Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣಗೆರೆ: ಶಾಲೆಯಿಂದ ಹೊರಗುಳಿದ ಮಕ್ಕಳ...

ದಾವಣಗೆರೆ: ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ನಡೆಸಲು ಎಡಿಸಿ ಸೂಚನೆ

ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ

ವಾರ್ತಾಭಾರತಿವಾರ್ತಾಭಾರತಿ13 Nov 2018 11:42 PM IST
share
ದಾವಣಗೆರೆ: ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ನಡೆಸಲು ಎಡಿಸಿ ಸೂಚನೆ

ದಾವಣಗೆರೆ,ನ.13: ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಮುಂದಿನ ಶೈಕ್ಷಣಿಕ ಮತ್ತು ಇತರೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸಮನ್ವಯಗೊಂಡು ಸಮೀಕ್ಷೆ ನಡೆಸಿ ಅಂತಹ ಮಕ್ಕಳ ಪಟ್ಟಿ ತಯಾರಿಸುವಂತೆ ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ ಸೂಚಿಸಿದರು.

ಜಿಲ್ಲೆಯ ಶಾಲೆಯಿಂದ ಹೊರಗುಳಿದ ಮಕ್ಕಳ ಸಮಸ್ಯೆಗಳನ್ನು ಪರಿಹರಿಸಲು ಸಮೀಕ್ಷಾ ಕಾರ್ಯ ಕೈಗೊಳ್ಳಲು ಜಿಲ್ಲಾ ಮಟ್ಟದ ವಿವಿಧ ಇಲಾಖಾ ಮುಖ್ಯಸ್ಥರ ಸಮನ್ವಯ ಸಮಿತಿಯೊಂದಿಗೆ ಚರ್ಚಿಸಲು ಇಂದು ಜಿಲ್ಲಾಡಳಿತ ಕಚೇರಿಯಲ್ಲಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮ ಸಭೆಗಳು, ವಾರ್ಡು ಸಭೆಗಳಲ್ಲಿ ಇಲಾಖೆಗಳ ಅಧಿಕಾರಿಗಳು/ಸಿಬ್ಬಂದಿಗಳು, ಮುಖ್ಯ ಶಿಕ್ಷಕರು ಎನ್‍ಜಿಓಗಳು ಪಾಲ್ಗೊಂಡು ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಬೇಕು. ಕಟ್ಟಡ ಕಾಮಗಾರಿ ನಡೆಯುವ ಸ್ಥಳಗಳು, ಮದರಸಗಳಲ್ಲಿ ಕಲಿಯುತ್ತಿರುವ ಮಕ್ಕಳು, ಆಸ್ಪತ್ರೆ, ಹೋಟೆಲ್, ಛತ್ರಗಳು, ಚಿತ್ರಮಂದಿರಗಳು, ಸಣ್ಣ ಕಾರ್ಖಾನೆಗಳು, ಇಟ್ಟಿಗೆ ತಯಾರಿಸುವ ಸ್ಥಳ, ಮಂಡಕ್ಕಿ ಭಟ್ಟಿಗಳು, ಕೃಷಿ ಮತ್ತು ತೋಟಗಾರಿಕೆ ಪ್ರದೇಶಗಳು, ಎಸ್ಟೇಟ್‍ಗಳು, ಪ್ಲಾಂಟೇಷನ್ ಗಳು, ರಸ್ತೆ ಕಾಮಗಾರಿ, ಗಣಿಪ್ರದೇಶ, ಕ್ವಾರಿಗಳು, ಗುಡ್ಡಗಾಡು ಪ್ರದೇಶ, ಬುಡಕಟ್ಟು ಜನಾಂಗ ಪ್ರದೇಶ, ಕಾಡು, ಐತಿಹಾಸಿಕ ಸ್ಥಳಗಳು, ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳು, ಕುರಿ ಕಾಯುವ ವಲಸಿಗರು, ಇನ್ನಿತರೆ ಸ್ಥಳಗಳಲ್ಲಿ ಭೇಟಿ ನೀಡಿ ಅಲ್ಲಿನ ಮಕ್ಕಳು ಶಾಲೆಯಿಂದ ಹೊರಗುಳಿದ ಮಕ್ಕಳ ಕುರಿತು ಪರಿಶೀಲಿಸಿ ಪಟ್ಟಿ ತಯಾರಿಸಬೇಕು.

ನ.14 ರ ಮಕ್ಕಳ ದಿನಾಚರಣೆಯಂದು ಗ್ರಾಮ ಪಂ. ಮಟ್ಟದಲ್ಲಿ ಗ್ರಾಮ ಸಭೆ ಮತ್ತು ವಾರ್ಡುಗಳಲ್ಲಿ ವಾರ್ಡ್‍ಗಳಲ್ಲಿ ಸ್ಥಳೀಯ ಸಂಸ್ಥೆ ಸದಸ್ಯರು, ಪೌರಾಯುಕ್ತರು, ಮುಖ್ಯಾಧಿಕಾರಿ, ಮುಖ್ಯ ಶಿಕ್ಷಕರು, ಪಂ. ಅಭಿವೃದ್ಧಿ ಅಧಿಕಾರಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಎನ್‍ಎಸ್‍ಎಸ್/ಎನ್‍ಸಿಸಿ/ಸ್ಕೌಟ್ಸ್ ಅಂಡ್ ಗೈಡ್ಸ್/ಸೇವಾದಳ, ಹಳೇ ವಿದ್ಯಾರ್ಥಿಗಳ ಸಂಘ, ಸ್ತ್ರೀಶಕ್ತಿ ಸಂಘ ಯುವಶಕ್ತಿ ಸಂಘ ಮತ್ತು ಎನ್‍ಜಿಓ ಗಳ ಸಹಯೋಗದೊಂದಿಗೆ ಸಭೆಗಳನ್ನು ನಡೆಸಿ ಶಾಲೆಯಿಂದ ಹೊರಗುಳಿದ ಮಕ್ಕಳ ಪಟ್ಟಿಯನ್ನು ತಯಾರು ಮಾಡಬೇಕು ಎಂದರು.

ಬೆಳಕು ಎನ್‍ಜಿಓ ಸಂಸ್ಥೆಯ ಕಾರ್ಯದರ್ಶಿ ರವಿನಾಯಕ್ ಮಾತನಾಡಿ, ತಾವು ತಮ್ಮ ಸಂಸ್ಥೆ ವತಿಯಿಂದ ಅನೇಕ ಶಾಲೆಗಳಿಗೆ ಭೇಟಿ ನೀಡಿದಾಗ ಶಾಲಾ ದಾಖಲಾತಿ ಮತ್ತು ಹಾಜರಾತಿಯಲ್ಲಿ ಮಕ್ಕಳ ಹೆಸರು ಇರುತ್ತದೆ. ಆದ್ದರಿಂದ ಅಂತಹ ಮಕ್ಕಳನ್ನು ಶಾಲೆಯಿಂದ ಹೊರಗುಳಿದ ಮಕ್ಕಳೆಂದು ಪರಿಗಣಿಸಲು ಆಗುತ್ತಿಲ್ಲವೆಂದು ಹೇಳಿದರು. ಅಪರ ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಶಾಲಾ ಹಾಜರಾತಿಯನ್ನು ನಿಖರವಾಗಿ ನಿರ್ವಹಿಸಬೇಕು. ಶಾಲಾ ಮುಖ್ಯಸ್ಥರು ಕೂಡ ನಿಖರವಾದ ಹಾಜರಾತಿ ಕಡೆ ಗಮನ ಹರಿಸಬೇಕೆಂದರು.

ಕಾರ್ಮಿಕ ಅಧಿಕಾರಿ ಇಬ್ರಾಹಿಂ ಜಿ ಮಾತನಾಡಿ, ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ದುಡಿಯುತ್ತಿರುವ ಮಕ್ಕಳ ಸಮೀಕ್ಷೆಯನ್ನು ನಡೆಸಬೇಕೆಂದು ಸರ್ಕಾರ ಆದೇಶಿಸಿ ಪ್ರತ್ಯೇಕ ನಮೂನೆಯೊಂದನ್ನು ನೀಡಿದೆ ಎಂದರು. ಅಪರ ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಆದಷ್ಟು ಶೀಘ್ರದಲ್ಲಿ ತಂಡಗಳನ್ನು ರಚಿಸಿಕೊಂಡು ಸಮೀಕ್ಷೆ ಆರಂಭಿಸುವಂತೆ ಹಾಗೂ ನ.14 ರಂದು ನಡೆಯುವ ಗ್ರಾಮ ಮತ್ತು ವಾರ್ಡ್ ಸಭೆಗಳಲ್ಲೂ ಭಾಗವಹಿಸಿ ಸಮೀಕ್ಷೆ ನಡೆಸುವಂತೆ ಸೂಚಿಸಿದರು.

ಸಮಗ್ರ ಶಿಕ್ಷಣ ಅಭಿಯಾನದ ಉಪಯೋಜನಾ ಸಮನ್ವಯಾಧಿಕಾರಿ ಬಸವರಾಜಪ್ಪ. ಬಿ.ಆರ್. ಮಾತನಾಡಿ, ಸರ್ವ ಶಿಕ್ಷಣ ಅಭಿಯಾನ ಮತ್ತು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನಗಳು ವಿಲೀನಗೊಂಡು ಇದೀ ಸಮಗ್ರ ಶಿಕ್ಷಣ ಅಭಿಯಾನ ಕಾರ್ಯಕ್ರಮವಾಗಿ ಪರಿವರ್ತಿತಗೊಂಡಿದೆ. ಈ ಸಮಗ್ರ ಶಿಕ್ಷಣ ಅಭಿಯಾನ ಕಾರ್ಯಕ್ರಮದಡಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮಸ್ಯೆಗಳನ್ನು ಪರಿಹರಿಸಲು ಜಿಲ್ಲಾ ಮಟ್ಟದ ವಿವಿಧ ಇಲಾಖಾ ಮುಖ್ಯಸ್ಥರ ಸಮನ್ವಯ ಸಮಿತಿ ರಚಿಸಲಾಗಿದೆ. ಈ ಸಮಿತಿಗೆ ಜಿಲ್ಲಾಧಿಕಾರಿಗಳು ಅಧ್ಯಕ್ಷರಾಗಿದ್ದು, ಜಿ.ಪಂ. ಸಿಇಓ ಉಪಾಧ್ಯಕ್ಷರಾಗಿರುತ್ತಾರೆ. ಡಿಡಿಪಿಯ ಸದಸ್ಯ ಕಾರ್ಯದರ್ಶಿಗಳಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಎಂಟು ಇಲಾಖೆಯ ಮುಖ್ಯಸ್ಥರು ಸದಸ್ಯರಾಗಿರುತ್ತಾರೆ ಎಂದರು.

ಗ್ರಾಮಸಭೆಗಳು, ವಾರ್ಡುಸಭೆಗಳು ಸೇರಿದಂತೆ ಸಮೀಕ್ಷೆಯಲ್ಲಿ ಗುರುತಿಸಲಾದ ಮಕ್ಕಳ ಶಿಕ್ಷಣ ಇತರೆ ಸೌಲಭ್ಯದ ಕುರಿತು ಮುಂದಿನ ವರ್ಷದ ಕ್ರಿಯಾಯೋಜನೆಯಲ್ಲಿ ಸೇರ್ಪಡೆಗೊಳಿಸಿಕೊಳ್ಳಲಾಗುವುದು. ಈ ಸಮೀಕ್ಷೆಯಲ್ಲಿ ಕಂಡುಬರುವ ಶಾಲೆಬಿಟ್ಟ ಮತ್ತು ಶಾಲೆಗೆ ದಾಖಲಾಗದ ಮಕ್ಕಳ ಮಾಹಿತಿಯನ್ನು ಎಸ್‍ಎಟಿಎಸ್(ಸ್ಟುಡೆಂಟ್ ಅಚೀವ್‍ಮೆಂಟ್ ಟ್ರಾಕಿಂಗ್ ಸಿಸ್ಟಮ್) ನ ಒಒಎಸ್‍ಸಿ ತಂತ್ರಾಂಶದಲ್ಲಿ ದಾಖಲಿಸಲಾಗುವುದು. ಸಿಆರ್‍ಪಿ ಮತ್ತು ಮುಖ್ಯ ಶಿಕ್ಷಕರು ತಮ್ಮ ವ್ಯಾಪ್ತಿಯ ಎಲ್ಲಾ ಶಾಲೆಗಳಿಂದ ಶಾಲೆ ಬಿಟ್ಟ ಮತ್ತು ಶಾಲೆಗೆ ದಾಖಲಾಗದ ಮಕ್ಕಳ ಮಾಹಿತಿಯನ್ನು ಕ್ರೋಢೀಕರಿಸಿ ಎಸ್‍ಎಟಿಎಸ್  ತಂತ್ರಾಂಶದಲ್ಲಿ ಡಿ.15 ರೊಳಗೆ ಇಂದೀಕರಿಸಬೇಕು. ಎಸ್‍ಎಟಿಎಸ್ ತಂತ್ರಾಂಶವನ್ನು ಸರ್ಕಾರಿ, ಅನುದಾನಿತ, ಅನುದಾನರಹಿತ, ಖಾಸಗಿ ಸೇರಿದಂತೆ ಎಲ್ಲ ಶಾಲೆಗಳಲ್ಲಿ ಬಳಸಲಾಗುತ್ತಿದ್ದು, ಇದರಲ್ಲಿ ಆಧಾರ್ ಲಿಂಕ್ ಕೂಡ ಮಾಡಲಾಗುತ್ತದೆ ಎಂದು ವಿವರಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವಿಜಯ್ ಕುಮಾರ್ ಮಾತನಾಡಿ, ಸಬಲ ಕಾರ್ಯಕ್ರಮದಡಿ 11 ರಿಂದ 14 ವರ್ಷದ ಶಾಲೆಬಿಟ್ಟ ಹೆಣ್ಣು ಮಕ್ಕಳ ಮಾಹಿತಿಯು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪಡೆಯಲು ತಿಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 11 ರಿಂದ 14 ವರ್ಷದ ಒಟ್ಟು 133 ಹೆಣ್ಣು ಮಕ್ಕಳನ್ನು ಗುರುತಿಸಲಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿಗಳು ಮಾತನಾಡಿ, ಡಯಟ್ ಹಂತದಲ್ಲಿ ಈ ಸಮೀಕ್ಷೆ ಕಾರ್ಯಕ್ಕೆ ಪ್ರತಿ ತಾಲ್ಲೂಕಿಗೆ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಿ, ಜಿಲ್ಲಾ ಯೋಜನಾ ಸಮನ್ವಯಾಧಿಕರಿಗಳ ಸಹಯೋಗದೊಂದಿಗೆ ಸಮೀಕ್ಷಾ ಪ್ರಕ್ರಿಯೆಯಲ್ಲಿ ಭಾಗವಹಿಸಿ ಕಡ್ಡಾಯವಾಗಿ ಮೇಲ್ವಿಚಾರಣೆ ನಡೆಸಬೇಕು ಎಂದರು.

ಸಮೀಕ್ಷೆಯ ಅವಧಿಯಲ್ಲಿ ಮಕ್ಕಳ ಹಕ್ಕುಗಳಿಗಾಗಿ ಕೆಲಸ ನಿರ್ವಹಿಸುತ್ತಿರುವ ಜಿಲ್ಲೆಯ ಎಲ್ಲ ಎನ್‍ಜಿಓ ಗಳ ಸಹಕಾರ ಪಡೆದುಕೊಳ್ಳಬೇಕು. ಸಮೀಕ್ಷೆಯಲ್ಲಿ ಗುರುತಿಸಿದ ಮಕ್ಕಳ ಪಟ್ಟಿಯನ್ನು ಎನ್‍ಜಿಓ ಗಳ ಮತ್ತು ಸಾರ್ವಜನಿಕರ ಸಹಯೋಗದೊಂದಿಗೆ ಅಂತಿಮಗೊಳಿಸಬೇಕು. ಅಂತಿಮವಾದ ಮಕ್ಕಳ ಸಂಖ್ಯೆಯನ್ನು 2019-20 ನೇ ಸಾಲಿನ ಸಮಗ್ರ ಶಿಕ್ಷಣ ಅಭಿಯಾನದ ಜಿಲ್ಲಾ ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಅಳವಡಿಸಿ ಕಾರ್ಯತಂತ್ರ ರೂಪಿಸಬೇಕು ಹಾಗು ಶಾಲೆಯಿಂದ ಹೊರಗುಳಿದ ಮಕ್ಕಳ ಪಟ್ಟಿಯನ್ನು ಅಂತಿಮಗೊಳಿಸಿ ಈ ಮಾಹಿತಿಯನ್ನು ರಾಜ್ಯ ಕಚೇರಿಗೆ ಡಿ.24 ರೊಳಗೆ ಎಸ್‍ಎಟಿಎಸ್ ತಂತ್ರಾಂಶದ ಮೂಲಕ ಸಲ್ಲಿಸಬೇಕು. ಈ ಕೆಲಸಕ್ಕೆ ಸಂಬಂಧಿಸಿದ ಎಲ್ಲ ಇಲಾಖೆಗಳು, ಎನ್‍ಜಿಓಗಳು, ಸಾರ್ವಜನಿಕರು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕೆಂದರು.

ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತ್ರಿಪುಲಾಂಬ, ಜಿ ಪಂ ಸಹಾಯಕ ಕಾರ್ಯದರ್ಶಿ ಅಜ್ಜಪ್ಪ, ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X