Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಾಲು ಕರೆಯುವ ಹಸುಗಳಿಗೆ ಮೈಕ್ರೋ ಚಿಪ್...

ಹಾಲು ಕರೆಯುವ ಹಸುಗಳಿಗೆ ಮೈಕ್ರೋ ಚಿಪ್ ಅಳವಡಿಕೆ: ಸಚಿವ ವೆಂಕಟರಾವ್ ನಾಡಗೌಡ

ವಾರ್ತಾಭಾರತಿವಾರ್ತಾಭಾರತಿ14 Nov 2018 9:14 PM IST
share
ಹಾಲು ಕರೆಯುವ ಹಸುಗಳಿಗೆ ಮೈಕ್ರೋ ಚಿಪ್ ಅಳವಡಿಕೆ: ಸಚಿವ ವೆಂಕಟರಾವ್ ನಾಡಗೌಡ

ಬೆಂಗಳೂರು, ನ.14: ಪಶುಭಾಗ್ಯ ಯೋಜನೆ ಅಡಿ ನೀಡಲಾಗುವ ಹಾಲು ಕರೆಯುವ ಹಸುಗಳ ಕಿವಿಗೆ ಮೈಕ್ರೋ ಚಿಪ್ ಅಳವಡಿಕೆ ಮಾಡಲಾಗುತ್ತಿದೆ ಎಂದು ಪಶುಸಂಗೋಪನೆ ಹಾಗೂ ಮೀನುಗಾರಿಕೆ ಸಚಿವ ವೆಂಕಟರಾವ್‌ನಾಡಗೌಡ ತಿಳಿಸಿದರು.

ಬುಧವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮೈಕ್ರೋ ಚಿಪ್ ಅಳವಡಿಕೆಯಿಂದ ಹಸುವಿನ ಮಾರಾಟವನ್ನು ತಡೆಯುವುದರ ಜೊತೆಗೆ ಹಸುವಿನ ಆರೋಗ್ಯ ಸೇರಿದಂತೆ ಸಂಪೂರ್ಣ ಮಾಹಿತಿ ಪಡೆಯಲು ಸಹಕಾರವಾಗುತ್ತದೆ ಎಂದರು.

ಒಂದು ಚಿಪ್ಪಿಗೆ 6.20 ರೂ.ಗಳು ಖರ್ಚಾಗುತ್ತದೆ. ರಾಜ್ಯದಲ್ಲಿ ಇದುವರೆಗೆ ಸುಮಾರು 1.80 ಲಕ್ಷ ಹಸುಗಳಿಗೆ ಚಿಪ್ ಅಳವಡಿಕೆ ಮಾಡಲಾಗಿದೆ. ಕಾಲುಬಾಯಿ ರೋಗ ಸಂಪೂರ್ಣ ನಿರ್ಮೂಲನೆ ಆಗಿಲ್ಲ. ಕೋಲಾರ ಹಾಗೂ ಧಾರವಾಡ ಸೇರಿದಂತೆ ನಾಲ್ಕಾರು ಜಿಲ್ಲೆಗಳಲ್ಲಿ ಮತ್ತೆ ಕಾಣಿಸಿಕೊಂಡಿದೆ ಎಂದು ಅವರು ಹೇಳಿದರು.

ಧಾರವಾಡದ ಕೃಷಿ ಮೇಳದಲ್ಲಿ ಪಕ್ಕದ ರಾಜ್ಯದ ಹಸುಗಳು ಬಂದಿರುವುದರಿಂದ ಈ ಕಾಯಿಲೆ ಬಂದಿರುವ ಸಾಧ್ಯತೆಯಿದೆ. ಈಗಾಗಲೇ ಕೇಂದ್ರದ ಅಧಿಕಾರಿಗಳ ತಂಡ ಆಗಮಿಸಿದ್ದು, ವರದಿ ಸಿದ್ಧ ಮಾಡುತ್ತಿದೆ. ಯಾವ ಹಿನ್ನೆಲೆಯಲ್ಲಿ ಕಾಲುಬಾಯಿ ರೋಗ ಬಂದಿದೆ ಅನ್ನುವ ತನಿಖೆ ನಡೆಯುತ್ತಿದೆ. ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರ ಫಾರಂನಲ್ಲಿ ಹೆಚ್ಚು ಪ್ರಕರಣಗಳು ಕಂಡು ಬಂದಿವೆ. ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿದ್ದಾರೆ ಎಂದು ಅವರು ಹೇಳಿದರು.

ಹಾಲಿನ ದರ ಏರಿಕೆ ಮಾಡೋ ಆಲೋಚನೆ ರಾಜ್ಯ ಸರಕಾರದ ಮುಂದಿಲ್ಲ. ಪ್ರತಿ ಲೀಟರ್‌ಗೆ 5 ರೂಪಾಯಿ ಸಹಾಯ ಧನ ಸರಿಯಾದ ಸಮಯಕ್ಕೆ ರೈತರಿಗೆ ತಲುಪುತ್ತಿದೆ. ನಮ್ಮ ನಂದಿನಿ ಹಾಲು ಪರಿಶುದ್ದವಾಗಿದೆ. ಯಾವುದೇ ಕಲಬೆರಕೆ ನಮ್ಮ ಹಾಲಿನಲ್ಲಿ ಇಲ್ಲ. ಯಾವುದೇ ಪರೀಕ್ಷೆ ಮಾಡಲು ನಾವು ಸಿದ್ಧ ಎಂದು ಅವರು ತಿಳಿಸಿದರು.

ಕೆಎಂಎಫ್ ಅಭಿವೃದ್ಧಿ ಆಗುತ್ತಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರೇವಣ್ಣ ನನ್ನ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ. ಕೆಎಂಎಫ್ ಅಭಿವೃದ್ಧಿಗೆ ರೇವಣ್ಣ ಕೊಡುಗೆ ಅಪಾರ. ಅಭಿವೃದ್ಧಿಗೆ ಯಾರಾದರೂ ತೊಂದರೆ ಕೊಟ್ಟರೆ ಅವರು ಸಹಿಸಲ್ಲ. ಹೀಗಾಗಿ ಅವರು ಹಾಗೆ ಹೇಳಿರಬಹುದು. ಅದನ್ನೇ ತಪ್ಪಾಗಿ ಅರ್ಥೈಸುವುದು ಬೇಡ ಎಂದು ವೆಂಕಟರಾವ್ ನಾಡಗೌಡ ಹೇಳಿದರು.

ಎರಡು ಲಕ್ಷ ಟನ್ ಮೆಕ್ಕೆ ಜೋಳ ರೈತರಿಂದ ನೇರವಾಗಿ ಖರೀದಿಸಲು ಮುಂದಾಗಿದ್ದೇವೆ. ಪ್ರತೀ ಕ್ವಿಂಟಾಲ್ ಗೆ 1450 ರೂ.ನೀಡಿ ಖರೀದಿಸಲು ಮುಖ್ಯಮಂತ್ರಿಗೆ ಇವತ್ತು ಪ್ರಸ್ತಾವನೆ ಕಳುಹಿಸಲಾಗಿದೆ. ಮಾರುಕಟ್ಟೆಗಿಂತ 150 ರೂಪಾಯಿ ಹೆಚ್ಚಾಗಿ ರೈತರಿಗೆ ನೀಡಲಿದ್ದೇವೆ ಎಂದು ವೆಂಕಟರಾವ್ ನಾಡಗೌಡ ತಿಳಿಸಿದರು.

ಕರ್ನಾಟಕದ ಮೀನಿಗೆ ಗೋವಾದಲ್ಲಿ ನಿಷೇಧ ಹೇರಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ನಮ್ಮ ರಾಜ್ಯದ ಮೀನಿನಲ್ಲಿ ಯಾವುದೇ ವಿಷಕಾರಿ ಅಂಶವಿಲ್ಲ. ಇದರ ಬಗ್ಗೆ ತಪ್ಪುಮಾಹಿತಿ ಪ್ರಚಾರ ಆಗುತ್ತಿದೆ. ಈಗಾಗಲೇ ಈ ಬಗ್ಗೆ ನಾವು ಪರಿಶೀಲನೆ ಮಾಡಿದ್ದೇವೆ. ಶೀಘ್ರವೇ ಗೋವಾ ಮುಖ್ಯಮಂತ್ರಿ ಜೊತೆ ನಮ್ಮ ಮುಖ್ಯಮಂತ್ರಿ ಮಾತುಕತೆ ಮಾಡಿ, ಪುನಃ ಮೀನಿನ ರಫ್ತು ಮಾಡಲಾಗುವುದು ಎಂದು ಅವರು ಹೇಳಿದರು.

ರಾಜ್ಯದಲ್ಲಿ ಮೇವಿಗೆ ಕೊರತೆ ಇಲ್ಲ. 15 ಕೋಟಿ ರೂ.ಗಳನ್ನು ಮೇವಿಗಾಗಿ ಇರಿಸಲಾಗಿದೆ. ಆಂಧ್ರ ಮತ್ತು ತೆಲಂಗಾಣಕ್ಕೆ ನಮ್ಮ ರಾಜ್ಯದಿಂದ ಮೇವು ಸರಬರಾಜು ಆಗುತ್ತಿತ್ತು. ಹೊರ ರಾಜ್ಯಕ್ಕೆ ನಮ್ಮ ಮೇವು ಸರಬರಾಜು ಮಾಡಲು ನಿಷೇಧ ಮಾಡಲಾಗಿದೆ ಎಂದು ವೆಂಕಟರಾವ್ ನಾಡಗೌಡ ತಿಳಿಸಿದರು.

ರಾಜ್ಯದಲ್ಲಿ ದೊರೆಯುವ ಮೇವನ್ನು ವೈಜ್ಞಾನಿಕವಾಗಿ ಸಂರಕ್ಷಣೆ ಮಾಡಲಾಗುವುದು. ಈ ಮೂಲಕ ಬೇಸಿಗೆ ವೇಳೆ ಮೇವಿನ ಕೊರತೆ ನೀಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ನಾಟಿ ತಳಿ ಹಸುಗಳ ಸಂವರ್ಧನೆಗೆ ಸರಕಾರದಿಂದ ಒತ್ತು ನೀಡಲಾಗಿದೆ. ನಾಟಿ ಹಸುಗಳ ಹಾಲು ಪ್ರತ್ಯೇಕವಾಗಿ ಸಂಗ್ರಹಿಸಿ ಕೆಎಂಎಫ್ ಮೂಲಕ ಮಾರಾಟಕ್ಕೆ ಮಾತುಕತೆ ನಡೆಸಲಾಗಿದೆ ಎಂದು ಅವರು ಹೇಳಿದರು.

ಜಿಲ್ಲೆಗೊಂದು ವಧಾಗಾರ

ಕುರಿ, ಮೇಕೆ ಮಾಂಸ ಮಾರಾಟ ಉತ್ತೇಜನಕ್ಕೆ ಸರಕಾರ ಕ್ರಮ ಕೈಗೊಂಡಿದೆ. ಆಧುನಿಕ ಪ್ರಾಣಿ ವಧಾಗಾರಗಳನ್ನು ನಿರ್ಮಿಸಲು ಕ್ರಮ ವಹಿಸಲಾಗಿದೆ. ಪ್ರಾಯೋಗಿಕವಾಗಿ ತುಮಕೂರು ಜಿಲ್ಲೆಯ ಶಿರಾದಲ್ಲಿ ಇದನ್ನು ಜಾರಿಗೆ ತರಲಾಗುತ್ತಿದೆ. ಇದು ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆಗಳಲ್ಲೂ ಆಧುನಿಕ ಪ್ರಾಣಿ ವಧಾಗಾರಗಳನ್ನು ಆರಂಭಿಸಲಾಗುವುದು.

-ವೆಂಕಟರಾವ್‌ ನಾಡಗೌಡ, ಪಶುಸಂಗೋಪನೆ ಹಾಗೂ ಮೀನುಗಾರಿಕೆ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X