Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಾರ್ಕ್‌ಗೆ ಔಷಧಿ ಪೂರೈಕೆಯಲ್ಲಿ...

ಬಾರ್ಕ್‌ಗೆ ಔಷಧಿ ಪೂರೈಕೆಯಲ್ಲಿ ಭ್ರಷ್ಟಾಚಾರ ಆರೋಪ: ಆದೇಶ ಕಾಯ್ದಿರಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ13 Nov 2018 9:25 PM IST
share
ಬಾರ್ಕ್‌ಗೆ ಔಷಧಿ ಪೂರೈಕೆಯಲ್ಲಿ ಭ್ರಷ್ಟಾಚಾರ ಆರೋಪ: ಆದೇಶ ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು, ನ.13: ಮೈಸೂರಿನ ಮೆಸರ್ಸ್ ಬಾಬಾ ಅಣುಶಕ್ತಿ ಸಂಶೋಧನಾ ಕೇಂದ್ರಕ್ಕೆ(ಬಾರ್ಕ್) ಔಷಧಿ ಪೂರೈಸುವ ಟೆಂಡರ್ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಮುಂಬೈನ ಸನೋಫಿ ಇಂಡಿಯಾ ಲಿಮಿಟೆಡ್ ಕಂಪೆನಿ ವಿರುದ್ಧದ ಸಿಬಿಐ ದಾಖಲಿಸಿರುವ ಪ್ರಕರಣ ರದ್ದುಗೊಳಿಸಲು ಕೋರಿದ ಅರ್ಜಿಯ ಮೇಲಿನ ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿದೆ.

ಈ ಸಂಬಂಧ ಸನೋಫಿ ಕಂಪೆನಿ ಸಲ್ಲಿಸಿರುವ ಅರ್ಜಿಯ ಅಂತಿಮ ವಿಚಾರಣೆಯನ್ನು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ನ್ಯಾಯಪೀಠ ಮಂಗಳವಾರ ಮುಕ್ತಾಯಗೊಳಿಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಉದಯ ಹೊಳ್ಳ ಅವರು, ಪ್ರಕರಣದಲ್ಲಿ ಕಂಪೆನಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಿರ್ದಿಷ್ಟ ವ್ಯಕ್ತಿಗಳನ್ನು ಹೆಸರಿಸಿಲ್ಲ. ಹೀಗಾಗಿ, ಅರ್ಜಿ ವಜಾ ಮಾಡಬೇಕು ಎಂದು ಕೋರಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿಬಿಐ ಪರ ವಕೀಲ ಪಿ.ಪ್ರಸನ್ನಕುಮಾರ್, ದೇಶದ ಪ್ರತಿಷ್ಠಿತ ಸಂಸ್ಥೆಗಳಲ್ಲೊಂದಾದ ಬಾರ್ಕ್‌ನಲ್ಲಿ ನಡೆದಿರುವ ಈ ಭ್ರಷ್ಟಾಚಾರದ ಆರೋಪ ಸಹನೀಯವಲ್ಲ. ಇಂತಹವುಗಳನ್ನು ಬಡಪೆಟ್ಟಿಗೆ ಬಿಟ್ಟರೆ ವಿಜ್ಞಾನಿಗಳ ಬಗ್ಗೆ ಹೊರಜಗತ್ತಿಗೆ ತಪ್ಪುಸಂದೇಶ ರವಾನಿಸದಂತಾಗುತ್ತದೆ ಎಂಬ ಆತಂಕ ವ್ಯಕ್ತಪಡಿಸಿದರು.

ಕೇವಲ ಕಂಪೆನಿಯ ವಿರುದ್ಧವೇ ದೂರು ದಾಖಲಿಸಿಕೊಳ್ಳಲು ಅವಕಾಶವಿದೆ ಎಂಬ ಅಂಶಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ಹಲವು ತೀರ್ಪುಗಳನ್ನು ಉಲ್ಲೇಖಿಸಿ ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟರು. ಸುದೀರ್ಘ ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ ಆದೇಶ ಕಾಯ್ದಿರಿಸಿತು.

ಎಫ್‌ಐಆರ್‌ನಲ್ಲಿ ಏನಿದೆ: ಟೆಂಡರ್ ನೀಡುವಾಗ ಎಲ್1 ನಿಯಮ ಕಡೆಗಣಿಸಲಾಗಿದೆ. ಸಂಗ್ರಹಣೆ ಮತ್ತು ನಿರ್ವಹಣೆ ಕೈಪಿಡಿ ಹಾಗೂ ಸಾಮಾನ್ಯ ಆರ್ಥಿಕ ನಿಯಮಗಳಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

ಈ ಕುರಿತಂತೆ ಸಿಬಿಐನ ಭ್ರಷ್ಟಾಚಾರ ನಿಗ್ರಹ ದಳ 2015ರ ಜುಲೈ 31ರಂದು ಅರ್ಜಿದಾರ ಕಂಪೆನಿಯೂ ಸೇರಿದಂತೆ ಬಾರ್ಕ್‌ನ ಡಾ.ಪಿ.ಆನಂದ ವೈಜ್ಞಾನಿಕ ಅಧಿಕಾರಿ (ವೈದ್ಯಕೀಯ ವಿಭಾಗ), ಮೆಸರ್ಸ್ ಅಪೊಲೊ ಆಸ್ಪತ್ರೆ ಎಂಟರ್ ಪ್ರೈಸಸ್, ಅಹಮದಾಬಾದ್‌ನ ಮೆಸರ್ಸ್ ಅಲೆಂಬಿಕ್ ಫಾರ್ಮಾಸ್ಯುಟಿಕಲ್ ಕಂಪೆನಿ, ಬಾರ್ಕ್‌ನ ಅಧಿಕಾರಿಗಳು ಹಾಗೂ ಇತರೆ ಕಂಪೆನಿಗಳ ವಿರುದ್ಧ ದೂರು ದಾಖಲಿಸಲಾಗಿದೆ. ಈ ಆರೋಪಗಳ ಅನುಸಾರ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

ಅರ್ಜಿದಾರರು ಏನು ಹೇಳುತ್ತಾರೆ: ಎಫ್‌ಐಆರ್‌ನಲ್ಲಿ ಕಾಣಿಸಿರುವ ಆರೋಪಗಳಿಗೆ ಸಂಬಂಧಿಸಿದ ಮಾಹಿತಿಯ ಮೂಲಗಳನ್ನು ಸಿಬಿಐ ಬಹಿರಂಗಪಡಿಸಿಲ್ಲ. ಪ್ರಕರಣವನ್ನು ಸಂಜ್ಞೆಯ ಅಪರಾಧ ಎಂದು ವಿಚಾರಣೆಗೆ ಪರಿಗಣಿಸಿರುವ ವಿಚಾರಣಾ ನ್ಯಾಯಾಲಯದ ನಿಲುವು ಯಾಂತ್ರಿಕವಾಗಿದೆ ಮತ್ತು ಕಾನೂನಾತ್ಮಕವಾಗಿಲ್ಲ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಕಲಂ 11 ಮತ್ತು 13ರ ಪ್ರಕಾರ ಡಾ.ಆನಂದ್ ಸಾರ್ವಜನಿಕ ಸೇವಕರಲ್ಲ. ಸಂಚು ರೂಪಿಸಲಾಗಿದೆ ಎಂಬ ಆರೋಪಗಳನ್ನು ಸಮರ್ಥಿಸುವ ಸತ್ವಯುತ ಅಂಶಗಳು ದಾಖಲೆಗಳಲ್ಲಿ ಇಲ್ಲ. ಮೋಸ ಮಾಡಬೇಕು ಎಂಬ ಹಾಗೂ ಅಪರಾಧದ ಉದ್ದೇಶಗಳಿಂದ ಟೆಂಡರ್ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆಸಲಾಗಿದೆ ಎಂಬುದನ್ನು ಸಮರ್ಥಿಸುವಂತಹ ಅಂಶಗಳೂ ಇಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X