Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೆಆರ್‌ಐಡಿಎಲ್ ವಿರುದ್ಧ ಕ್ರಿಮಿನಲ್...

ಕೆಆರ್‌ಐಡಿಎಲ್ ವಿರುದ್ಧ ಕ್ರಿಮಿನಲ್ ಕೇಸ್: ದ.ಕ. ಜಿಲ್ಲಾಧಿಕಾರಿ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ17 Nov 2018 8:19 PM IST
share
ಕೆಆರ್‌ಐಡಿಎಲ್ ವಿರುದ್ಧ ಕ್ರಿಮಿನಲ್ ಕೇಸ್: ದ.ಕ. ಜಿಲ್ಲಾಧಿಕಾರಿ ಎಚ್ಚರಿಕೆ

ಮಂಗಳೂರು, ನ.16: ಜಿಲ್ಲೆಯಲ್ಲಿ ಹಲವು ಪ್ರವಾಸೋದ್ಯಮ ಯೋಜನೆಗಳ ಕಾಮಗಾರಿ ಅನುಷ್ಠಾನಕ್ಕೆ ಕೆಆರ್‌ಐಡಿಎಲ್ ಸಂಸ್ಥೆಗೆ ವಹಿಸಲಾಗಿದ್ದರೂ, ಆ ಸಂಸ್ಥೆಯ ಅಧಿಕಾರಿಗಳ ವಿಳಂಬದಿಂದ ಕಾಮಗಾರಿಗಳು ನನಗುದಿಗೆ ಬಿದ್ದಿದೆ. ಈ ನಿಟ್ಟಿನಲ್ಲಿ ಕೆಆರ್‌ಐಡಿಎಲ್ ಸಂಸ್ಥೆಯ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಎಚ್ಚರಿಸಿದ್ದಾರೆ.

ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಬಿ. ರಾಮು ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಜಿಲ್ಲೆಯ ವಿವಿಧ ಪ್ರವಾಸೋದ್ಯಮ ಯೋಜನೆ ಮತ್ತು ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.

ಪ್ರವಾಸೋದ್ಯಮ ಯೋಜನೆಗಳು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಹಲವು ಕಾಮಗಾರಿಗಳನ್ನು ಕೆಆರ್‌ಐಡಿಎಲ್ ಸಂಸ್ಥೆಗೆ ವಹಿಸಲಾಗಿದೆ. ಆದರೆ ಹಲವು ಯೋಜನೆಗಳು ದೀರ್ಘ ಕಾಲದಿಂದ ಇನ್ನೂ ನೆನಗುದಿಗೆ ಬಿದ್ದಿದೆ. ಹಲವು ಬಾರಿ ಈ ಬಗ್ಗೆ ಪರಿಶೀಲಿಸಲಾಗಿದ್ದರೂ, ಯಾವುದೆ ಪ್ರಗತಿ ಆಗಿಲ್ಲ. ಈ ನಿಟ್ಟಿನಲ್ಲಿ ಕೇಸು ದಾಖಲಿಸುವ ಬಗ್ಗೆ ಗಂಭೀರವಾಗಿ ಚಿಂತಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ಸುಮಾರು 1,978 ಲಕ್ಷ ರೂ.ಗಳ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಇದರಲ್ಲಿ ಕೆಆರ್‌ಐಡಿಎಲ್ ಸಂಸ್ತೆಗೆ 1,414 ಲಕ್ಷ ರೂ., ನಿರ್ಮಿತಿ ಕೇಂದ್ರಕ್ಕೆ 202 ಲಕ್ಷ ರೂ. ಹಾಗೂ ಲೋಕೋಪಯೋಗಿ ಇಲಾಖೆಗೆ 3,61 ಲಕ್ಷ ರೂ.ಗಳ ಕಾಮಗಾರಿಗಳಿಗೆ ಮಂಜೂರಾತಿ ನೀಡಲಾಗಿದೆ. ಅನುಷ್ಠಾನ ಏಜನ್ಸಿಗಳಿಗೆ ಈ ಪೈಕಿ 843 ಲಕ್ಷ ರೂ. ಈಗಾಗಲೇ ಬಿಡುಗಡೆ ಮಾಡಲಾಗಿದೆ. ಅನುದಾನವಿದ್ದರೂ ಕಾಮಗಾರಿಗಳ ಅನುಷ್ಠಾನದಲ್ಲಿ ವಿಳಂಭವಾಗಿರುವುದಕ್ಕೆ ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಬಿ. ರಾಮು ಅಸಮಾಧಾನ ವ್ಯಕ್ತಪಡಿಸಿದರು.

ಪ್ರವಾಸೋದ್ಯಮ ಇಲಾಖೆಯಿಂದ ಈಗಾಗಲೇ ದ.ಕ. ಜಿಲ್ಲೆಯಲ್ಲಿ ವಿವಿಧ ಧಾರ್ಮಿಕ ಕೇಂದ್ರಗಳ ಪರಿಸರದಲ್ಲಿ ಯಾತ್ರಿ ನಿವಾಸ ನಿರ್ಮಾಣ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಯೋಜನಾ ಮಂಜೂರಾತಿ ನೀಡಲಾಗಿದೆ. ಈ ಎಲ್ಲಾ ಯೋಜನಾ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ನಡೆಸಿ ಪೂರ್ಣಗೊಳಿಸಲು ನಿರ್ದೇಶಕರು ಸೂಚಿಸಿದರಲ್ಲದೆ ಯಾತ್ರಿ ನಿವಾಸ ನಿರ್ಮಾಣಕ್ಕೆ ಸಂಬಂಧಿಸಿದ ಸಂಸ್ಥೆಗಳು ನಿವೇಶನ ಹಸ್ತಾಂತರಿಸದಿದ್ದರೆ, ಅಂತಹ ಯೋಜನೆಗಳನ್ನು ರದ್ದುಪಡಿಸುವುದು ಸೂಕ್ತ ಎಂದರು.

ಮಂಗಳೂರಿನ ಸುಲ್ತಾನ್ ಬತ್ತೇರಿ ಕೋಟೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿಯನ್ನು 125 ಲಕ್ಷ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ಲೋಕೋಪಯೋಗಿ ಇಲಾಖೆಯು ಅಂದಾಜುಪಟ್ಟಿ ಸಲ್ಲಿಸಿದೆ. ಕರಾವಳಿಯಲ್ಲಿ ಬೀಚ್ ಪ್ರವಾಸೋದ್ಯಮವನ್ನು ಇನ್ನಷ್ಟು ಆಕರ್ಷಿಸಲು ಪ್ರವಾಸೋದ್ಯಮ ಇಲಾಖೆ ಯೋಜನೆ ಹಾಕಿಕೊಳ್ಳಲಿದೆ ಎಂದು ಎಚ್. ರಾಮು ತಿಳಿಸಿದರು.

ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಉದಯ ಕುಮಾರ್ ಶೆಟ್ಟಿ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X