ಕುಂದಾಪುರ ಕಾಂಗ್ರೆಸ್‌ನಿಂದ ಇಂದಿರಾ ಗಾಂಧಿ ಜನ್ಮ ದಿನಾಚರಣೆ

ಕುಂದಾಪುರ, ನ.19: ಬಾಂಗ್ಲಾ ವಿಮೋಚನೆಯ ಸಂದರ್ಭದಲ್ಲಿ ತೋರಿದ ಧೈರ್ಯ, ಸ್ಥೈರ್ಯ, ರಾಜಕೀಯ ಮುತ್ಸದ್ದಿತನ ಹಾಗೂ ಚಾತುರ್ಯಕ್ಕಾಗಿ ಅಂದಿನ ವಿರೋಧ ಪಕ್ಷದ ನಾಯಕ ಎ.ಬಿ.ವಾಜಪೇಯಿಯವರಿಂದ ಸಂಸತ್ತಿನಲ್ಲಿ ದುರ್ಗೆ ಎಂದು ಕರೆಸಿಕೊಂಡ ಉಕ್ಕಿನ ಮಹಿಳೆ ಇಂದಿರಾಗಾಂಧಿ ಈ ದೇಶದ ಐಕ್ಯತೆಗಾಗಿ ಭಯೋತ್ಪಾದಕರ ಗುಂಡಿಗೆ ಬಲಿಯಾಗಬೇಕಾಗಿ ಬಂದದ್ದು ದುರಂತ ಎಂದು ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗದ ರಾಜ್ಯ ಉಪಾಧ್ಯಕ್ಷ ಮಾಣಿ ಗೋಪಾಲ ಹೇಳಿದ್ದಾರೆ.
ಸೋಮವಾರ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಇಂದಿರಾ ಗಾಂಧಿ ಅವರ 101ನೇ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾವಹಿಸಿ ಅವರು ಮಾತನಾಡುತಿದ್ದರು.
ತನ್ನ ಅಧಿಕಾರವಧಿಯಲ್ಲಿ ಜಾರಿಗೊಳಿಸಿದ 20 ಅಂಶಗಳ ಕಾರ್ಯಕ್ರಮಗಳ ಮೂಲಕ ಈ ದೇಶದ ಶೋಷಿತ, ದಮನಿತ ವರ್ಗದ ಕಟ್ಟಕಡೆಯ ವ್ಯಕ್ತಿಯನ್ನು ಕೂಡ ಸಮಾಜದ ಮುಖ್ಯವಾಹಿನಿಗೆ ಎಳೆದು ತಂದ ಇಂದಿರಾಜಿ ಜಾರಿ ಗೊಳಿಸಿದ ಬ್ಯಾಂಕ್ ರಾಷ್ಟ್ರೀಕರಣ ಆ ವರ್ಗದ ಜನರನ್ನು ಆರ್ಥಿಕವಾಗಿ, ಶೈಕ್ಷಣಿಕ ವಾಗಿ, ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ಪುನಶ್ಚೇತನಗೊಳಿಸಿತು ಎಂದರು.
ತನ್ನ ಅಧಿಕಾರವಧಿಯಲ್ಲಿ ಜಾರಿಗೊಳಿಸಿದ 20 ಅಂಶಗಳ ಕಾರ್ಯಕ್ರಮಗಳ ಮೂಲಕ ಈ ದೇಶದ ಶೋಷಿತ, ದಮನಿತ ವರ್ಗದ ಕಟ್ಟಕಡೆಯ ವ್ಯಕ್ತಿಯನ್ನು ಕೂಡ ಸಮಾಜದ ಮುಖ್ಯವಾಹಿನಿಗೆ ಎಳೆದು ತಂದ ಇಂದಿರಾಜಿ ಜಾರಿ ಗೊಳಿಸಿದ ಬ್ಯಾಂಕ್ ರಾಷ್ಟ್ರೀಕರಣ ಆ ವರ್ಗದ ಜನರನ್ನು ಆರ್ಥಿಕವಾಗಿ, ಶೈಕ್ಷಣಿಕ ವಾಗಿ, ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ಪುನಶ್ಚೇತನಗೊಳಿಸಿತು ಎಂದರು. ಈ ಸಂದರ್ಭದಲ್ಲಿ ನಗರ ಪ್ರಾಧಿಕಾರದ ಮಾಜಿ ಅಧ್ಯಕ್ಷ ವಿಕಾಸ್ ಹೆಗ್ಡೆ, ಕಾಂಗ್ರೆಸ್ ಐಟಿ ಸೆಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಎಪಿಯಂಸಿ ಉಪಾಧ್ಯಕ್ಷ ಗಣೇಶ ಸೇರೆಗಾರ್, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಕ್ವಾಡಿ ರಮೇಶ ಶೆಟ್ಟಿ, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹಾರೂನ್ ಸಾಹೇಬ್, ಜಿಪಂ ಮಾಜಿ ಸದಸ್ಯೆ ರೇವತಿ ಎನ್. ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಶಿವಾನಂದ ಕೆ., ಪುರಸಭಾ ಸದಸ್ಯರಾದ ಕೋಡಿ ಲಕ್ಷ್ಮಿ ಬಾ ಪೂಜಾರಿ, ಶ್ರೀಧರ ಶೇರೆಗಾರ್, ಚಂದ್ರಶೇಖರ ಖಾರ್ವಿ, ಕೇಶವ ಭಟ್, ಶಿವರಾಮ ಪುತ್ರನ್ ಮುಂತಾದವರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಾರಾಯಣ ಆಚಾರ್ ನಿರೂಪಿಸಿ, ವಿನೋದ್ ಕ್ರಾಸ್ಟೋ ಸ್ವಾಗತಿಸಿ, ವಂದಿಸಿದರು.