫ್, ದಯಾನಂದ, ಸುಧೀರ್ ಶೆಟ್ಟಿ, ಮುಹಮ್ಮದ್ ಇಕ್ಬಾಲ್ ಹಾಗೂ ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಎಸ್.ಎಚ್.ಭಜಂತ್ರಿ ಮತ್ತು ಎಚ್.ಸಿ.ಗಳಾದ ರಂಜನ್, ಮೋಹನ್, ಸುಭಾಷ್ ಸಿಬ್ಬಂದಿ ಮಾರುತಿ, ಆನಂದ ಮತ್ತು ಗ್ಯಾನಪ್ಪ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X