Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೊಂಟದ ಸ್ವಾಧೀನ ಇಲ್ಲದೆ ಅಸಹಾಯಕ...

ಸೊಂಟದ ಸ್ವಾಧೀನ ಇಲ್ಲದೆ ಅಸಹಾಯಕ ಸ್ಥಿತಿಯಲ್ಲಿದ್ದ ಯುವಕನ ರಕ್ಷಣೆ

ವಾರ್ತಾಭಾರತಿವಾರ್ತಾಭಾರತಿ14 Nov 2018 9:28 PM IST
share
ಸೊಂಟದ ಸ್ವಾಧೀನ ಇಲ್ಲದೆ ಅಸಹಾಯಕ ಸ್ಥಿತಿಯಲ್ಲಿದ್ದ ಯುವಕನ ರಕ್ಷಣೆ

ಉಡುಪಿ, ನ.14: ನಗರದ ಬಡುಗುಪೇಟೆ ಕಲ್ಸಂಕದ ಅಂಗಡಿಯೊಂದರ ಜಗುಲಿಯಲ್ಲಿ ಕಳೆದ ಒಂದು ತಿಂಗಳಿದ ಸೊಂಟದ ಸ್ವಾಧೀನ ಕಳೆದುಕೊಂಡು ನಡೆಯಲಾಗದೆ ಅಸಹಾಯಕ ಸ್ಥಿತಿಯಲ್ಲಿದ್ದ ಅಪರಿಚಿತ ಯುವಕನನ್ನು ಉಡುಪಿಯ ಸಮಾಜಸೇವಕರು ಮಂಗಳವಾರ ರಕ್ಷಿಸಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಸೊಂಟದ ಸ್ವಾಧೀನ ಇಲ್ಲದೆ, ಮಲಗಿದಲ್ಲಿಯೇ ಶೌಚಾದಿಗಳನ್ನು ಮಾಡಿ ಕೊಂಡು, ಸರಿಯಾದ ಅನ್ನ ಆಹಾರ ಇಲ್ಲದೆ, ನಿತ್ರಾಣದಿಂದ ನರಳಾಡುತ್ತಿದ್ದ, ಯುವಕನ ದಯನೀಯ ಸ್ಥಿತಿಯನ್ನು ಗಮನಿಸಿದ ಸಮಾಜಸೇವಕ ಭಾಸ್ಕರ ಶೇರಿಗಾರ್, ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದರು. ಇದಕ್ಕೆ ಸ್ಪಂದಿಸಿದ ನಿತ್ಯಾನಂದ ಒಳಕಾಡು ಹಾಗೂ ತಾರಾ ನಾಥ್ ಮೇಸ್ತ ಶಿರೂರು ಸ್ಥಳಕ್ಕೆ ಆಗಮಿಸಿದರು.

ಬಳಿಕ ಯುವಕನನ್ನು ಶ್ರೀೀಕೃಷ್ಣ ಮಠದ ರಾಜಾಂಗಣದ ಬಳಿಯ ಯಾತ್ರಿಕರ ಸ್ನಾನಗೃಹಕ್ಕೆ ಕರೆದುಕೊಂಡು ಹೋಗಿ, ಸ್ನಾನ ಮಾಡಿಸಿ ಗಡ್ಡ ಬೋಳಿಸಿ ಶುಚಿ ಗೊಳಿಸಿ, ಆತನಿಗೆ ಹೊಸ ಬಟ್ಟೆ ತೊಡಿಸಿದರು. ತದನಂತರ ಅವರನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ರೋಗಿಯ ಊಟದ ವ್ಯವಸ್ಥೆಗೆ ಬಟ್ಟಲು, ಲೋಟೆ, ಧರಿಸಲು ಹೊಸ ಬಟ್ಟೆ, ಆಸ್ಪತ್ರೆಯಲ್ಲಿ ಸೇವೆಗೆ ಸೇಕನನ್ನು ವ್ಯವಸ್ಥೆ ಮಾಡಲಾಗಿದೆ.

ಯುವಕನು ತನ್ನ ಹೆಸರು ನಕುಲ(28) ಎಂದು ಹೇಳಿಕೊಂಡಿದ್ದು, ತಂದೆ ಸುರೇಶ, ಬೊಮ್ಮನಹಳ್ಳಿ, ಹಾನಗಲ್ ತಾಲೂಕು, ಹಾವೇರಿ ಜಿಲ್ಲೆ ಎಂಬ ಗೊಂದಲದ ವಿಳಾಸ ನೀಡಿದ್ದಾನೆ. ಲಾರಿ ಚಾಲಕನೋರ್ವ ತನಗೆ ಉಡುಪಿ ಯಲ್ಲಿ ಬಿಟ್ಟು ಹೋಗಿರುವುದಾಗಿ ಹೇಳಿಕೊಂಡಿದ್ದಾನೆ. ವಾರಸುದಾರರು ಜಿಲ್ಲಾಸ್ಪತ್ರೆಯ ಅಜ್ಜರಕಾಡು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ಸಂಪರ್ಕಿಸುವಂತೆ ಕೋರಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X