ಸಿಆರ್ಪಿಎಫ್ ಶಿಬಿರದ ಮೇಲೆ ಉಗ್ರರ ದಾಳಿ; ಯೋಧ ಬಲಿ
![ಸಿಆರ್ಪಿಎಫ್ ಶಿಬಿರದ ಮೇಲೆ ಉಗ್ರರ ದಾಳಿ; ಯೋಧ ಬಲಿ ಸಿಆರ್ಪಿಎಫ್ ಶಿಬಿರದ ಮೇಲೆ ಉಗ್ರರ ದಾಳಿ; ಯೋಧ ಬಲಿ](https://www.varthabharati.in/sites/default/files/images/articles/2018/11/18/163872.jpg)
ಸಾಂದರ್ಭಿಕ ಚಿತ್ರ
ಜಮ್ಮು, ನ.18: ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿ ಹೊಸತಾಗಿ ಆರಂಭಿಸಲಾಗಿರುವ ಸಿಆರ್ಪಿಎಫ್ ಶಿಬಿರದ ಮೇಲೆ ರವಿವಾರ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಓರ್ವ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದು, ಇತರ ಇಬ್ಬರು ಗಾಯಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದಲ್ಲಿ ಇದೀಗ ನಡೆಯುತ್ತಿರುವ ಗ್ರಾಮಪಂಚಾಯತ್ ಚುನಾವಣೆಯ ಹಿನ್ನೆಲೆಯಲ್ಲಿ ಪುಲ್ವಾಮಾದಲ್ಲಿ ಸಿಆರ್ಪಿಎಫ್ ಶಿಬಿರವನ್ನು ಹೊಸತಾಗಿ ಆರಂಭಿಸಲಾಗಿದೆ. ಶಿಬಿರದ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿ ಗ್ರೆನೇಡ್ಗಳನ್ನು ಉಗ್ರರು ಎಸೆದಿದ್ದು, ಘಟನೆಯಲ್ಲಿ ಭದ್ರತಾ ಸಿಬ್ಬಂದಿ ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ರವಿವಾರ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ಹಲವಾರು ಅಪಹರಣ ಕೃತ್ಯಗಳನ್ನು ನಡೆಸಿದ್ದಾರೆ.
Next Story