ಕುವೈತ್‌ನಲ್ಲಿ ಎಲ್ಲಾ ವಿಮಾನ ಹಾರಾಟ ಸ್ಥಗಿತ

ಕುವೈತ್ ಸಿಟಿ, ನ. 15: ಕೆಟ್ಟ ಹವಾಮಾನದ ಹಿನ್ನೆಲೆಯಲ್ಲಿ, ಕುವೈತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡುವ ಎಲ್ಲ ವಿಮಾನಗಳನ್ನು ಸ್ಥಗಿತಗೊಳಿಸಲಾಗಿದೆ ಹಾಗೂ ಅಲ್ಲಿಗೆ ಬರುವ ವಿಮಾನಗಳನ್ನು ನೆರೆಯ ದೇಶಗಳಿಗೆ ತಿರುಗಿಸಲಾಗಿದೆ ಎಂದು ಕುವೈತ್ ನ್ಯೂಸ್ ಏಜೆನ್ಸಿ ಹೇಳಿದೆ.ಕೆಟ್ಟ ಹವಾಮಾನದ ಹಿನ್ನೆಲೆಯಲ್ಲಿ ಈ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ ಎಂದು ಕುವೈತ್ ನಾಗರಿಕ ವಾಯುಯಾನ ನಿರ್ದೇಶನಾಲಯ ತಿಳಿಸಿದೆ.
Next Story





