Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಧರ್ಮಗಳಿಗೆ ಅಗೌರವ ನೀಡುವುದರಿಂದ...

ಧರ್ಮಗಳಿಗೆ ಅಗೌರವ ನೀಡುವುದರಿಂದ ಸಮಾಜದಲ್ಲಿ ಅಶಾಂತಿ ಸೃಷ್ಟಿ: ಮಾಜಿ ಸಚಿವ ಡಾ.ಎ.ಬಿ.ಮಾಲಕರಡ್ಡಿ

ವಾರ್ತಾಭಾರತಿವಾರ್ತಾಭಾರತಿ21 Nov 2018 10:24 PM IST
share

ಯಾದಗಿರಿ, ನ.21: ಯಾವ ಧರ್ಮವೂ ಸಮಾಜದಲ್ಲಿ ಶಾಂತಿ ಕದಡುವಂತೆ ಬೋಧಿಸುವುದಿಲ್ಲ. ಆದರೂ, ಅಶಾಂತಿ ಹೆಚ್ಚುತ್ತಿದೆ. ಸಮಾಜದಲ್ಲಿ ಕೂಡಿ ಬಾಳುವ ಪರಂಪರೆ, ಸೌಹಾರ್ದ ಸಂಸ್ಕೃತಿಯ ಕಣ್ಮರೆ ಸಮಾಜದಲ್ಲಿನ ಅಶಾಂತಿಗೆ ಕಾರಣವಾಗುತ್ತಿದೆ ಎಂದು ಮಾಜಿ ಸಚಿವ ಡಾ.ಎ.ಬಿ.ಮಾಲಕರಡ್ಡಿ ಅಭಿಪ್ರಾಯಪಟ್ಟಿದ್ದಾರೆ. 

ಬುಧವಾರ ಯಾದಗಿರಿ ನಗರದ ಮೈಲಾಪುರ ಅಗಸಿಯಲ್ಲಿ ತಂಜೀಮುಲ್ ಮುಸ್ಲಿಮಿನ್ ಹಾಗೂ ಬೈತುಲ್ ಮಾಲ್ ವತಿಯಿಂದ ಈದ್ ಮಿಲಾದ್ ಹಬ್ಬದ ಅಂಗವಾಗಿ ಸಮಾಜದ ಮುಖಂಡರಿಗೆ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಅನೇಕ ಮಹಿನೀಯರು ನೆಲೆಸಿದ್ದ ಭರತ ಭೂಮಿಯಲ್ಲೇಕೆ ಅಶಾಂತಿ ಹರಡುತ್ತಿದೆ. ನಮ್ಮ ಹಿರಿಯರು ಶಾಂತಿ ನೆಲೆಸಲು ಅನುಸರಿಸಿದ್ದ ಮಾರ್ಗ ಯಾವುದು ಎಂಬ ಕುರಿತು ಚಿಂತನ ಮಂಥನ ನಡೆಸಬೇಕಿದೆ ಎಂದರು.

ಧರ್ಮಗಳನ್ನು ಅಗೌರವಿಸುವುದರಿಂದ, ಸಮಾಜದಲ್ಲಿ ಅಶಾಂತಿ ಸೃಷ್ಟಿಸುವುದರಿಂದ ಯಾರಿಗೆ ಲಾಭವಾಗಿದೆಯೋ ಯಾರಿಗೂ ಗೊತ್ತಿಲ್ಲ. ಆದರೆ, ಇಂತಹ ಕೃತ್ಯಗಳಿಂದ ಪರಸ್ಪರ ಪ್ರೀತಿ, ಸೌಹಾರ್ದತೆ, ಆತ್ಮೀಯತೆ ಕುಸಿದು ದ್ವೇಷಾಸೂಯೆ ಮಾತ್ರ ಹೆಚ್ಚಿದೆ. ಇದರಿಂದ ಸಮಾಜದ ಸ್ವಾಸ್ಥ್ಯ ಹದಗೆಟ್ಟಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಪ್ರವಾದಿ ಮಹಮ್ಮದ್ ಪೈಗಂಬರ್ ಎಲ್ಲರಿಗೂ ಸಮಾನತೆ ಸಿಗಬೇಕು ಎಂದು ಹೋರಾಟ ನಡೆಸಿದ್ದರು. ಅವರ ತತ್ವಾದರ್ಶ ಅಳವಡಿಸಿಕೊಂಡು ಎಲ್ಲ ಧರ್ಮದವರು ಶಾಂತಿ, ಸಹಬಾಳ್ವೆ ಮತ್ತು ಸೌಹಾರ್ದತೆಯಿಂದ ಕೂಡಿ ಬಾಳುವ ಪರಂಪರೆ ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

ಶಾಸಕ ನಾಗನಗೌಡ ಕಂದಕೂರು ಮಾತನಾಡಿ, ಜಾತಿ, ಧರ್ಮ ಇಂದು ನಿನ್ನೆ ಹುಟ್ಟಿಲ್ಲ, ಮಾನವನ ನಾಗರಿಕತೆ ಹುಟ್ಟಿನಿಂದಲೂ ಇದೆ. ಆದರೆ, ಸಮಾಜದಲ್ಲಿ ಜಾತಿ, ಧರ್ಮಗಳು ಪ್ರಾಧಾನ್ಯತೆ ಪಡೆಯುತ್ತಿವೆ. ಸರ್ವ ಧರ್ಮಗಳಡಿ ವೈವಿಧ್ಯ ಆಚರಣೆಗಳನ್ನು ಹಮ್ಮಿಕೊಳ್ಳುತ್ತಾ ಸಾಮರಸ್ಯದಿಂದ ಬದುಕಿದ್ದ ಸಮಾಜಕ್ಕೆ ಇಂದು ಏನಾಗಿದೆ. ಸರ್ವರನ್ನು, ಸಮಸ್ತ ಧರ್ಮ, ಆಚರಣೆಗಳನ್ನು ನಾವು ಗೌರವಿಸುವುದನ್ನು ಕಲಿಯಬೇಕು ಎಂದು ಹೇಳಿದರು.

ಮುಸ್ಲಿಂ ಧರ್ಮಗುರು ಮೌಲಾನಾ ನಿಜಾಮುದ್ದೀನ್ ಮಾತನಾಡಿ, ಮಾನವರಲ್ಲಿ ಸಮಾನತೆ ಮತ್ತು ಜೀವನದಲ್ಲಿ ಪ್ರಾಮಾಣಿಕತೆ ಕುರಿತು ಪ್ರವಾದಿ ಮಹಮದ್ ಪೈಗಂಬರ್ ಜಗತ್ತಿಗೆ ಸಾರಿದ ಸಂದೇಶ ಸರ್ವ ಕಾಲಕ್ಕೂ ಪ್ರಸ್ತುತ. ಆ ಸನ್ಮಾರ್ಗದಲ್ಲಿ ನಾವುಗಳು ಹೆಜ್ಜೆ ಹಾಕಬೇಕಿದೆ ಎಂದರು.

ಶಾಸಕ ನಾಗನಗೌಡ ಕಂದಕೂರ, ಚನ್ನಾರೆಡ್ಡಿ ಪಾಟೀಲ್ ತುನ್ನೂರು, ಸಿದ್ದಪ್ಪಹೊಟ್ಟಿ, ಮರೆಪ್ಪಈಟೆ, ಮಲ್ಲಣ್ಣ ದಾಸನಕೇರಿ, ಎಂ.ಕೆ.ಬಿರನೂರ, ಶ್ರೀನಿವಾಸರೆಡ್ಡಿ ಕಂದಕೂರ ಅವರನ್ನು ಸನ್ಮಾನಿಸಲಾಯಿತು.

ಇಸ್ಲಾಂ ಧರ್ಮದ ಪುಣ್ಯ ಕ್ಷೇತ್ರಗಳಾದ ಮಕ್ಕಾ ಮತ್ತು ಮದೀನಾದ ಮಾದರಿಗಳನ್ನು ತಯಾರಿಸಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯುದ್ದಕ್ಕೂ ಧರ್ಮ ಗುರುಗಳಿಂದ ಧಾರ್ಮಿಕ ಪಠಣ ಗಮನ ಸೆಳೆಯಿತು. ಮುಸ್ಲಿಂ ಸಮಾಜದ ಮುಖಂಡರಾದ ಲಾಯಕ್ ಬಾದಲ್ ಹುಸೇನ್, ಜಿನಾಲಿ ಅಫಘಾನಿ, ಮನಸೂರ್ ಅಫಖಾನ್, ಮಹಮ್ಮದ್ ಇಸಾಖ್, ಶೇಖ್ ಜಕಿಯುದ್ದೀನ್, ನಗರಸಭೆ ಸದಸ್ಯ ಮನ್ಸೂರ್, ಸಾಜೀದ್ ಹಯಾತೆ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X