Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೀ ಟೂ ಪ್ರಕರಣ: ಬಿಸಿಸಿಐ ಸಿಇಒ ದೋಷಮುಕ್ತ

ಮೀ ಟೂ ಪ್ರಕರಣ: ಬಿಸಿಸಿಐ ಸಿಇಒ ದೋಷಮುಕ್ತ

ವಾರ್ತಾಭಾರತಿವಾರ್ತಾಭಾರತಿ21 Nov 2018 10:36 PM IST
share
ಮೀ ಟೂ ಪ್ರಕರಣ: ಬಿಸಿಸಿಐ ಸಿಇಒ ದೋಷಮುಕ್ತ

ಹೊಸದಿಲ್ಲಿ, ನ.21: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸಿಇಒ ರಾಹುಲ್ ಜೋಹ್ರಿಯನ್ನು ಮೀ ಟೂ ಆರೋಪದ ಕಳಂಕದಿಂದ ಮುಕ್ತಗೊಳಿಸಿರುವ ಮೂವರು ಸದಸ್ಯರ ತನಿಖಾ ಸಮಿತಿ, ಜೋಹ್ರಿ ವಿರುದ್ಧದ ಆರೋಪ ಕಲ್ಪಿತ ಹಾಗೂ ದುರುದ್ದೇಶ ಪೂರಿತವಾಗಿದೆ ಎಂದು ತಿಳಿಸಿದೆ.

 ಅಲ್ಲದೆ ಕಳೆದ ಮೂರು ವಾರದಿಂದ ಕಡ್ಡಾಯ ರಜೆಯಲ್ಲಿ ತೆರಳಿರುವ ಜೋಹ್ರಿ ತನ್ನ ಕೆಲಸ ಮುಂದುವರಿಸಬಹುದು ಎಂದು ಸಮಿತಿಯ ವರದಿಯಲ್ಲಿ ತಿಳಿಸಲಾಗಿದೆ. ಸಮಿತಿಯ ವರದಿಯನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾಗುವುದು.

ಜೋಹ್ರಿ ಈ ಹಿಂದೆ ಉದ್ಯೋಗಿಯಾಗಿದ್ದ ಸ್ಥಳದಲ್ಲಿ ತಾನು ಅವರ ಸಹೋದ್ಯೋಗಿಯಾಗಿದ್ದೆ ಎಂದು ಟ್ವಿಟರ್‌ನಲ್ಲಿ ಹೇಳಿಕೊಂಡಿದ್ದ ಅನಾಮಧೇಯ ವ್ಯಕ್ತಿಯೊಬ್ಬರು, ಆಗ ಜೋಹ್ರಿ ತನಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಇ-ಮೇಲ್ ಮೂಲಕ ದೂರು ನೀಡಿದ್ದರು. ಬಳಿಕ ಈ ಇ-ಮೇಲ್ ದೂರನ್ನು ಅಳಿಸಲಾಗಿತ್ತು.

ಇದಾದ ಬಳಿಕ ಇನ್ನೆರಡು ದೂರು ಕೇಳಿಬಂದಿತ್ತು. ಸಿಂಗಾಪುರ ಮೂಲದ ಪತ್ರಕತೆರ್ಯೊಬ್ಬರು ಹಾಗೂ ಜೋಹ್ರಿಯೊಂದಿಗೆ ಈ ಹಿಂದಿನ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸಿದ್ದ ಮಹಿಳೆಯೊಬ್ಬರು ದೂರು ನೀಡಿದ್ದರು. ಇವರನ್ನು ಸ್ಕೈಪ್ ಮೂಲಕ ವೀಡಿಯೊ ಸಂವಾದ ನಡೆಸಿ ತನಿಖಾ ಸಂಸ್ಥೆ ವಿಚಾರಣೆಗೊಳಪಡಿಸಿತ್ತು.

ಕ್ರಿಕೆಟ್ ಆಡಳಿತ ಸಮಿತಿ(ಸಿಒಎ) ನಿವೃತ್ತ ನ್ಯಾಯಾಧೀಶ ರಾಕೇಶ್ ಶರ್ಮ ನೇತೃತ್ವದಲ್ಲಿ ರಚಿಸಿರುವ ತನಿಖಾ ಸಮಿತಿಯಲ್ಲಿ ದಿಲ್ಲಿ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಬರ್ಖಾ ಸಿಂಗ್, ವಕೀಲೆ ಮತ್ತು ಸಾಮಾಜಿಕ ಕಾರ್ಯಕರ್ತೆ ವೀಣಾ ಗೌಡ ಸದಸ್ಯೆಯಾಗಿದ್ದಾರೆ.

ದೂರುದಾರರಲ್ಲಿ ಒಬ್ಬರ ಜೊತೆ ಬರ್ಮಿಂಗ್ಹಾಮ್‌ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಸಂದರ್ಭ ಜೋಹ್ರಿ ಅನುಚಿತವಾಗಿ ವರ್ತಿಸಿದ್ದರು ಎಂಬ ದೂರಿನ ಹಿನ್ನೆಲೆಯಲ್ಲಿ ಜೋಹ್ರಿಯನ್ನು ಲಿಂಗ ಸಂವೇದನೆಯ ಆಪ್ತ ಸಮಾಲೋಚನೆಗೆ ಒಳಪಡಿಸಬೇಕು ಎಂದು ವೀಣಾ ಗೌಡ ಒತ್ತಾಯಿಸಿದ್ದರು.

 ಈ ಮಧ್ಯೆ, ಸಮಿತಿಯ ವರದಿಯನ್ನು ಬುಧವಾರ ಪ್ರಕಟಿಸಬಾರದು. ಈ ವರದಿಯನ್ನು ಅಧ್ಯಯನ ನಡೆಸಲು ಕೆಲ ದಿನ ಬೇಕಾಗುತ್ತದೆ ಎಂದು ಸಿಒಎ ಸದಸ್ಯೆ ಡಯಾನ ಎಡುಲ್ಜಿ ಹೇಳಿದರು. ಇದಕ್ಕೆ ಸಿಒಎ ಒಪ್ಪಲಿಲ್ಲ.

ತನಿಖಾ ಸಮಿತಿಯ ಅಗತ್ಯವಿಲ್ಲ. ಜೋಹ್ರಿಯನ್ನು ತಕ್ಷಣವೇ ವಜಾಗೊಳಿಸಬೇಕು ಎಂದು ಈ ಹಿಂದೆ ಡಯಾನಾ ವಾದಿಸಿದ್ದರು. ಆದರೆ ಸಾಮಾಜಿಕ ನ್ಯಾಯದ ಆಧಾರದಲ್ಲಿ ತನಿಖೆಗೆ ಆದೇಶಿಸುವುದಾಗಿ ಸಿಒಎ ಅಧ್ಯಕ್ಷ ವಿನೋದ್ ರಾಯ್ ತಿಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X