ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ಓಪನ್

ಶಬರಿಮಲೆ, ನ.16: ಶಬರಿಮಲೆ ಶ್ರೀ ಅಯ್ಯಪ್ಪ ದೇವಾಲಯದ ಬಾಗಿಲು ಗುರುವಾರ ಸಂಜೆ ತೆರೆಯಲಾಗಿದ್ದು, ಇಂದು ದೇವಸ್ಥಾನದಲ್ಲಿ ಪೂಜೆಗೆ ಅರ್ಚಕರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ.
ಶನಿವಾರದಿಂದ ಅಯ್ಯಪ್ಪ ಭಕ್ತಾಧಿಗಳಿಗೆ ದೇವಸ್ಥಾನ ಪ್ರವೇಶಿಸಲು ಅವಕಾಶ ದೊರೆಯಲಿದೆ. ಸುಪ್ರೀಂ ಕೋರ್ಟ್ ಎಲ್ಲ ವಯಸ್ಸಿನ ಮಹಿಳೆಯರು ಶಬರಿಮಲೆ ದೇವಸ್ಥಾನ ಪ್ರವೇಶಿಸಬಹುದು ಎಂದು ತೀರ್ಪು ನೀಡಿದ ಬಳಿಕ ಮೂರನೇ ಬಾರಿ ದೇವಸ್ಥಾನದ ಬಾಗಿಲು ತೆರೆಯಲಾಗಿದೆ.
ದೇವಸ್ಥಾನಕ್ಕೆ ಎಲ್ಲ ಮಹಿಳೆಯರಿಗೂ ಪ್ರವೇಶ ಕಲ್ಪಿಸುವ ವಿಚಾರದಲ್ಲಿ ಪ್ರತಿಭಟನೆ ಮುಂದುವರಿದಿದ್ದು,ದೇವಸ್ಥಾನಕ್ಕೆ ಪ್ರವೇಶ ಕೋರಿ ಈಗಾಗಲೇ 500ಕ್ಕೂ ಅಧಿಕ ಮಹಿಳೆಯರು ಹೆಸರು ನೋಂದಾಯಿಸಿದ್ದಾರೆ ಎಂದು ತಿಳಿದು ಬಂದಿದೆ.
Next Story