Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಳಗಾವಿಯಲ್ಲಿ ಡಿಸೆಂಬರ್‌ನಲ್ಲಿ...

ಬೆಳಗಾವಿಯಲ್ಲಿ ಡಿಸೆಂಬರ್‌ನಲ್ಲಿ ಅಧಿವೇಶನ: ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ14 Nov 2018 9:45 PM IST
share
ಬೆಳಗಾವಿಯಲ್ಲಿ ಡಿಸೆಂಬರ್‌ನಲ್ಲಿ ಅಧಿವೇಶನ: ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಬೆಳಗಾವಿ, ನ.14: ರಾಜ್ಯ ವಿಧಾನಮಂಡಳದ ಚಳಿಗಾಲ ಅಧಿವೇಶನ ಡಿಸೆಂಬರ್ ನಲ್ಲಿ ನಡೆಯಲಿರುವುದರಿಂದ ಅಧಿವೇಶನದಲ್ಲಿ ಭಾಗವಹಿಸುವ ಗಣ್ಯರು ಮತ್ತು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಸೂಚನೆ ನೀಡಿದ್ದಾರೆ.

ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚಳಿಗಾಲ ಅಧಿವೇಶನದ ದಿನಾಂಕ ಇನ್ನೂ ಅಂತಿಮಗೊಂಡಿರುವುದಿಲ್ಲ. ಆದರೆ ಡಿಸೆಂಬರ್ ಮೊದಲ ವಾರ ನಡೆಯುವ ಸಾಧ್ಯತೆಗಳಿರುವುದರಿಂದ ಯಾವುದೇ ಅನಾನುಕೂಲ ಉಂಟಾಗದಂತೆ ಅಗತ್ಯ ಕ್ರಮವಹಿಸಬೇಕು ಎಂದರು.

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಭಾಧ್ಯಕ್ಷರು, ಸಭಾಪತಿ, ಸಚಿವರು ಸೇರಿದಂತೆ ಅನೇಕ ಗಣ್ಯರು ನಗರದಲ್ಲಿ ವಾಸ್ತವ್ಯ ಮಾಡುವುದರಿಂದ ಶಿಷ್ಟಾಚಾರ ಪಾಲಿಸಬೇಕಾಗುತ್ತದೆ. ಅಧಿವೇಶನ ನಡೆಯುವ ಸಂದರ್ಭದಲ್ಲಿ ಭದ್ರತೆ, ಊಟ-ವಸತಿ, ವಾಹನಗಳು, ಸಂಚಾರ ನಿರ್ವಹಣೆಯ ಜವಾಬ್ದಾರಿ ನಮ್ಮ ಮೇಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಅಧಿವೇಶನ ಸಂದರ್ಭದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ನಿರಂತರ ವಿದ್ಯುತ್ ಪೂರೈಕೆ ಕಲ್ಪಿಸಬೇಕು. ಸೂಕ್ತ ಜನರೇಟರ್ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು. ತುರ್ತು ವೈದ್ಯಕೀಯ ಸೇವೆ ಒದಗಿಸಲು ಅನುಕೂಲವಾಗುವಂತೆ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ವ್ಯವಸ್ಥೆ ಕಲ್ಪಿಸಬೇಕು. ಅ್ಯಂಬುಲೆನ್ಸ್ ಸೇವೆ, ವೈದ್ಯರು ಮತ್ತು ಔಷಧ ಸಾಮಗ್ರಿಗಳನ್ನು ಸಜ್ಜಾಗಿಡಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದರು.

ಶುದ್ಧ ಕುಡಿಯುವ ನೀರು, ಸ್ವಚ್ಛತೆ, ಸಂಚಾರ ನಿರ್ವಹಣೆ ಹಾಗೂ ನಗರ ಸುಂದರೀಕರಣ ಸೇರಿದಂತೆ ಇತರೆ ಎಲ್ಲ ಕೆಲಸಗಳನ್ನು ಅಚ್ಚುಕಟ್ಟಾಗಿ ಮಾಡಲು ಎಲ್ಲ ಇಲಾಖೆಗಳು ಹಾಗೂ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಬೊಮ್ಮನಹಳ್ಳಿ ಹೇಳಿದರು.

ಪೊಲೀಸ್ ಸಿಬ್ಬಂದಿ ಸೇರಿದಂತೆ ಸಾಮೂಹಿಕ ವಸತಿ ಸೌಲಭ್ಯ ಕಲ್ಪಿಸಿರುವ ಕಡೆಗಳಲ್ಲಿ ನೀರು, ಶೌಚಾಲಯ, ಊಟ ಮತ್ತಿತರ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸಲು ಕ್ರಮ ವಹಿಸಬೇಕು ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಡಿ.ಸಿ.ರಾಜಪ್ಪತಿಳಿಸಿದರು.

ಸಭೆಯಲ್ಲಿ ಡಿಸಿಪಿ ಸೀಮಾ ಲಾಟ್ಕರ್, ಅಪರ ಜಿಲ್ಲಾಧಿಕಾರಿ ಡಾ.ಎಚ್.ಬಿ.ಬೂದೆಪ್ಪ, ಮಹಾನಗರ ಪಾಲಿಕೆ ಆಯುಕ್ತ ಶಶಿಧರ್ ಕುರೇರ್, ಲೋಕೋಪಯೋಗಿ, ಆಹಾರ, ಆರೋಗ್ಯ, ವಿದ್ಯುತ್, ಸಾರಿಗೆ, ಅಗ್ನಿಶಾಮಕ, ಬಿಎಸ್ನೆನ್ನೆಲ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X