Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುಸ್ತಕ ಓದುವಿಕೆಯಿಂದ ಮಾನವತೆ,...

ಪುಸ್ತಕ ಓದುವಿಕೆಯಿಂದ ಮಾನವತೆ, ಹೃದಯವಂತಿಕೆ ಬೆಳೆಯಲು ಸಾಧ್ಯ: ಸಾಹಿತಿ ಏರ್ಯ

ಬಂಟ್ವಾಳದಲ್ಲಿ ಪುಸ್ತಕ ಪ್ರದರ್ಶನ-ಗ್ರಂಥಾಲಯ ಸದಸ್ಯತ್ವ ಆಂದೋಲನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ18 Nov 2018 5:37 PM IST
share
ಪುಸ್ತಕ ಓದುವಿಕೆಯಿಂದ ಮಾನವತೆ, ಹೃದಯವಂತಿಕೆ ಬೆಳೆಯಲು ಸಾಧ್ಯ: ಸಾಹಿತಿ ಏರ್ಯ

ಬಂಟ್ವಾಳ, ನ. 18: ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾ ಕೇಂದ್ರ ಗ್ರಂಥಾಲಯ, ಬಂಟ್ವಾಳ ಶಾಖಾ ಗ್ರಂಥಾಲಯ ವತಿಯಿಂದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಬಂಟ್ವಾಳ ತಾಲೂಕು ಪಂಚಾಯತ್ ಎಸ್‍ಜಿಎಸ್‍ವೈ ತರಬೇತಿ ಕೇಂದ್ರ ಸಭಾಂಗಣದಲ್ಲಿ ಪುಸ್ತಕ ಪ್ರದರ್ಶನ ಮತ್ತು ಗ್ರಂಥಾಲಯ ಸದಸ್ಯತ್ವ ಆಂದೋಲನ ಕಾರ್ಯಕ್ರಮ ರವಿವಾರ ನಡೆಯಿತು.

ಕಾರ್ಯಕ್ರಮವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮತ್ತು ಪುಸ್ತಕ ಪ್ರದರ್ಶನವನ್ನು ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಶಾಸಕ, ಯುವ ಜನತೆ ಓದುವ ಹವ್ಯಾಸ ಬೆಳೆಸಿಕೊಳ್ಳುವ ಮೂಲಕ ಸಮಾಜಕ್ಕೆ ಉತ್ತಮ ಹಾಗೂ ಆರೋಗ್ಯಕರ ಚಿಂತನೆ ಗಳನ್ನು ನೀಡಬೇಕಾಗಿದೆ. ಬದಲಾದ ಸನ್ನಿವೇಶದಲ್ಲಿ ಓದುಗರ ಕೊರತೆಯಾಗಿಲ್ಲ, ಅವರೆಲ್ಲರೂ ಡಿಜಿಟಲ್ ಮಾಧ್ಯಮಗಳ ಮೂಲಕ ಜ್ಞಾನಾರ್ಜನೆ ಮಾಡುತ್ತಿ ದ್ದಾರೆ. ಆದರೆ, ಪುಸ್ತಕಗಳನ್ನು ಓದುವುದರಿಂದ ಸಿಗುವ ಲಾಭವೇ ಬೇರೆ ಎಂದರು.

ಈ ಸಂದರ್ಭ ಹಿರಿಯ ಸಾಹಿತಿ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಮಾತನಾಡಿದ ಅವರು, ಇಂದು ಪುಸ್ತಕ ಕೊಳ್ಳಲು ನಾವು ಹಿಂದೇಟು ಹಾಕುತ್ತೇವೆ. ಆದರೆ, ಹೋಟೆಲ್ ಇತ್ಯಾದಿಗಳಿಗೆ ಹಣ ವ್ಯಯಿಸಲು ಹಿಂದೆ ಮುಂದೆ ನೋಡುವುದಿಲ್ಲ. 100 ರೂಪಾಯಿಗೆ ನೋಬೆಲ್ ಪ್ರಶಸ್ತಿ ಪುರಸ್ಕೃತರ ಕೃತಿ ದೊರಕುತ್ತದೆ. ಪುಸ್ತಕಗಳ ಓದುವಿಕೆ ನಮಗೆ ಮಾನವತೆ, ಹೃದಯವಂತಿಕೆ, ಪ್ರೀತಿಯನ್ನು ಕಲಿಸುತ್ತದೆ. ಆಧುನಿಕ ತಂತ್ರಜ್ಞಾನ ನಮಗೆ ವಿವರಗಳನ್ನಷ್ಟೇ ನೀಡಬಹುದು, ಮಾಹಿತಿ ಒದಗಿಸಬಹುದು. ಆದರೆ, ಹೃದಯವಂತಿಕೆ, ಪ್ರೀತಿ, ಮನುಷ್ಯತ್ವವನ್ನು ಗ್ರಂಥಾಲಯಗಳು ಒದಗಿಸುತ್ತವೆ ಎಂದು ಹೇಳಿದರು.

ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ಮಾತನಾಡಿ, ಪ್ರತಿ ಶಾಲೆಗಳಲ್ಲಿರುವ ಕಪಾಟುಗಳ ಒಳಗಿರುವ ಪುಸ್ತಕಗಳನ್ನು ಮಕ್ಕಳು ಓದಬೇಕು, ಇಲಾಖೆ ವತಿಯಿಂದ ಆ ನಿಟ್ಟಿನಲ್ಲಿ ಕೆಲಸ ಮಾಡಲಿದೆ ಎಂದರು. ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ ಮಾತನಾಡಿದರು. ಅಧ್ಯಕ್ಷತೆಯನ್ನು ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ವಹಿಸಿದ್ದರು.

ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಮಮತಾ ರೈ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಖಾ ಗ್ರಂಥಾಲಯದ ಸಹಾಯಕ ಗ್ರಂಥಪಾಲಕಿ ನಮಿತಾ, ಇಲಾಖೆಯ ಪ್ರಣೀತಾ ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸಿದರು. ನಾನಾ ಗ್ರಾಪಂಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಾಲಯ ಮೇಲ್ವಿಚಾರಕರಾದ ಮಾನಸಾ, ಜಯಲಕ್ಷ್ಮೀ, ವಿಮಲಾ, ಜಯಲಕ್ಷ್ಮೀ, ಗುಣವತಿ, ಜಯಂತಿ, ಉಮಾವತಿ ಅವರನ್ನು ಗೌರವಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X