ಉಡುಪಿ ಯುವ ಕಾಂಗ್ರೆಸ್‌ನಿಂದ ಬಡ ಮಹಿಳೆಯರಿಗೆ ಸೀರೆ ವಿತರಿಸಿ ಇಂದಿರಾ ಗಾಂಧಿ ಜನ್ಮದಿನಾಚರಣೆ

ಉಡುಪಿ, ನ.19: ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿಯವರ 101ನೇ ಜನ್ಮದಿನೋತ್ಸವದ ಪ್ರಯುಕ್ತ ಸೋಮವಾರ ಇಂದ್ರಾಳಿ ಕಾಲನಿಯ ಮಹಿಳೆಯರಿಗೆ ಸೀರೆ ವಿತರಿಸಲಾಯಿತು.
ಜಿಲ್ಲಾಧ್ಯಕ್ಷ ವಿಶ್ವಾಸ್ ಅಮೀನ್ ಮಾತನಾಡಿ, ಇಂದಿರಾ ಗಾಂಧಿ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದರು. ಈ ಮೂಲಕ ಅವರು ಯುವಕರಿಗೆ ಸ್ಫೂರ್ತಿಯಾಗಿದ್ದಾರೆ. ಬಡವರ, ದೀನ ದಲಿತರ ಹಿಂದುಳಿದ ವರ್ಗ, ಅಶಕ್ತರ ಪರವಾಗಿ ನಿಂತ ಧೀಮಂತ ಮಹಿಳೆ ಇಂದಿರಾ ಗಾಂಧಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಉಡುಪಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಪ್ರಶಾಂತ್ ಪೂಜಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಮ್ರಾನ್, ಕಾಪು ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಆಚಾರ್ಯ, ಉಡುಪಿ ಇಂಟೆಕ್ ಅಧ್ಯಕ್ಷ ನವೀನ್ ಶೆಟ್ಟಿ, ಮಾಜಿ ನಗರಸಭಾ ಸದಸ್ಯ ವಿಜಯ ಮಂಚಿ, ಯುವ ಕಾಂಗ್ರೆಸ್ ಮುಖಂಡರಾದ ಪ್ರವೀಣ್ ಬಾರಕೂರು, ರಹ್ಮತುಲ್ಲಾ, ವಿವೇಕ್ ಮೊದಲಾದವರು ಉಪಸ್ಥಿತರಿದ್ದರು.
ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿಘ್ನೇಶ್ ಕಿಣಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.