Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಂಸ್ಕರಿಸಿದ ನೀರಿನಿಂದ ಬೆಂಗಳೂರು ಕೆರೆ...

ಸಂಸ್ಕರಿಸಿದ ನೀರಿನಿಂದ ಬೆಂಗಳೂರು ಕೆರೆ ತುಂಬಿಸಲು ಕ್ರಮ: ಉಪಮುಖ್ಯಮಂತ್ರಿ ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ20 Nov 2018 7:08 PM IST
share
ಸಂಸ್ಕರಿಸಿದ ನೀರಿನಿಂದ ಬೆಂಗಳೂರು ಕೆರೆ ತುಂಬಿಸಲು ಕ್ರಮ: ಉಪಮುಖ್ಯಮಂತ್ರಿ ಪರಮೇಶ್ವರ್

ಬೆಂಗಳೂರು, ನ. 20: ಹೊಸದಾಗಿ ನಿರ್ಮಿಸುವ ಎಲ್ಲ ಅಪಾರ್ಟ್‌ಮೆಂಟ್‌ಗಳಲ್ಲೂ ತ್ಯಾಜ್ಯ ನೀರನ್ನು ಸಂಸ್ಕರಣಾ ಘಟಕ(ಎಸ್‌ಟಿಪಿ)ವನ್ನು ಸ್ಥಾಪಿಸುವುದನ್ನು ಕಡ್ಡಾಯ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಮಂಗಳವಾರ ಇಲ್ಲಿನ ಕಬ್ಬನ್‌ಪಾರ್ಕ್‌ನಲ್ಲಿರುವ ತ್ಯಾಜ್ಯ ನೀರಿನ ಮರುಬಳಕೆ ಸ್ಥಾವರದಲ್ಲಿ 4 ಎಂಎಲ್‌ಡಿ ಸಾಮರ್ಥ್ಯಕ್ಕೆ ಹೆಚ್ಚಿಸಿರುವ ಘಟಕ ಹಾಗೂ ಕೆಸಿ ವ್ಯಾಲಿಯಲ್ಲಿ ನಿರ್ಮಿಸುತ್ತಿರುವ 150 ಎಂಎಲ್‌ಡಿ ಸಾಮರ್ಥ್ಯದ ತ್ಯಾಜ್ಯ ನೀರು ಸಂಸ್ಕರಣಾ ಘಟಕದ ಕಾಮಗಾರಿ ವೀಕ್ಷಿಸಿದ ಬಳಿಕ ಅವರು ಮಾತನಾಡುತ್ತಿದ್ದರು.

ಅಪಾರ್ಟ್‌ಮೆಂಟ್‌ಗಳಿಂದಲೇ ಹೆಚ್ಚು ತ್ಯಾಜ್ಯ ನೀರು ಉತ್ಪಾದನೆಯಾಗುತ್ತಿದೆ. ಹೀಗಾಗಿ ಹೊಸ ಅಪಾರ್ಟ್‌ಮೆಂಟ್‌ಗಳಲ್ಲಿ ಎಸ್‌ಟಿಪಿ ಅಳವಡಿಸಿಕೊಳ್ಳಬೇಕು ಎಂದ ಅವರು, ನಗರದಲ್ಲಿ ಒಟ್ಟು 1440 ಎಂಎಲ್‌ಡಿ ತ್ಯಾಜ್ಯ ನೀರು ಉತ್ಪತ್ತಿಯಾಗುತ್ತಿದೆ. ಈ ಪೈಕಿ ಪ್ರಸ್ತುತ 1052 ಎಂಎಲ್‌ಡಿ ನೀರನ್ನು ಮಾತ್ರ ಸಂಸ್ಕರಣೆ ಮಾಡುವ ಸಾಮರ್ಥ್ಯವನ್ನು ಜಲಮಂಡಳಿ ಹೊಂದಿದೆ ಎಂದರು.

ಚೆಲ್ಲಘಟ್ಟದ ಕೆಸಿ ವ್ಯಾಲಿಯಲ್ಲಿ ನಿರ್ಮಿಸುತ್ತಿರುವ ಘಟಕದಲ್ಲಿ 515 ಎಂಎಲ್‌ಡಿ ತ್ಯಾಜ್ಯ ನೀರನ್ನು ಸಂಸ್ಕರಿಸುವ ಯೋಜನೆ ಇದ್ದು, 2020ರ ಒಳಗೆ ಈ ಘಟಕದ ಕಾಮಗಾರಿ ಪೂರ್ಣಗೊಳ್ಳಲಿದೆ. ಇದರಿಂದ ತ್ಯಾಜ್ಯ ನೀರು ಸಂಸ್ಕರಿಸುವ ಸಾಮರ್ಥ್ಯ 1572 ಎಂಎಲ್‌ಡಿಗೆ ಏರಲಿದೆ. ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಗೊಂಡಿರುವ 110 ಹಳ್ಳಿಗಳಿಂದ ಉತ್ಪಾದನೆಯಾಗುವ 129 ಎಂಎಲ್‌ಡಿ ತ್ಯಾಜ್ಯ ನೀರನ್ನು ಸಂಸ್ಕರಿಸುವ ಸಾಮರ್ಥ್ಯ ಜಲಮಂಡಳಿ ಹೊಂದಲಿದೆ ಎಂದರು.

ಪ್ರಸ್ತುತ ಕೋರಮಂಗಲ ಚಲಘಟ್ಟ ಘಟಕದಲ್ಲಿ 480ಎಂಎಲ್‌ಡಿ ಸಂಸ್ಕರಣೆಯಾಗುತ್ತಿದೆ. ಈವರೆಗೂ 308 ಎಂಎಲ್‌ಡಿ ಸಂಸ್ಕರಿಸಿದ್ದೇವೆ. ಇನ್ನು 150 ಎಂಎಲ್‌ಡಿಗೆ ಏರಿಸಲು ಯೋಜನೆ ಹಾಕಿಕೊಂಡಿದ್ದೇವೆ. ಇದರಿಂದ ಒಟ್ಟು ಈ ಘಟಕದಲ್ಲಿಯೇ 458 ಎಂಎಲ್‌ಡಿ ನೀರನ್ನು ಸಂಸ್ಕರಿಸಲಿದೆ. ಹೊಸ ಘಟಕ ಬಂದ ಬಳಿಕ ಇದರ ಸಾಮರ್ಥ್ಯ 580 ಎಂಎಲ್‌ಡಿಗೆ ಹೆಚ್ಚಲಿದೆ ಎಂದು ಅವರು ತಿಳಿಸಿದರು.

ಈ ಘಟಕದಿಂದ ಸಂಸ್ಕರಣೆಗೊಂಡ 60 ಎಂಎಲ್‌ಡಿ ನೀರನ್ನು ಬೆಳ್ಳಂದೂರು ಕೆರೆಗೆ ತುಂಬಿಸಲಾಗುತ್ತಿದೆ. ಆದರೆ, ಈ ಸುತ್ತಲಿನ ಕೈಗಾರಿಕೆಗಳು ಹಾಗೂ ಅಪಾರ್ಟ್‌ಮೆಂಟ್‌ಗಳು ಕಡ್ಡಾಯವಾಗಿ ಎಸ್‌ಟಿಪಿ ಅಳವಡಿಸಿಕೊಳ್ಳಬೇಕು. ಈಗಾಗಲೇ ಅಳವಡಿಸಿಕೊಂಡವರು ಅದರ ಬಳಕೆ ಸೂಕ್ತ ರೀತಿಯಲ್ಲಿ ಮಾಡುತ್ತಿಲ್ಲ. ನಿರ್ಲಕ್ಷ್ಯ ಧೋರಣೆ ತೋರಿದರೆ ಅಂಥವರ ವಿರುದ್ಧ ಕ್ರಮ ತೆಗೆದುಕೊಂಡು, ಆ ಸ್ಥಳದಲ್ಲಿ ವಾಸವಿರುವುದಾಗಲಿ ಅಥವಾ ಕೈಗಾರಿಕೆ ಮುಂದುವರೆಸಲು ಅವಕಾಶ ಕೊಡುವುದಿಲ್ಲ. ಜೊತೆಗೆ, ಹೊಸ ಅಪಾರ್ಟ್‌ಮೆಂಟ್‌ನಲ್ಲಿ ಎಸ್‌ಟಿಪಿ ಅವಳಡಿಕೆ ಮಾಡಿಕೊಳ್ಳಬೇಕು. ಬಿಡಿಎ ಅಪಾರ್ಟ್‌ಮೆಂಟ್‌ನಲ್ಲೂ ಇದರ ಬಳಕೆ ಆಗಲೇಬೇಕು. ಎಸ್‌ಟಿಪಿಯನ್ನು ಜಲಮಂಡಳಿಯೇ ನಿರ್ವಹಣೆ ಮಾಡಲಿದೆ ಎಂದು ಹೇಳಿದರು.

ಚೆಲ್ಲಘಟ್ಟ ಘಟಕ ಪ್ರಾರಂಭದ ಸಂದರ್ಭದಲ್ಲಿ ಮಿಷನರಿಗಳು ಇನ್ನೂ ಮೇಲ್ದರ್ಜೆಗೇರಿಸದ ಕಾರಣ ಬೆಳಂದೂರು ಕೆರೆಯಲ್ಲಿ ನೊರೆ ಕಾಣಿಸಿಕೊಂಡಿತ್ತು. ಕೋಲಾರದಲ್ಲಿಯೂ ಪ್ರತಿಭಟನೆ ನಡೆದಿತ್ತು. ಇಂದು ಈ ಸಂಸ್ಕರಣ ಘಟಕದಿಂದ ಕುಡಿಯಲು ಯೋಗ್ಯವಾದ ಮಟ್ಟದಲ್ಲಿ ಶುದ್ಧೀಕರಣ ಮಾಡಲಾಗುತ್ತಿದೆ. ಕೃಷಿ ಹಾಗೂ ಬೆಳೆಗೆ ಯೋಗ್ಯವಾಗುವ ರೀತಿಯಲ್ಲಿ ನೀರನ್ನು ಸಂಸ್ಕರಿಸಲಾಗಿದೆ ಎಂದು ಹೇಳಿದರು.

ಕೆರೆ ತುಂಬಿಸಲಾಗುವುದು: ಸಂಸ್ಕರಣ ಘಟಕದಿಂದ ಶುದ್ಧೀಕರಣಗೊಂಡ ನೀರನ್ನು ಕೆರೆ ತುಂಬಿಸಲು ಬಳಸಲಾಗುತ್ತದೆ. ಈಗಾಗಲೇ 7ಕೆರೆ ತುಂಬಿಸಿದ್ದು, ಆನೇಕಲ್ ಭಾಗಕ್ಕೆ 185 ಎಂಎಲ್‌ಟಿ ನೀರು ನೀಡುವಂತೆ ಕೇಳಿದ್ದಾರೆ. ಬೆಂಗಳೂರಿನಲ್ಲೂ ಕೆರೆ ತುಂಬಿಸುವ ಯೋಜನೆ ಕೈಗೆತ್ತಿಕೊಳ್ಳಲಿದ್ದೇವೆ. ಇದರೊಂದಿಗೆ ಕೈಗಾರಿಕೆಗಳ ಬಳಕೆಗೂ ಇಂತಿಷ್ಟು ಮೊತ್ತ ನಿಗದಿ ಮಾಡಿ ಪೂರೈಕೆ ಮಾಡಲಾಗುವುದು ಎಂದು ಹೇಳಿದರು.

ಚೆಲ್ಲಘಟ್ಟ ಘಟಕದಲ್ಲಿ ಸಂಸ್ಕರಿಸಿದ ತ್ಯಾಜ್ಯ ನೀರಿನಿಂದ ಉಳಿಯುವ ಕೆಸರಿನಿಂದ 1 ಮೆ.ವ್ಯಾ. ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಈ ಘಟಕದಲ್ಲಿ ಬಳಸುವ ವಿದ್ಯುತ್ ಪೈಕಿ ಶೇ.40ರಷ್ಟು ವಿದ್ಯುತ್‌ಅನ್ನು ಇಲ್ಲಿಯೇ ಉತ್ಪಾದಿಸಲಾಗುತ್ತಿದೆ ಎಂದು ಪರಮೇಶ್ವರ್ ಇದೇ ವೇಳೆ ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X