ಚಂಪಾ, ಚೊಕ್ಕಾಡಿ, ಅನಗಳ್ಳಿಗೆ ದೆಹಲಿ ಕರ್ನಾಟಕ ಸಂಘದ ಪ್ರಶಸ್ತಿ

ಮಂಗಳೂರು, ನ.21: ದೆಹಲಿ ಕರ್ನಾಟಕ ಸಂಘದ ಡಾ.ಸರೋಜಿನಿ ಮಹಿಷಿ ಪ್ರಶಸ್ತಿಗೆ ಸಾಹಿತಿ ಚಂದ್ರಶೇಖರ್ ಪಾಟೀಲ್, ಡಾ. ಶಿವರಾಮ ಕಾರಂತ ಪ್ರಶಸ್ತಿಗೆ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಹಾಗೂ ‘ಕನ್ನಡ ಭಾರತಿ ರಂಗ ಪ್ರಶಸ್ತಿ’ಗೆ ಹಿರಿಯ ರಂಗಕರ್ಮಿ ಸುರೇಶ್ ಅನಗಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಅಭಿವೃಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಹಾಗೂ ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ ಅವರನ್ನೊಳಗೊಂಡ ಆಯ್ಕೆ ಸಮಿತಿಯು ಈ ಮೂವರನ್ನು ಆಯ್ಕೆ ಮಾಡಿದೆ.
ಈ ಮೂರು ಪ್ರಶಸ್ತಿಗಳು ತಲಾ 50,000 ರೂ. ನಗದು, ಸ್ಮರಣಿಕೆಯನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ದೆಹಲಿ ಕರ್ನಾಟಕ ಸಂಘದ ಸಭಾಂಗಣದಲ್ಲಿ ಡಿ.16ರಂದು ಆಯೋಜಿಸಲಾಗಿದೆ.
Next Story