ಸಜೀಪನಡುವಿನಲ್ಲಿ ಸಂಭ್ರಮದ ಈದ್ ಮಿಲಾದ್

ಬಂಟ್ವಾಳ,ನ.20: ಸಜೀಪನಡು ಕೇಂದ್ರ ಜುಮಾ ಮಸೀದಿಯ ವತಿಯಿಂದ ಬಹಳ ಅದ್ದೂರಿಯಾಗಿ ಈದ್ ಮಿಲಾದ್ ಕಾರ್ಯಕ್ರಮವು ಜರುಗಿತು.
ಕಾರ್ಯಕ್ರಮ ಅಂಗವಾಗಿ ನಡೆದ ಬೃಹತ್ ಮೀಲಾದ್ ರ‌್ಯಾಲಿಯು ಬಂಟ್ವಾಳ ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ.ಎಸ್ ಅಬ್ಬಾಸ್ ಹಾಗೂ ಸಜೀಪನಡು ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಹಾಜಿ.ಅಬ್ದುಲ್ ರಝಾಕ್ ಇವರ ನೇತೃತ್ವದಲ್ಲಿ ನಡೆಯಿತು.
ಮೀಲಾದ್ ರ‌್ಯಾಲಿಯಲ್ಲಿ ಕೇಂದ್ರ ಜುಮಾ ಮಸೀದಿಯ ಖತೀಬ್ ಅಶ್ಫಾಕ್ ಫೈಝಿ, ಕಾರ್ಯದರ್ಶಿ ಎಸ್.ಕೆ.ಮುಹಮ್ಮದ್, ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ನಿಕಟಪೂರ್ವ ಉಪಾಧ್ಯಕ್ಷ ಎಸ್.ಅಬೂಬಕ್ಕರ್ ಸಜೀಪ, ಹಿಫ್ಲುಲ್ ಖುರ್ಆನ್ ಸಮಿತಿಯ ಅಧ್ಯಕ್ಷ ಎಸ್.ಪಿ.ಮೊಹಮ್ಮದ್, ನಾಸೀರ್ ಹಾಗೂ ಇನ್ನಿತರ ಗಣ್ಯರು ಭಾಗವಹಿಸಿದ್ದರು.
Next Story