Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜಕಾಲುವೆ ಒತ್ತುವರಿ ತೆರವು: ಮಾರ್ಕಿಂಗ್...

ರಾಜಕಾಲುವೆ ಒತ್ತುವರಿ ತೆರವು: ಮಾರ್ಕಿಂಗ್ ಅಳಿಸುತ್ತಿರುವ ಒತ್ತುವರಿದಾರರು

ವಾರ್ತಾಭಾರತಿವಾರ್ತಾಭಾರತಿ14 Nov 2018 10:06 PM IST
share

ಬೆಂಗಳೂರು, ನ.14: ರಾಜಕಾಲುವೆ ಒತ್ತುವರಿ ತೆರವುಗೊಳಿಸಲು ಮಾಡಿರುವ ಮಾರ್ಕಿಂಗ್‌ಗಳನ್ನು ಒತ್ತುವರಿದಾರರು ಅಳಿಸಿ ಹಾಕುತ್ತಿದ್ದು, ಒತ್ತುವರಿ ಕಾರ್ಯಾಚರಣೆ ಆರಂಭಕ್ಕೆ ವಿಳಂಬವಾಗುತ್ತಿದೆ. ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದರು. ಆದರೆ, ಪಾಲಿಕೆ ಅಧಿಕಾರಿಗಳು ತೆರವು ಕಾರ್ಯಾಚರಣೆಗೆ ಮುಂದಾಗಿಲ್ಲ. ಕಾರಣ ಕೇಳಿದರೆ ಇದನ್ನು ಹೇಳುತ್ತಿದ್ದಾರೆ. 

ಭೂ ಮಾಪಕರು ಒತ್ತುವರಿಯನ್ನು ಗುರುತಿಸಿ ವರದಿ ನೀಡಿದ್ದು, ಅಕ್ಟೋಬರ್ 28ರಿಂದಲೇ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸುವುದಾಗಿ ತಿಳಿಸಿದ್ದ ಅಧಿಕಾರಿಗಳು ಎರಡು ವಾರಗಳು ಕಳೆದರೂ ಒಂದೇ ಒಂದು ಒತ್ತುವರಿ ಪ್ರಕರಣವನ್ನು ತೆರವುಗೊಳಿಸಿಲ್ಲ. ಈ ಕುರಿತು ಅಧಿಕಾರಿಗಳನ್ನು ಪ್ರಶ್ನಿಸಿದರೆ ಇನ್ನೂ ಸಂಪೂರ್ಣವಾಗಿ ಮಾರ್ಕಿಂಗ್ ಆಗಿಲ್ಲ ಎಂಬ ಹಾರಿಕೆ ಉತ್ತರ ನೀಡುತ್ತಿರುವುದು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ನಗರದಲ್ಲಿ ವಾರದೊಳಗೆ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸುವುದಾಗಿ ಉಪಮುಖ್ಯಮಂತ್ರಿ ಪರಮೇಶ್ವರ್ ಹಾಗೂ ಮೇಯರ್ ಗಂಗಾಂಬಿಕೆ ಮಾಧ್ಯಮಗಳಿಗೆ ಹಲವಾರು ಬಾರಿ ಹೇಳಿಕೆ ನೀಡಿದ್ದಾರೆ. ಜತೆಗೆ ಈ ಮೊದಲಿನಂತೆ ಕಾರ್ಯಾಚರಣೆಯನ್ನು ಯಾವುದೇ ಕಾರಣಕ್ಕೂ ಅರ್ಧಕ್ಕೆ ನಿಲ್ಲಿಸುವುದಿಲ್ಲವೆಂದು ಹೇಳಿಕೆ ನೀಡಿದ್ದರು.

ಕಳೆದ ಎರಡು ವರ್ಷಗಳಂತೆ ನಗರದಲ್ಲಿ ಉತ್ತಮ ಮಳೆಯಾಗಿದ್ದರೆ ಹಲವಾರು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿ ಜನರು ತೊಂದರೆ ಅನುಭವಿಸುತ್ತಿದ್ದರು. ಆದರೆ, ಈ ಬಾರಿ ನಗರದಲ್ಲಿ ಹೆಚ್ಚಿನ ಮಳೆಯಾಗಿಲ್ಲ. ಆದರೂ ಅಧಿಕಾರಿಗಳು ಒತ್ತುವರಿ ತೆರವುಗೊಳಿಸಲು ಮುಂದಾಗದೆ ತಮಗೂ ಒತ್ತುವರಿಗೂ ಏನೂ ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿರುವುದು ಟೀಕೆಗಳಿಗೆ ಕಾರಣವಾಗಿದೆ.

ಪಾಲಿಕೆಯ ಅಧಿಕಾರಿಗಳು ಮೊದಲು ಭೂಮಾಪಕರಿಲ್ಲದ ಕಾರಣ ಒತ್ತುವರಿ ತೆರವು ಕಾರ್ಯ ನಡೆಸುತ್ತಿಲ್ಲ ಎನ್ನುತ್ತಿದ್ದರು. ಆ ಹಿನ್ನೆಲೆಯಲ್ಲಿ ಪರಮೇಶ್ವರ್ ಕಂದಾಯ ಇಲಾಖೆಗೆ ಸೂಚನೆ ನೀಡಿ 10 ಭೂಮಾಪಕರನ್ನು ನೇಮಿಸುವಂತೆ ಸೂಚನೆ ನೀಡಿದ್ದರು. ಅದರಂತೆ ಪಾಲಿಕೆಗೆ ಪಾಲಿಕೆಗೆ ನಿಯೋಜನೆಗೊಂಡಿದ್ದ ಭೂ ಮಾಪಕರು ಸರ್ವೆ ನಡೆಸಿ ವರದಿಯನ್ನು ಪಾಲಿಕೆಯ ಅಧಿಕಾರಿಗಳಿಗೆ ನೀಡಿದ್ದರು. ಇಲಾಖೆ ನೇಮಕ ಮಾಡಿದ್ದ ಅಧಿಕಾರಿಗಳು 21 ಪ್ರದೇಶಗಳಲ್ಲಿನ 242 ಸರ್ವೆ ಸಂಖ್ಯೆಗಳ ಆಸ್ತಿ ರಾಜಕಾಲುವೆ ಒತ್ತುವರಿ ಪತ್ತೆ ಮಾಡಿಕೊಟ್ಟಿದ್ದರು. ಆ ಹಿನ್ನೆಲೆಯಲ್ಲಿ ಒತ್ತುವರಿ ಕಾರ್ಯಾಚರಣೆ ಆರಂಭಿಸುವುದಾಗಿಯೂ ಅಧಿಕಾರಿಗಳು ತಿಳಿಸಿದ್ದರು. ಆದರೆ, ಈವರೆಗೆ ಕಾರ್ಯಾಚರಣೆಗೆ ಆರಂಭಿಸಲು ಮುಂದಾಗಿಲ್ಲ.

ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಮಾಡುವ ಮಾರ್ಕಿಂಗ್ ಅಳಿಸುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಶೀಘ್ರದಲ್ಲಿಯೇ ಒತ್ತುವರಿ ಕಾರ್ಯಾಚರಣೆ ನಡೆಸಲಾಗುತ್ತದೆ.

- ಗಂಗಾಂಬಿಕೆ ಮಲ್ಲಿಕಾರ್ಜುನ್, ಮೇಯರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X