Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ನಾಲ್ಕು ದಿನಗಳ ಕೃಷಿ ಮೇಳಕ್ಕೆ...

ಬೆಂಗಳೂರು: ನಾಲ್ಕು ದಿನಗಳ ಕೃಷಿ ಮೇಳಕ್ಕೆ ಅದ್ದೂರಿ ಚಾಲನೆ

ಮೊದಲ ದಿನವೇ ಹರಿದು ಬಂದ ಜನಸಾಗರ

ವಾರ್ತಾಭಾರತಿವಾರ್ತಾಭಾರತಿ15 Nov 2018 8:42 PM IST
share
ಬೆಂಗಳೂರು: ನಾಲ್ಕು ದಿನಗಳ ಕೃಷಿ ಮೇಳಕ್ಕೆ ಅದ್ದೂರಿ ಚಾಲನೆ

ಬೆಂಗಳೂರು, ನ.15: ಗುರುವಾರದಿಂದ ನಾಲ್ಕು ದಿನಗಳ ನಗರದ ಗಾಂಧಿ ಕೃಷಿ ವಿಜ್ಞಾನ ಕೇಂದ್ರ(ಜಿಕೆವಿಕೆ)ದಲ್ಲಿ ಹಮ್ಮಿಕೊಂಡಿರುವ ಕೃಷಿ ಮೇಳಕ್ಕೆ ಅದ್ದೂರಿ ಚಾಲನೆ ದೊರಕಿದ್ದು, ರೈತರು, ವಿದ್ಯಾರ್ಥಿಗಳು, ಯುವಜನರ ಜನಸಾಗರವೇ ಹರಿದು ಬರುತ್ತಿದೆ.

ಕೃಷಿ ಮೇಳದಲ್ಲಿ ಸುಮಾರು 500 ಕ್ಕೂ ಅಧಿಕ ಕೃಷಿಗೆ ಪೂರಕವಾದ ಮಳಿಗೆಗಳನ್ನು ಸ್ಥಾಪನೆ ಮಾಡಲಾಗಿತ್ತು. ರಾಜ್ಯ ಕೃಷಿ ವಿವಿಗಳು, ತೋಟಗಾರಿಕೆ, ಅರಣ್ಯ ಇಲಾಖೆ, ಕೃಷಿ ಮಾರುಕಟ್ಟೆ ಮಂಡಳಿ, ಕರ್ನಾಟಕ ಹಾಲು ಮಹಾಮಂಡಳಿ, ಕೃಷಿ ಪರಿಕರಗಳ ಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು ಸೇರಿದಂತೆ ಹಲವರು ಮಳಿಗೆಗಳನ್ನು ಸ್ಥಾಪಿಸಿದ್ದರು.

ಬೆಂಗಳೂರು ಸೇರಿದಂತೆ ವಿವಿಧ ಕಡೆಗಳಿಂದ ಆಗಮಿಸಿದ್ದ ರೈತರು, ವಿದ್ಯಾರ್ಥಿಗಳು ಎಲ್ಲ ಮಳಿಗೆಗಳಿಗೆ ಭೇಟಿ ಮಾಡಿ ವಿವರಗಳನ್ನು ಪಡೆದುಕೊಳ್ಳುತ್ತಿದ್ದರು. ಕೃಷಿಕರು ಇಲ್ಲಿನ ಪಶು ಸಂಗೋಪನೆ ವಿಭಾಗದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಿಕ್ಕಿರಿದು ಸೇರಿ ಮಾಹಿತಿ ಪಡೆಯುತ್ತಿದ್ದರೆ, ವಿದ್ಯಾರ್ಥಿಗಳು ಹೊಸ ಸಂಶೋಧನೆ, ಹೊಸ ತಳಿಗಳ ಬಗ್ಗೆ ವಿವರಗಳನ್ನು ಕೇಳುತ್ತಿದ್ದರು.

ಪ್ರವೇಶ ದ್ವಾರದಿಂದ ಆರಂಭಗೊಂಡು ಕೊನೆಯವರೆಗೂ ಜನಸಂದಣಿಯಿಂದಲೇ ಕೂಡಿತ್ತು. ಕಳೆದ ವರ್ಷ ಅಧಿಕ ಬಿಸಿಲಿದ್ದರಿಂದ ಹೆಚ್ಚು ಸಮಯ ಮೇಳದಲ್ಲಿ ಎಲ್ಲ ಮಳಿಗೆಗಳಿಗೂ ಭೇಟಿ ನೀಡಲು ಸಾಧ್ಯವಾಗುತ್ತಿರಲಿಲ್ಲ. ಆದರೆ, ಈ ಬಾರಿ ಬಿಸಿಲು ಕಡಿಮೆಯಿದ್ದರಿಂದ ಎಲ್ಲ ಮಳಿಗೆಗಳಿಗೂ ಭೇಟಿ ನೀಡಿ ಅಗತ್ಯ ಮಾಹಿತಿ ಪಡೆಯುತ್ತಿದ್ದ ದೃಶ್ಯಗಳು ಕಂಡುಬಂದವು.

ಮುಖ್ಯದ್ವಾರದ ಪಕ್ಕದಲ್ಲಿಯೇ ಮಳಿಗೆ ತೆರೆದಿದ್ದ ಬೆಂಗಳೂರಿನ ಆರ್.ವಿ.ಕಾಲೇಜು ವಿದ್ಯಾರ್ಥಿಗಳು ಸಂಶೋಧನೆ ಮಾಡಿದ್ದ ವಿದ್ಯುತ್ ಚಾಲಿತ ಟ್ರಾಕ್ಟರ್ ಅನ್ನು ನೋಡಿ, ಮಾಹಿತಿ ಪಡೆಯಲು ಜನ ಮುಗಿಬಿದ್ದಿದ್ದರು. ಪಕ್ಕದಲ್ಲಿಯೇ ನೈಸರ್ಗಿಕ ಕೃಷಿ ಪದ್ಧತಿಗಳನ್ನು ಪರಿಚಯಿಸುತ್ತಿದ್ದ ಮಳಿಗೆಯಲ್ಲಿ ಸಿರಿಧಾನ್ಯಗಳು, ಸಾವಯವ ವಿಧಾನದಲ್ಲಿ ಬೆಳೆದಿದ್ದ ಉತ್ಪನ್ನಗಳಿಗೆ ಸಂಬಂಧಿಸಿದ ಮಾಹಿತಿಯನ್ನು ನೀಡಲಾಗುತ್ತಿತ್ತು. ಹಣಕಾಸು ಮತ್ತು ಕೃಷಿ ಉದ್ಯಮದ ಮಳಿಗೆಯಲ್ಲಿ ಕೃಷಿಗೆ ಸಂಬಂಧಿಸಿದ ಸಾಲಗಳು, ಬಡ್ಡಿ ಹಾಗೂ ಮತ್ತಿತರೆ ಯೋಜನೆಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಲಾಗುತ್ತಿತ್ತು.

ಮೇಳದ ಆರಂಭದಲ್ಲಿಯೇ ಕೃಷಿಗೆ ಪೂರಕವಾದ ಆಧುನಿಕ ಉಪಕರಣ ಪ್ರದರ್ಶನವಿದ್ದ ಮಳಿಗೆಯಲ್ಲಿ ಕಳೆ ಕೀಳುವ, ಬೀಜ ಪರಿಷ್ಕರಿಸುವ ಯಂತ್ರಗಳು ಸೇರಿದಂತೆ ವಿವಿಧ ಬಹುಪಯೋಗಿ ಯಂತ್ರಗಳನ್ನು ಪ್ರದರ್ಶನಕ್ಕಿಡಲಾಗಿತ್ತು. ರೈತರು, ಕೃಷಿಕಾರರು ಇಲ್ಲಿಗೆ ಭೇಟಿ ನೀಡಿ ವಿವರವಾದ ಮಾಹಿತಿ ಪಡೆಯುತ್ತಿದ್ದರು. ಪಕ್ಕದಲ್ಲಿದ್ದ ಮಳಿಗೆಯಲ್ಲಿ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ವಿವಿಧ ತಳಿಯ ಮೀನುಗಳನ್ನು ಪ್ರದರ್ಶಿಸಿದ್ದು, ಅದರಲ್ಲಿ ನೂತನವಾಗಿ ಮೀನು ತಳಿಗಳನ್ನು ಆವಿಷ್ಕಾರ ಮಾಡಲಾಗಿದೆ. ಆದರೆ, ರೈತರ ಬೇಡಿಕೆಗೆ ಅನುಗುಣವಾಗಿ ಮೀನುಗಳನ್ನು ನೀಡಲು ಸಾಧ್ಯವಾಗುತ್ತಿಲ್ಲ ಎಂದು ವಿವಿ ಡಾ.ಹರ್ಷ ಹೇಳಿದರು.

ವಿಶೇಷ ಆಕರ್ಷಣೆ: ಮೇಳದಲ್ಲಿ ಇತ್ತೀಚಿಗೆ ಬಿಡುಗಡೆಯಾದ ವಿವಿಧ ತಳಿಗಳ ಪ್ರಾತ್ಯಕ್ಷಿಕೆ, ಸುಧಾರಿತ ಬೇಸಾಯ ಪದ್ಧತಿಗಳ ತಾಕುಗಳು, ಖುಷ್ಕಿ ಬೇಸಾಯಕ್ಕೆ ಸೂಕ್ತವಾದ ಬೆಳೆ ಪದ್ದತಿಗಳು, ತೋಟಗಾರಿಕಾ ಬೆಳೆಗಳು, ಸಮಗ್ರ ಬೇಸಾಯ ಪದ್ಧತಿ ಪ್ರಾತ್ಯಕ್ಷಿಕೆ, ಸಿರಿಧಾನ್ಯಗಳು ಹಾಗೂ ಮಹತ್ವದ ಔಷಧೀಯ ಮತ್ತು ಸುಗಂಧಯುಕ್ತ ಸಸ್ಯಗಳು, ಸಮಗ್ರ ಪೋಷಕಾಂಶಗಳು ಮತ್ತು ಪೀಡೆ ನಿರ್ವಹಣೆ ಬಗ್ಗೆ ಮಾಹಿತಿ ನೀಡಲಾಗಿತ್ತು.

ಹನಿ ಮತ್ತು ತುಂತುರು ನೀರಾವರಿ ಪದ್ಧತಿಗಳು, ಮಳೆ ಹಾಗೂ ಮೇಲ್ಛಾವಣಿ ನೀರಿನ ಕೊಯ್ಲು, ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ಮೌಲ್ಯವರ್ದನೆ ಬಿತ್ತನೆ ಬೀಜಗಳ ಪರೀಕ್ಷೆ ಮತ್ತು ಶೇಖರಣೆ, ಯಂತ್ರೋಪಕರಣಗಳ ಪ್ರದರ್ಶನ, ಕುರಿ, ಕೋಳಿ ಸಾಗಾಣಿಕೆ, ರೈತರ ಸಮಸ್ಯೆಗಳಿಂದ ತಜ್ಞರಿಂದ ಸಲಹೆ ಸೇರಿದಂತೆ ವಿವಿಧ ರೀತಿಯ ಪ್ರದರ್ಶನಗಳನ್ನು ತೆರೆದಿಡಲಾಗಿತ್ತು. ಕೃಷಿ ಮೇಳದಲ್ಲಿ ಪಾಲ್ಗೊಳ್ಳಲು ಜಿಕೆವಿಕೆ ಮುಖ್ಯದ್ವಾರದಿಂದ ಮೇಳದ ಮುಖ್ಯದ್ವಾರದವರೆಗೂ ಉಚಿತವಾದ ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿತ್ತು. ಅಲ್ಲದೆ, ಜಿಕೆವಿಕೆಯಿಂದ ನೂತನವಾಗಿ ಸಂಶೋಧನೆ ಮಾಡಿರುವ ತಳಿಗಳ ಪ್ರಾತ್ಯಕ್ಷಿಕೆಯನ್ನು ತೋರಿಸುವ ಸಲುವಾಗಿ ರೈತರಿಗೆ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿತ್ತು. ಮೇಳದಲ್ಲಿ ಯಾವುದೇ ಅಡೆ ತಡೆಗಳು, ಅನಾಹುತಗಳು ಸಂಭವಿಸಿದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ಕಪ್ಪು ಮಾಂಸದ ಕೋಳಿ

ಮಧ್ಯಪ್ರದೇಶ ಮೂಲದ ಕಡಕ್‌ನಾಥ್ ಕೋಳಿ ಮಾರಾಟಕ್ಕಿದ್ದು, ಈ ಕೋಳಿಯನ್ನು ಕತ್ತರಿಸಿದರೆ ಕಪ್ಪು ಬಣ್ಣದ ರಕ್ತ ಸಿಗುತ್ತದೆ. ಅಲ್ಲದೆ, ಇದರ ಮಾಂಸವೂ ಕಪ್ಪಿದೆ. ಈ ಕೋಳಿಯಲ್ಲಿ ಕಬ್ಬಿಣಾಂಶ ಅಧಿಕವಿದ್ದು, ಕೊಬ್ಬಿನಾಂಶ ಇರುವುದಿಲ್ಲ. ಹೀಗಾಗಿ, ಈ ಕೋಳಿ ಸಾಕಾಣಿಕೆ ಮಾಡುವವರಿಗೆ ಅಧಿಕ ಲಾಭ. ಮೇಳದಲ್ಲಿ ಇದರ ಮೊಟ್ಟೆ ಹಾಗೂ ಕೋಳಿಗೆ ಬೇಡಿಕೆ ಹೆಚ್ಚಿತ್ತು.

ವಿಶೇಷ ಆಕರ್ಷಣೆ ಗಿರ್ ಹೋರಿ

ದೇಶದಲ್ಲಿ ಅತ್ಯಂತ ಕಡಿಮೆ ಪ್ರಮಾಣದಲ್ಲಿರುವ ಗುಜರಾತ್ ಮೂಲದ ದೇಸಿ ತಳಿ ಗಿರ್ ಹೋರಿ ಹೆಚ್ಚು ಜನರ ಆಕರ್ಷಣೆಯ ಕೇಂದ್ರವಾಗಿತ್ತು. ಬರೋಬ್ಬರಿ 1200 ಕೆ.ಜಿ.ತೂಕವಿರುವ ಈ ಹೋರಿಯನ್ನು ಅದರ ಮಾಲಕ ಮಾರಾಟ ಮಾಡಲು ಹಿಂಜರಿಯುತ್ತಾರೆ. ಆದರೆ, ಇದರ ಬೆಲೆ 24 ಲಕ್ಷಕ್ಕೂ ಅಧಿಕವಾಗಿದೆ ಎಂದು ಮಾಲಕ ತಿಳಿಸಿದ.

ಹಳ್ಳಿಕಾರ್ ಎತ್ತುಗಳು

ಕೃಷಿ ಮೇಳದಲ್ಲಿ ರೈತರ ಉತ್ಪನ್ನಗಳು ಅಷ್ಟೇ ಅಲ್ಲದೆ ಎತ್ತು, ಹೋರಿಗಳೂ ಆಕರ್ಷಣೆಯ ಕೇಂದ್ರವಾಗಿವೆ. ಮಂಡ್ಯ ಜಿಲ್ಲೆಯ ಕಲ್ಲಹಳ್ಳಿಯ ಹಳ್ಳಿಕಾರ್ ಎತ್ತುಗಳು ಗಮನ ಸೆಳೆಯುತ್ತಿದ್ದು, ಇದರ ಬೆಲೆ ನಾಲ್ಕು ಲಕ್ಷಕ್ಕೂ ಅಧಿಕವಿದೆ.

ವಿಶೇಷ ಆ್ಯಪ್

ಮೊದಲ ಬಾರಿಗೆ ಕೃಷಿ ಮೇಳದಲ್ಲಿ ಮೇಳದ ಸಂಪೂರ್ಣ ಮಾಹಿತಿ ನೀಡುವ ಉದ್ದೇಶದಿಂದ ‘ಕೃಷಿ ಮೇಳ 2018’ ಎಂಬ ನೂತನವಾದ ಮೊಬೈಲ್ ಆ್ಯಪ್ ಅನ್ನು ತಯಾರಿಸಲಾಗಿದೆ. ಅದರಲ್ಲಿ ಮೇಳಕ್ಕೆ ಹೋಗುವುದು ಹೇಗೆ, ಎಲ್ಲಿ ಏನೇನು ಇದೆ, ಬಸ್ ವ್ಯವಸ್ಥೆ ಹಾಗೂ ವಾಹನಗಳ ಪಾರ್ಕಿಂಗ್ ಸೇರಿದಂತೆ ಎಲ್ಲ ರೀತಿಯ ಮಾಹಿತಿಯನ್ನೂ ಅದರಲ್ಲಿ ಅಳವಡಿಸಲಾಗಿದೆ. 50 ರೂ.ಗೆ ಊಟ

ಕೃಷಿ ಮೇಳದಲ್ಲಿ ಪ್ರತಿ ಬಾರಿಯಂತೆ ಈ ಬಾರಿಯೂ ಜಿಕೆವಿಕೆ ವತಿಯಿಂದಲೇ ಮೇಳಕ್ಕೆ ಬರುವವರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ 50 ರೂ.ಗೆ ಮುದ್ದೆ, ಕಾಳು ಸಾರು, ಅನ್ನ ಸೇರಿದಂತೆ ಮತ್ತಿತರೆ ಪದಾರ್ಥಗಳನ್ನು ಒಳಗೊಂಡ ಊಟದ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೆ, ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆಯನ್ನು ಅಗತ್ಯ ಪ್ರಮಾಣದಲ್ಲಿ ಮಾಡಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X