Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಮ್ಮು-ಕಾಶ್ಮೀರ ಅಸೆಂಬ್ಲಿ ವಿಸರ್ಜನೆ

ಜಮ್ಮು-ಕಾಶ್ಮೀರ ಅಸೆಂಬ್ಲಿ ವಿಸರ್ಜನೆ

ಪಿಡಿಪಿ-ಕಾಂಗ್ರೆಸ್-ಎನ್‌ಸಿ ಮೈತ್ರಿ ಸರಕಾರ ರಚನೆ ವಿಫಲ

ವಾರ್ತಾಭಾರತಿವಾರ್ತಾಭಾರತಿ21 Nov 2018 10:09 PM IST
share
ಜಮ್ಮು-ಕಾಶ್ಮೀರ ಅಸೆಂಬ್ಲಿ ವಿಸರ್ಜನೆ

  ಶ್ರೀನಗರ, ನ.21: ಜಮ್ಮುಕಾಶ್ಮೀರದ ರಾಜಕೀಯದಲ್ಲಿ ನಡೆದ ನಾಟಕೀಯ ಬೆಳವಣಿಗೆಯೊಂದರಲ್ಲಿ ಪಿಡಿಪಿ ನಾಯಕಿ ಮೆಹಬೂಬ ಮುಫ್ತಿ ಹಾಗೂ ಪೀಪಲ್ಸ್ ಕಾನ್ಫರೆನ್ಸ್ ನ ನಾಯಕ ಸಜ್ಜದ್ ಲೋನ್ ಸರಕಾರ ರಚಿಸುವುದಕ್ಕೆ ಬುಧವಾರ ಪ್ರತ್ಯೇಕವಾಗಿ ಹಕ್ಕು ಮಂಡಿಸಿದ್ದರಾದರೂ ರಾಜ್ಯಪಾಲ ಸತ್ಯಪಾಲ್ ಮಲಿಕ್ ಇಬ್ಬರಿಗೂ ಅವಕಾಶ ನೀಡದೇ ಜಮ್ಮು-ಕಾಶ್ಮೀರ ವಿಧಾನಸಭೆಯನ್ನು ದಿಢೀರ್ ವಿಸರ್ಜಿಸಿದ್ದಾರೆ.

ಈ ಬಗ್ಗೆ ರಾಜ್ಯಪಾಲರ ಕಚೇರಿಯಿಂದ ವಿಧಾನಸಭೆ ವಿಸರ್ಜನೆ ಕುರಿತು ಆದೇಶ ಹೊರಡಿಸಲಾಗಿದ್ದು, ಸರಕಾರ ರಚನೆಗೆ ಶತ ಪ್ರಯತ್ನ ನಡೆಸುತ್ತಿದ್ದ ಕಾಂಗ್ರೆಸ್-ಪಿಡಿಪಿ-ಎನ್‌ಸಿ ಪಕ್ಷಗಳಿಗೆ ಭಾರೀ ಹಿನ್ನಡೆಯುಂಟಾಗಿದೆ.

ಉಮರ್ ಅಬ್ದುಲ್ಲ ನೇತೃತ್ವದ ನ್ಯಾಶನಲ್ ಕಾನ್ಫರೆನ್ಸ್ ಪಕ್ಷದ ಬಾಹ್ಯಬೆಂಬಲ ಪಡೆದು ಕಾಂಗ್ರೆಸ್ ಜೊತೆ ಮೈತ್ರಿ ಸರಕಾರ ರಚಿಸುವುದಕ್ಕೆ ತನಗೆ ಅವಕಾಶ ನೀಡಬೇಕೆಂದು ಕೋರಿ ಪಿಡಿಪಿ ನಾಯಕಿ ಮೆಹಬೂಬ ಮುಫ್ತಿ ಇಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಇದೇ ವೇಳೆಗೆ ಪೀಪಲ್ಸ್ ಕಾನ್ಫರೆನ್ಸ್‌ನ ಸಜ್ಜದ್ ಲೋನೆ ಸಹ ತಮ್ಮ ಬಳಿ ಸರಕಾರ ರಚನೆಗೆ ಹಕ್ಕು ಮಂಡಿಸಿ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಆದರೆ ರಾಜ್ಯಪಾಲರು ವಿಧಾನಸಭೆಯನ್ನು ವಿಸರ್ಜಿಸಿ ಆದೇಶ ಹೊರಡಿಸಿದ್ದಾರೆ. ರಾಜ್ಯಪಾಲರ ಆದೇಶವನ್ನು ನ್ಯಾಷನಲ್ ಕಾನ್ಫರೆನ್ಸ್ ಸ್ವಾಗತಿಸಿದೆ.

 ವಿಧಾನಸಭೆಯಲ್ಲಿ ಸರಕಾರ ರಚನೆಗೆ ಬಹುಮತಕ್ಕೆ 44 ಸ್ಥಾನಗಳು ಅಗತ್ಯವಿದೆ. ವಿಸರ್ಜಿತ ವಿಧಾನಸಭೆಯಲ್ಲಿ ಬಿಜೆಪಿ 25, ಪಿಡಿಪಿ 28, ಎನ್‌ಸಿ 15 ಮತ್ತು ಕಾಂಗ್ರೆಸ್ 12, ಸಿಪಿಎಂ 1 ಹಾಗೂ ಇತರರು 8 ಸ್ಥಾನಗಳನ್ನು ಹೊಂದಿದ್ದರು. ಬಿಜೆಪಿಯ ಮಿತ್ರ ಹಾಗೂ ಪೀಪಲ್ಸ್ ಕಾನ್‌ಫರೆನ್ಸ್(ಪಿಸಿ)ನ ಅಧ್ಯಕ್ಷ ಸಜ್ಜದ್ ಲೋನೆ ಅವರು ಬಿಜೆಪಿ ಮತ್ತು ಪಿಡಿಪಿ ಭಿನ್ನಮತೀಯರ ನೆರವಿನಿಂದ ತೃತೀಯ ರಂಗವೊಂದನ್ನು ಹುಟ್ಟುಹಾಕಿ ಸರಕಾರ ರಚಿಸಲು ಪ್ರಯತ್ನಿಸುತ್ತಿದ್ದಾರೆ ಎಂಬ ವರದಿಗಳ ನಡುವೆಯೇ ಈ ಬೆಳವಣಿಗೆ ನಡೆದಿದೆ.

ಬಿಜೆಪಿಯು ಪಿಡಿಪಿಗೆ ಬೆಂಬಲವನ್ನು ಹಿಂದೆಗೆದುಕೊಂಡ ಮತ್ತು ಮುಖ್ಯಮಂತ್ರಿ ಮೆಹಬೂಬ ರಾಜೀನಾಮೆ ನೀಡಿದ ಬಳಿಕ ಕಳೆದ ಜೂನ್‌ನಲ್ಲಿ ರಾಜ್ಯದಲ್ಲಿ ಎಂಟನೇ ಬಾರಿಗೆ ರಾಷ್ಟ್ರಪತಿ ಆಡಳಿತವು ಜಾರಿಗೊಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X