Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 24-25ರಂದು ಮೀನಿಗೆ ಗಾಳ ಹಾಕುವ ಸ್ಪರ್ಧೆ

24-25ರಂದು ಮೀನಿಗೆ ಗಾಳ ಹಾಕುವ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ15 Nov 2018 5:29 PM IST
share

ಮಂಗಳೂರು, ನ.15: ಗಿಫ್ಟೆಡ್ ಇಂಡಿಯಾ ಸಂಸ್ಥೆ ಆಶ್ರಯದಲ್ಲಿ ಎನ್‌ಎಂಪಿಟಿ, ಮಂಗಳೂರು ಆ್ಯಂಗ್ಲರ್ಸ್‌ ಕ್ಲಬ್, ಅಖಿಲ ಭಾರತೀಯ ಗೇಮ್ ಫಿಶಿಂಗ್ ಅಸೋಸಿಯೇಷನ್ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಟ್ಟದ ಮೀನಿಗೆ ಗಾಳ ಹಾಕುವ ಸ್ಪರ್ಧೆ ಆ್ಯಂಗ್ಲಿಂಗ್ ಕಾರ್ನಿವಲ್ ಇಂಡಿಯಾ 2018 ಸ್ಪರ್ಧೆ ನ.24,25ರಂದು ನವ ಮಂಗಳೂರು ಬಂದರಯ ಮಂಡಳಿಯ (ಎನ್‌ಎಂಪಿಟಿಯ) ದಕ್ಷಿಣ ಬ್ರೇಕ್‌ವಾಟರ್ ನಲ್ಲಿ ಆಯೋಜಿಸಲಾಗಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪಣಂಬೂರು ಬೀಚ್ ಟೂರಿಸಂ ಡೆವಲಪ್‌ಮೆಂಟ್ ಪ್ರೊಜೆಕ್ಟ್‌ನ ಸಿಇಒ ಯತೀಶ್ ಬೈಕಂಪಾಡಿ, ಮಂಗಳೂರಿನಲ್ಲಿ ಎರಡನೇ ಬಾರಿಗೆ ಮೀನಿಗೆ ಗಾಳ ಹಾಕುವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಕಳೆದ ವರ್ಷ ಆಯೋಜಿಸಲಾಗಿದ್ದ ರಾಷ್ಟ್ರೀಯ ಮಟ್ಟದ ಗಾಳ ಹಾಕುವ ಸ್ಪರ್ಧೆಯ ಅನೇಕ ರಾಜ್ಯದ ಸ್ಪರ್ಧಾಳುಗಳು ಭಾಗವಹಿಸಿದ್ದು ಸ್ಪರ್ಧೆಯು ಯಶಸ್ವಿಯಾಗಿ ಕೊನೆಗೊಂಡಿದೆ. ಆ ಹಿನ್ನಲೆಯಲ್ಲಿ ಈ ಬಾರಿ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಈ ಸ್ಪರ್ಧೆ ಭಾರತದಲ್ಲೇ ಪ್ರಪ್ರಥಮ ಲೂರ್ ಓನ್ಲಿ ಸಾಲ್ಟ್ ವಾಟರ್ ಫಿಶಿಂಗ್ ಸ್ಪರ್ಧೆಯಾಗಿರುತ್ತದೆ. ಗಾಳ ಹಾಕುವ ಹವ್ಯಾಸವನ್ನು ಸ್ಪರ್ಧೆಯಾಗಿ ಪ್ರತಿಪಾದಿಸುವ ನಿಟ್ಟಿನಲ್ಲಿ ಅಂತರ್ ರಾಷ್ಟ್ರೀಯ ಮಟ್ಟದ ಸ್ಪರ್ಧಾ ನಿಯಮಕ್ಕೆ ಅನುಗುಣವಾಗಿ ಸ್ಪರ್ಧೆಯಲ್ಲಿ ಹಿಡಿಯಲಾಗುವ ಮೀನನ್ನು ಜೀವಂತವಾಗಿ ಮರಳಿ ಸಮುದ್ರಕ್ಕೆ ಬಿಡಲಾಗುತ್ತದೆ. ಸ್ಪರ್ಧೆಯ ವಿಜೇತರಿಗೆ ಮತ್ತು ಸ್ಪರ್ಧಾಳುಗಳಿಗೆ ಸುಮಾರು 8 ಲಕ್ಷದಷ್ಟು ಮೌಲ್ಯದ ಬಹುಮಾನಗಳನ್ನು ನೀಡಲಾಗುತ್ತದೆ ಎಂದರು.

ಈಗಾಗಲೇ 100ಕ್ಕೂ ಅಧಿಕ ಸ್ಪರ್ಧಾಳುಗಳು ನೊಂದಾಯಿಸಿದ್ದು , ಪೋರ್ಚುಗಲ್, ಮಸ್ಕತ್, ದುಬೈ ಸೇರಿದಂತೆ ಉತ್ತರ ಭಾರತ ಮತ್ತು ದಕ್ಷಿಣ ಭಾರತದ ಹಲವಾರು ರಾಜ್ಯಗಳಿಂದ ಸ್ಪರ್ಧಿಗಳು ಭಾಗವಹಿಸುತ್ತಿದ್ದಾರೆ. ಸ್ಪರ್ಧಾಳುಗಳು ಬ್ರೇಕ್‌ವಾಟರ್‌ನ ಕಲ್ಲಿನ ಮೇಲೆ ನಿಂತು ಸಮುದ್ರಕ್ಕೆ ಗಾಳ ಹಾಕಿ ಮೀನು ಹಿಡಿಯಲಿದ್ದು, ಸ್ಪರ್ಧಾ ನಿಯಮದ ಅನುಗುಣವಾಗಿ ಮೀನಿನ ತೂಕದ ಅಳತೆಯ ಬಳಿಕ ಮೀನನ್ನು ಜೀವಂತವಾಗಿ ಮರಳಿ ಸಮುದ್ರಕ್ಕೆ ಬಿಡಲಾಗುತ್ತದೆ ಎಂದು ತಿಳಿಸಿದರು.

ಸ್ಪರ್ಧೆಯಲ್ಲಿ ಎರಡು ವಿಭಾಗಗಳಿದ್ದು, ಅತೀ ಹೆಚ್ಚು ತೂಕ - ಪ್ರಥಮ: 50,000ರೂ, ದ್ವಿತೀಯ 25,000, ಅತೀ ಹೆಚ್ಚು ಸಂಖ್ಯೆ- ಪ್ರಥಮ 10,000ರೂ, ದ್ವಿತೀಯ 5,000ರೂ. ಇರಲಿದೆ. ಇದರೊಂದಿಗೆ ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೂ ಬಹುಮಾನ ನೀಡಲಿದ್ದೇವೆ. ನ. 23ರಂದು ಸಂಜೆ 6 ಗಂಟೆಗೆ ಮಂಗಳೂರಿನ ಭಾರತ್ ಮಾಲ್‌ನ ಡೆಕತ್ಲಾನ್ ಶೋರೂಂ ನಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸ್ಪರ್ಧೆಯ ಉದ್ಘಾಟನೆ ನೆರವೇರಿಸಲಿದ್ದಾರೆ. ನ. 24 ಮತ್ತು 25 ಎರಡು ದಿನಗಳ ಕಾಲ ಬೆಳಿಗ್ಗೆ 6 ಗಂಟೆಯಿಂದ ಸಂಜೆ 5ರ ವರೆಗೆ ಸ್ಪರ್ಧೆ ನಡೆಯಲಿದೆ. ನ.25 ರಂದು ಸಂಜೆ ತಣ್ಣೀರುಬಾವಿ ಕಡಲ ಕಿನಾರೆಯಲ್ಲಿ ಬಹುಮಾನ ವಿತರಣೆ ನಡೆಯಲಿದೆ ಎಂದರು.

ಗಿಫ್ಟೆಡ್ ಇಂಡಿಯಾ ಆಯೋಜಕರಾದ ಅನೂಪ್ ಕಾಂಚನ್, ಕೇತನ್ ಕಾಂಚನ್, ಮಂಗಳೂರು ಆ್ಯಂಗ್ಲರ್ಸ್‌ ಕ್ಲಬ್ ಕಾರ್ಯಕಾರಿ ಸದಸ್ಯ ಅಮತೇಶ್ ಅಮೀನ್, ಅಖಿಲ ಭಾರತೀಯ ಗೇಮ್ ಫಿಶಿಂಗ್ ಅಸೋಸಿಯೇಷನ್ ಉಪಾಧ್ಯಕ್ಷ ಡೆರೆಕ್ ಡಿಸೋಜಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X