ಸುರತ್ಕಲ್: ಎನ್‌ಐಟಿಕೆ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು, ನ.17: ಎನ್‌ಐಟಿಕೆಯ ವಿದ್ಯಾರ್ಥಿಯೊಬ್ಬ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಸುರತ್ಕಲ್‌ನಲ್ಲಿ ಶನಿವಾರ ನಡೆದಿದೆ.
ಮಹಾರಾಷ್ಟ್ರ ಮೂಲದ ಆನಂದ ಪಾಠಕ್ (20) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಈತ ಮೂರನೇ ವರ್ಷದ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಯಾಗಿ ವಿದ್ಯಾಭ್ಯಾಸ ಮಾಡುತ್ತಿದ್ದನು. ಈತ ಮ್ಯೂಸಿಕಲ್ ಕ್ಲಬ್‌ನ ತರಗತಿಗಾಗಿ 6ನೆ ಮಹಡಿಗೆ ತೆರಳಿದ್ದು, ಮೆಕ್ಯಾನಿಕಲ್ ವಿಭಾಗದ ಪ್ರೊಫೆಸರೊಬ್ಬರು ಹಾಜರಾತಿ ಕೊರತೆಯ ಕುರಿತಂತೆ ವಿದ್ಯಾರ್ಥಿಗೆ ಎಚ್ಚರಿಕೆ ನೀಡಿದ್ದರು ಎಂದು ತಿಳಿದುಬಂದಿದೆ.
ಈ ಕಾರಣದಿಂದಲೇ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಸುರತ್ಕಲ್ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ವಿದ್ಯಾರ್ಥಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದಾರೆ. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story