ನ. 25: ಕಡಬ, ಮೂಡುಬಿದಿರೆ ತಾಲೂಕು ಉದ್ಘಾಟನೆ- ಯು.ಟಿ. ಖಾದರ್

ಮಂಗಳೂರು, ನ. 20: ಕಡಬ ಮತ್ತು ಮೂಡುಬಿದಿರೆ ತಾಲೂಕುಗಳನ್ನು ನ. 25ರಂದು ರಾಜ್ಯ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ. ಎರಡು ತಾಲೂಕುಗಳ ಮೂಲ ಸೌಕರ್ಯಗಳ ಅಭಿವೃದ್ಧಿಗೆ ತಲಾ 10 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ನ. 25ರಂದು ಬೆಳಗ್ಗೆ 9 ಗಂಟೆಗೆ ಕಡಬ ತಾಲೂಕು, 11 ಗಂಟೆಗೆ ಬಂಟ್ವಾಳದ ಇಂದಿರಾ ಕ್ಯಾಂಟೀನ್ ಉದ್ಘಾಟನೆ, 2.30ಕ್ಕೆ ಮೂಡುಬಿದಿರೆ ತಾಲೂಕು ಉದ್ಘಾಟನೆಯಾಗಲಿದೆ. ಅದೇ ದಿನ ಸಂಜೆ 4 ಗಂಟೆಗೆ ಮಂಗಳೂರಿನಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳ ಶಾಸಕರು, ಕಂದಾಯ ಅಧಿಕಾರಿಗಳು ಸೇರಿದಂತೆ ಕಂದಾಯ ಇಲಾಖೆಯ ಸಮಸ್ಯೆ ಪರಿಹಾರಕ್ಕೆ ಸಭೆ ಕರೆಯಲಾಗಿದೆ. ಕಂದಾಯ ಇಲಾಖೆಯ ಸಮಸ್ಯೆ ಪರಿಹಾರಕ್ಕೆ ಅರ್ಜಿ ಸಲ್ಲಿಸುವವರು ಮುಂಚಿತವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
Next Story